Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ ಸೈನ್ಸ್ ಫೌಂಡೇಶನ್‌ನಿಂದ ‘ವಿಜ್ಞಾನ ರತ್ನ’ ಪ್ರಶಸ್ತಿ ಘೋಷಣೆ; 6 ಶಿಕ್ಷಕರಿಗೆ ಗೌರವ

---Advertisement---

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 04 : ವಿಜ್ಞಾನ ಶಿಕ್ಷಕರ ಸಾಧನೆಯನ್ನು ಗುರುತಿಸಿ ಪ್ರೋತ್ಸಾಹಿಸುವ ಉದ್ದೇಶದಿಂದ ಚಿತ್ರದುರ್ಗ ಸೈನ್ಸ್ ಫೌಂಡೇಶನ್ ಪ್ರತಿವರ್ಷ ನೀಡುವ ‘ವಿಜ್ಞಾನ ರತ್ನ’ ಪ್ರಶಸ್ತಿಗೆ 2026-27ನೇ ಸಾಲಿನಲ್ಲಿ ಜಿಲ್ಲೆಯ ಆರು ಶಿಕ್ಷಕರನ್ನು ಆಯ್ಕೆ ಮಾಡಿದೆ.

ಪ್ರಶಸ್ತಿಗೆ ಆಯ್ಕೆಯಾದವರ ವಿವರ ಹೀಗಿದೆ:
1. C.G. ಹಾಲೇಶ್ – ಚವಲಿಹಳ್ಳಿ ಗೊಲ್ಲರಹಟ್ಟಿ ಸರ್ಕಾರಿ ಪ್ರೌಢಶಾಲೆ, ಚಿತ್ರದುರ್ಗ ತಾಲ್ಲೂಕು
2. T.J. ವೆಂಕಟೇಶ್ – ಪಾಲವ್ವನಹಳ್ಳಿ ಸರ್ಕಾರಿ ಪ್ರೌಢಶಾಲೆ, ಹಿರಿಯೂರು ತಾಲ್ಲೂಕು
3. B.K. ಪ್ರಮೀಳಾ – ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗ, ಹೊಸದುರ್ಗ ತಾಲ್ಲೂಕು
4. ಸೈಯದ್ ಸಾದಿಕ್ ಬಾಷಾ – ಚಿತ್ರಹಳ್ಳಿ ಗ್ರಾಮಾಂತರ ಪ್ರೌಢಶಾಲೆ, ಹೊಳಲ್ಕೆರೆ ತಾಲ್ಲೂಕು
5. S.K. ವಿರೂಪಾಕ್ಷ – ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗ, ಮೊಳಕಾಲ್ಮೂರು ತಾಲ್ಲೂಕು
6. B.A. ಮಮತಾದೇವಿ – ದೇವರೆಡ್ಡಿಹಳ್ಳಿ ಗ್ರಾಮಾಂತರ ಪ್ರೌಢಶಾಲೆ, ಚಳ್ಳಕೆರೆ ತಾಲ್ಲೂಕು

ಈ ಆರು ಶಿಕ್ಷಕರನ್ನು ಸೆಪ್ಟೆಂಬರ್ 7, 2026ರಂದು ಬಾಪೂಜಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ನಡೆಯಲಿರುವ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ‘ವಿಜ್ಞಾನ ರತ್ನ’ ಪ್ರಶಸ್ತಿ ನೀಡಿ ಗೌರವಿಸಲಾಗುವುದು. ಚಿತ್ರದುರ್ಗ ಸೈನ್ಸ್ ಫೌಂಡೇಶನ್ ಕಾರ್ಯದರ್ಶಿ ಎಚ್.ಎಸ್.ಟಿ. ಸ್ವಾಮಿ ಅವರು ಪ್ರಕಟಣೆಯಲ್ಲಿ ಈ ಮಾಹಿತಿ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now