ಚಿತ್ರದುರ್ಗ, (ಜೂ.21) : ನಗರದ ಪ್ರತಿಷ್ಠಿತ ವಿದ್ಯಾ ವಿಕಾಸ ವಿದ್ಯಾ ಸಂಸ್ಥೆಯಲ್ಲಿ 8 ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಸಂಸ್ಥೆಯ ಕಾರ್ಯದರ್ಶಿ ಬಿ. ವಿಜಯ್ ಕುಮಾರ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ, ಸಕಲ ರೋಗಗಳಿಗೂ ಯೋಗ ಮದ್ದು. ಯೋಗ ಮಾಡಿ, ನಿರೋಗಿಯಾಗಿ. ವಿಶ್ವಕ್ಕೆ ಯೋಗ ಗುರು ಎಂದರೆ ಭಾರತ, ಇದು ಭಾರತೀಯರಾದ ನಮ್ಮೆಲ್ಲರಿಗೂ ಹೆಮ್ಮೆಯ ಸಂಗತಿ. ‘ಯೋಗ’ ಇದು ಮೂಲತಃ ಭಾರತದ ಪಾರಂಪರಿಕ ದೈಹಿಕ ಅಭ್ಯಾಸವಾಗಿದ್ದು, ಮನುಷ್ಯನ ಸ್ವಾಸ್ಥ್ಯವನ್ನು ಕಾಪಾಡಿಕೊಳ್ಳುವಲ್ಲಿ ಪೂರ್ವಜರು ಹಾಕಿಕೊಟ್ಟ ಬುನಾದಿಯಾಗಿದೆ.
ಪ್ರಸ್ತುತ ದೇಶದ ಪ್ರಧಾನಿಯವರು ಯೋಗವನ್ನು ಅಂತಾರಾಷ್ಟ್ರೀಯ ದಿನವನ್ನಾಗಿ ದೃಢೀಕರಿಸುವುದರ ಮೂಲಕ ಪ್ರಪಂಚದ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದ್ದಾರೆ. ಯೋಗ ಕಲಿಕೆ ಮತ್ತು ಅಭ್ಯಾಸ ಕೇವಲ ಜೂನ್ 21ಕ್ಕೆ ಸೀಮಿತವಾಗದೇ ನಿರಂತರವಾಗಿರಲಿ ನೀವು ಕಲಿಯಿರಿ ಮತ್ತು ಕಲಿಸಿರಿ ಎಂದು ಯೋಗದ ಮಹತ್ವವನ್ನು ಕುರಿತು ತಿಳಿಸಿದರು.
ಜೂನ್ 21ರ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯು ಯಶಸ್ವಿಯಾಗುವಲ್ಲಿ ಯೋಗ ಶಿಕ್ಷಕಿಯಾದ ಶ್ರೀಮತಿ ಸುನಿತಾ ಒಂದು ವಾರಗಳ ಕಾಲ ನಿರಂತರ ಅಭ್ಯಾಸದಿಂದ ಮಕ್ಕಳು ವ್ಯವಸ್ಥಿತವಾಗಿ ವಿವಿಧ ಆಸನಗಳನ್ನು ಮತ್ತು ಭಂಗಿಗಳನ್ನು ಮಕ್ಕಳು ಉತ್ಸಾಹದಿಂದ ಭಾಗವಹಿಸಿದ್ದರು.
ಯೋಗ ಶಿಕ್ಷಕಿಯಾದ ಶ್ರೀಮತಿ ಸುನಿತಾ ಇವರಿಗೆ ಸಂಸ್ಥೆಯ ವತಿಯಿಂದ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಶಾಲಾಮುಖ್ಯೋಪಾಧ್ಯಾಯರಾದ ಸಂಪತ್ ಕುಮಾರ್ ಸಿ.ಡಿ, ಕ್ಯಾಂಪಸ್ ಇನ್ಚಾರ್ಜ್ ಪೃಥ್ವೀಶ್ ಎಸ್.ಎಂ, ಹೆಡ್ ಕೋ-ಆರ್ಡಿನೇಟರ್ ಬಸವರಾಜಯ್ಯ ಉಪಸ್ಥಿತರಿದ್ದರು.
ಸುದ್ದಿಒನ್, ಚಿತ್ರದುರ್ಗ, ಜನವರಿ. 31 : ಬೆಳ್ಳಂಬೆಳಗ್ಗೆಯೇ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟ ಅಧಿಕಾರಿಗಳಿಗೆ ಚಳಿಯಲ್ಲೂ ಬೆವರುವಂತೆ ಮಾಡಿದ್ದಾರೆ. ಬೆಂಗಳೂರು, ರಾಯಚೂರು,…
ಇಂದಿನಿಂದ ಬಜೆಟ್ ಅಧಿವೇಶನ ಆರಂಭವಾಗಲಿದೆ. ಬೆಳಗ್ಗೆ 11 ಗಂಟೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮಾ ಅವರು ಜಂಟಿ ಅಧಿವೇಶನ ಉದ್ದೇಶಿಸಿ…
ಸುದ್ದಿಒನ್ :ಮಕ್ಕಳಿಗೆ ಟೀ ಮತ್ತು ಕಾಫಿ ಕೊಡುವ ಮೊದಲು ತಿಳಿದುಕೊಳ್ಳಬೇಕಾದ ಕೆಲವು ವಿಷಯಗಳಿವೆ. ಚಿಕ್ಕ ವಯಸ್ಸಿನಲ್ಲಿ ಚಹಾ ಅಥವಾ ಕಾಫಿ…
ಈ ರಾಶಿಯ ದಂಪತಿಗಳಿಗೆ ಅತಿಯಾದ ಕಿರುಕುಳದಿಂದ ಜಿಗುಪ್ಸೆ, ಶುಕ್ರವಾರದ ರಾಶಿ ಭವಿಷ್ಯ 31 ಜನವರಿ 2025 - ಸೂರ್ಯೋದಯ -…
ದಾವಣಗೆರೆ: ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಕಾಟಕ್ಕೆ ರಾಜ್ಯದಲ್ಲಿ ಜೀವ ಕಳೆದುಕೊಂಡವರು ಅದೆಷ್ಟೋ. ಇದಕ್ಕೆ ಕಡಿವಾಣ ಹಾಕುವುದಕ್ಕೆ ಸರ್ಕಾರ ಕೂಡ ಸಭೆಗಳನ್ನ…
ಚಿತ್ರದುರ್ಗ. ಜ.30: ಮಹಾತ್ಮಾ ಗಾಂಧೀಜಿಯವರು ಹುತಾತ್ಮರಾದ ದಿನವಾದ ಜ. 30 ರಂದು ಸರ್ವೋದಯ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಈ ನಿಮಿತ್ತ ಅಪರ…