ವರದಿ ಮತ್ತು ಫೋಟೋ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552
ಚಿತ್ರದುರ್ಗ: ಪರೀಕ್ಷೆಯಲ್ಲಿ ಅಂಕಗಳನ್ನು ಗಳಿಸಿ ಸಫಲರಾಗುವುದರ ಜೊತೆಗೆ ನಿಶ್ಚಿತ ಗುರಿಯೊಂದಿಗೆ ಯಾವುದೇ ಪ್ರಭಾವಕ್ಕೆ ಒಳಗಾಗದೆ ನಿಮ್ಮ ಭಾವನೆಗಳ ಜೊತೆ ಸಾಗಿ ಸತ್ಪ್ರೆಜೆಗಳಾಗುವಂತೆ ತುಮಕೂರು ವಿಶ್ವವಿದ್ಯಾನಿಲಯ ಕುಲಪತಿ ಎಂ.ವೆಂಕಟೇಶ್ವರುಲು ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಆರ್ಯವೈಶ್ಯ ಅಧಿಕಾರಿಗಳ ಹಾಗೂ ವೃತ್ತಿನಿರತರ ಸಂಘ ಚಿತ್ರದುರ್ಗದ ವತಿಯಿಂದ ನಗರದ ವಾಸವಿ ವಿದ್ಯಾಸಂಸ್ಥೆಯಲ್ಲಿ ಭಾನುವಾರ ಆಯೋಜಿಸಲಾಗಿದ್ದ ಎಸ್.ಎಸ್.ಎಲ್.ಸಿ.ಮತ್ತು ಪಿ.ಯು.ಸಿ.ಯಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಗಾಂಧಿ ಮತ್ತು ಲಾಲ್‍ಬಹದ್ದೂರ್‍ಶಾಸ್ತ್ರಿರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು.
ಶಿಕ್ಷಣದ ಜೊತೆಗೆ ಗುರು-ಹಿರಿಯರು ಹಾಗೂ ತಂದೆ ತಾಯಿಗಳನ್ನು ಗೌರವದಿಂದ ಕಾಣುವ ಉತ್ತಮ ಸಂಸ್ಕಾರ ಸಂಸ್ಕøತಿಯನ್ನು ಕಲಿಯಿರಿ. ವಿದ್ಯಾರ್ಥಿ ಜೀವನದಲ್ಲಿ ಎದುರಾಗಬಹುದಾದ ಎಡರು ತೊಡರು ಸಮಸ್ಯೆಗಳನ್ನು ಧೈರ್ಯದಿಂದ ಎದುರಿಸುವ ಸಾಮಥ್ರ್ಯ ಬೆಳೆಸಿಕೊಂಡರೆ ಜಯ ನಿಶ್ಚಿತ. ಅದಕ್ಕೆ ನಾನೇ ಸಾಕ್ಷಿ ಎಂದು ಹೇಳಿದರು.
ಪ್ರೊ.ಟಿ.ವಿ.ಸುರೇಶ್‍ಗುಪ್ತ ಮಾತನಾಡಿ ಐತಿಹಾಸಿಕ ಚಿತ್ರದುರ್ಗದ ಕೋಟೆ ನಾಡಿನ ಹತ್ತಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಬಾರಿಯ ಹತ್ತನೆ ತರಗತಿ ಪರೀಕ್ಷೆಯಲ್ಲಿ ಶೇ.ನೂರಕ್ಕೆ ನೂರರಷ್ಟು ಅಂಕಗಳನ್ನು ಪಡೆದು ಇತಿಹಾಸ ಸೃಷ್ಠಿಸಿದ್ದಾರೆ. ಪ್ರತಿ ವರ್ಷವೂ ಇಂತಹ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ಸನ್ಮಾನಿಸಲಾಗುತ್ತಿದೆ ಎಂದು ತಿಳಿಸಿದರು.
