Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಜ.17ರಂದು ವಿದ್ಯಾವಿಕಾಸ ವಿದ್ಯಾಸಂಸ್ಥೆಯ ಶಾಲಾ ವಾರ್ಷಿಕೋತ್ಸವ-ವಿಜಯೋತ್ಸವ

---Advertisement---

ಚಿತ್ರದುರ್ಗ: ನಗರದ ವಿದ್ಯಾವಿಕಾಸ ವಿದ್ಯಾಸಂಸ್ಥೆ ವತಿಯಿಂದ ಇದೇ ಜನವರಿ 17ರಂದು ಸಂಜೆ 4.30ಕ್ಕೆ ನಗರದ ಚಳ್ಳಕೆರೆ ರಸ್ತೆಯ ಎಸ್.ಜಿ.ಕಲ್ಯಾಣ ಮಂಟಪದಲ್ಲಿ “ವಿದ್ಯಾವಿಕಾಸ ವಿದ್ಯಾಸಂಸ್ಥೆಯ ಶಾಲಾ ವಾರ್ಷಿಕೋತ್ಸವ-37ನೇ ವರ್ಷಾಚರಣೆಯ ವಿಜಯೋತ್ಸವ” ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಮುಖ್ಯ ಅತಿಥಿಗಳಾಗಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಭಾಗಹಿಸುವರು. ಗೌರವ ಅತಿಥಿಗಳಾಗಿ ಧಾರವಾಡದ ವಿಸ್ತಾರ್ ಜಿಂದಗಿ ಹ್ಯೂಮನ್ ಮೈಂಡ್ಸೆಟ್ ಕೋಚ್ ಮಹೇಶ್ ಮಸಾಲ್, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಂ.ಆರ್.ಮಂಜುನಾಥ್ ಭಾಗವಹಿಸುವರು. ವಿದ್ಯಾವಿಕಾಸ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಬಿ.ವಿಜಯ ಕುಮಾರ್ ಅಧ್ಯಕ್ಷತೆ ವಹಿಸುವರು. ವಿದ್ಯಾವಿಕಾಸ ವಿದ್ಯಾಸಂಸ್ಥೆಯ ನಿರ್ದೇಶಕಿ ಸುನೀತಾ ವಿಜಯ ಕುಮಾರ್, ವ್ಯವಸ್ಥಾಪಕ ನಿರ್ದೇಶಕ ಎಸ್.ಎಂ.ಪೃಥ್ವೀಶ, ಪ್ರಾಂಶುಪಾಲ ಪಿ.ಬಸವರಾಜಯ್ಯ, ಮುಖ್ಯ ಶಿಕ್ಷಕ ಎನ್.ಜಿ.ತಿಪ್ಪೇಸ್ವಾಮಿ ಉಪಸ್ಥಿತವಹಿಸುವರು.

 

ವಿಜಯೋತ್ಸವ ಕಾರ್ಯಕ್ರಮದಲ್ಲಿ ವಿದ್ಯಾವಿಕಾಸ ವಿದ್ಯಾಸಂಸ್ಥೆಯ ಹಳೆಯ ವಿದ್ಯಾರ್ಥಿ ಹಾಗೂ ವಿಶೇಷ ಸಾಧನೆ ಮಾಡಿದ ನ್ಯೂರೋಲಾಜಿಸ್ಟ್ ಡಾ.ಕಿರಣ್ ಗೌಡ ಅವರಿಗೆ ಹಾಗೂ ಹಿಂದಿನ ವರ್ಷಗಳಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ ವಿದ್ಯಾವಿಕಾಸ ಸಂಸ್ಥೆಯ ವಿದ್ಯಾರ್ಥಿಗಳಾದ ಕಲ್ಯಾಣ ಬಾಬು, ಹೆಚ್.ವಿ.ಸಮನಾ, ಡಿ.ಎಸ್.ದಿಷಾ ಅವರಿಗೆ “ವಿದ್ಯಾವಿಕಾಸ ರತ್ನ” ಪ್ರಶಸ್ತಿ ಪ್ರದಾನ ಮಾಡಲಾಗುವುದು. ನಂತರ ಶಾಲೆಯ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ವಿದ್ಯಾವಿಕಾಸ ವಿದ್ಯಾಸಂಸ್ಥೆ ಪ್ರಕಟಣೆ ತಿಳಿಸಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now