ಕರ್ನಾಟಕ ಆವೋಪಗಳ ರಾಜ್ಯ ಒಕ್ಕೂಟದ ಅಧ್ಯಕ್ಷ ತುಮಕೂರಿನ ಡಿ.ಸುಬ್ರಮಣ್ಯಶೆಟ್ಟಿ ಮಾತನಾಡುತ್ತ ಅಂಕಗಳನ್ನು ಗಳಿಸುವುದರ ಜೊತೆಗೆ ಭಾರತೀಯ ಸಂಸ್ಕøತಿಯ ಮೌಲ್ಯಗಳನ್ನು ಮರೆಯದೆ ಅನುಷ್ಠಾನಕ್ಕೆ ತನ್ನಿ. ಪೋಷಕರು ತಮ್ಮ ಮಕ್ಕಳ ಶಿಕ್ಷಣಕ್ಕೆ ಪೂರಕವಾದ ವಾತಾವರಣ ಕಲ್ಪಿಸಬೇಕೆಂದು ಮನವಿ ಮಾಡಿದರು.
ಡಿಸ್ಟ್ರಿಕ್ಟ್ ಪಬ್ಲಿಕ್ ಇಮೇಜ್ ಚೇರ್ಮನ್ ಎಂ.ಕೆ.ರವೀಂದ್ರ ಮಾತನಾಡಿ ಪರೀಕ್ಷೆಯಲ್ಲಿ 625 ಕ್ಕೆ 625 ಅಂಕಗಳನ್ನು ಪಡೆದವರು ಮುಂದೆ ತಮ್ಮ ಜೀವನದ ಪರೀಕ್ಷೆಯಲ್ಲಿಯೂ ಯಶಸ್ಸು ಸಾಧಿಸಬೇಕು. ಮಕ್ಕಳಿಗೆ ಯಾವ ವಿಷಯದಲ್ಲಿ ಆಸಕ್ತಿಯಿದೆ ಎನ್ನುವುದನ್ನು ತಿಳಿದುಕೊಂಡು ಪೋಷಕರು ಬೆಂಬಲಿಸಬೇಕು. ಯಾವುದೇ ಕಾರಣಕ್ಕೂ ಒತ್ತಡ ಹಾಕಬಾರದು. ಇದರಿಂದ ಮುಂದೆ ಭವಿಷ್ಯಕ್ಕೆ ಅಡ್ಡಿಯಾದರೂ ಆಗಬಹುದು ಎಂದು ಹೇಳಿದರು.
ವಾಸವಿ ಬ್ಲಡ್ ಬ್ಯಾಂಕ್‍ನ ಡಾ.ಟಿ.ಕೆ.ಶ್ರೀನಿವಾಸಶೆಟ್ಟಿ ಮಾತನಾಡುತ್ತ ಹೆಚ್ಚಿನ ಅಂಕಗಳನ್ನು ಗಳಿಸುವುದೇ ಮುಖ್ಯವಲ್ಲ. ಸಮಾಜಕ್ಕೆ ಕಂಟಕ, ಸಮಾಜಘಾತುಕರಾಗಬೇಡಿ. ಮುಂದಿನ ವಿದ್ಯಾಭ್ಯಾಸದಲ್ಲಿಯೂ ಇದೆ ರೀತಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿ ಗುರುಗಳು ಹಾಗೂ ತಂದೆ ತಾಯಿಗಳಿಗೆ ಕೀರ್ತಿ ತನ್ನಿ ಎಂದು ಪ್ರತಿಭಾವಂತ ವಿದ್ಯಾರ್ಥಿಗಳನ್ನು ಹಾರೈಸಿದರು.
ಕರ್ನಾಟಕ ಆರ್ಯವೈಶ್ಯ ಮಹಾಸಭೆ ನಿರ್ದೇಶಕ ಎಲ್.ಆರ್.ವೆಂಕಟೇಶ್‍ಕುಮಾರ್ ಮಾತನಾಡಿ ಪ್ರತಿಭಾವಂತ ವಿದ್ಯಾರ್ಥಿಗಳು ತಮ್ಮ ಶಿಕ್ಷಣದ ಮೂಲಕ ದೇಶಕ್ಕೆ ಹಿರಿಮೆ ತನ್ನಿ. ಅಮರಜ್ಯೋತಿ ಯೋಜನೆಯನ್ನು ಆರ್ಯವೈಶ್ಯ ಮಹಾಸಭೆ ಹಮ್ಮಿಕೊಂಡಿದೆ ಎಲ್ಲರೂ ತಪ್ಪದೆ ಸದಸ್ಯರುಗಳಾಗಿ ಸಹಕಾರ ಕೊಡಿ. ಸರ್ಕಾರದಿಂದ ಆರ್ಯವೈಶ್ಯ ಜನಾಂಗಕ್ಕೆ ಹೆಚ್ಚಿನ ನೆರವು ಸಿಗುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ವಾಸವಿ ವಿದ್ಯಾಸಂಸ್ಥೆ ಅಧ್ಯಕ್ಷ ಎಸ್.ಎ.ಸತ್ಯನಾರಾಯಣಶೆಟ್ಟಿ ಮಾತನಾಡುತ್ತ ಆರ್ಯವೈಶ್ಯ ಜನಾಂಗದಿಂದ ಎಲ್ಲಾ ಜಾತಿಯ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸುವ ಮೂಲಕ ಪ್ರೋತ್ಸಾಹ ಕೊಡುತ್ತಿದ್ದೇವೆ. ಅಂಕಗಳ ಗಳಿಕೆ ಜೊತೆಗೆ ಜೀವನದಲ್ಲಿ ಒಳ್ಳೆಯ ಸಂಸ್ಕಾರವಂತರಾಗಬೇಕು. ಯುವ ಪೀಳಿಗೆ ದುಶ್ಚಟಗಳಿಗೆ ಬಲಿಯಾಗದ ಶಿಕ್ಷಣದ ಕಡೆ ಗಮನ ಕೊಡಿ ಎಂದು ಮನವಿ ಮಾಡಿದರು.
ಆರ್ಯವೈಶ್ಯ ವಿದ್ಯಾಭಿವೃದ್ದಿ ಸಂಘದ ಅಧ್ಯಕ್ಷ ಹೆಚ್.ಎನ್.ರಾಮಮೂರ್ತಿ ಮಾತನಾಡಿ ವಿದ್ಯೆಯಿಂದ ಮಾತ್ರ ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು. ಏಕೆಂದರೆ ವಿದ್ಯೆಗೆ ಅಂತಹ ಶಕ್ತಿಯಿದೆ. ತಂದೆ ತಾಯಿ, ಗುರು ಹಿರಿಯರು, ಸಮಾಜಕ್ಕೆ ಒಳ್ಳೆಯ ಹೆಸರು ತನ್ನಿ ಎಂದು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ತಿಳಿಸಿದರು.
ಆರ್ಯವೈಶ್ಯ ಅಧಿಕಾರಿಗಳ ಹಾಗೂ ವೃತ್ತಿನಿರತರ ಸಂಘದ ಅಧ್ಯಕ್ಷ ಪಿ.ಎನ್.ಮೋಹನ್‍ಕುಮಾರ್‍ಗುಪ್ತ ಅಧ್ಯಕ್ಷತೆ ವಹಿಸಿದ್ದರು.
ಕರ್ನಾಟಕ ಆವೋಪಗಳ ರಾಜ್ಯ ಒಕ್ಕೂಟದ ಹಿರಿಯ ಉಪಾಧ್ಯಕ್ಷ ಎಸ್.ಎಲ್.ಕೋರಾ, ಆರ್ಯವೈಶ್ಯ ಸಂಘದ ಅಧ್ಯಕ್ಷ ಎಲ್.ಇ.ಶ್ರೀನಿವಾಸಬಾಬು ವೇದಿಕೆಯಲ್ಲಿದ್ದರು.