Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನ್ಯಾಯಾಲಯಗಳ ಸಂಕೀರ್ಣವನ್ನು ಶೀಘ್ರದಲ್ಲಿಯೇ ನಿರ್ಮಾಣ ಮಾಡಿ :ವಿಜಯ ಒತ್ತಾಯ

---Advertisement---

 

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್. 18 : ನಗರದ ಮಧ್ಯ ಭಾಗದಲ್ಲಿರುವ ನ್ಯಾಯಾಲಯದ ಆವರಣದಲ್ಲಿಯೇ ನ್ಯಾಯಾಲಯಗಳ ಸಂಕೀರ್ಣವನ್ನು ಶೀಘ್ರದಲ್ಲಿಯೇ ನಿರ್ಮಾಣ ಮಾಡುವಂತೆ ವಕೀಲರ ಸಂಘದ ಮಾಜಿ ಅಧ್ಯಕ್ಷ ಕೆ.ಎಸ್.ವಿಜಯ ಜನಪ್ರತಿನಿಧಿಗಳು, ಸಂಬಂಧಪಟ್ಟ ಸಚಿವರು ಹಾಗೂ ಜಿಲ್ಲಾಡಳಿತವನ್ನು ಒತ್ತಾಯಿಸಿದರು.

ಪತ್ರಕರ್ತರ ಭವನದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸರ್ಕಾರಿ ಕಲಾ ಕಾಲೇಜು ಹಿಂಭಾಗ ಯಂಗಮ್ಮನಕಟ್ಟೆಯ ಹತ್ತಿರವಿರುವ ಗುಡ್ಡಗಾಡು ಪ್ರದೇಶದಲ್ಲಿ ನ್ಯಾಯಾಲಯಗಳ ಸಂಕೀರ್ಣ ಮಾಡುವುದರಿಂದ ಬಡ ಕಕ್ಷಿದಾರರಿಗೆ ತೊಂದರೆಯಾಗಲಿದೆ. ಪೊಲೀಸ್ ಪೆರೇಡ್ ಮೈದಾನವನ್ನಾದರೂ ಬಳಸಿಕೊಳ್ಳಿ ಎಂದು ಮನವಿ ಮಾಡಿದರು.

ಹತ್ತು ನ್ಯಾಯಾಲಯಗಳಿವೆ. ಕೊಠಡಿಗಳು ಕಿಷ್ಕಿಂದೆಯಾಗಿರುವುದರಿಂದ ವಕೀಲರು ಕೂರಲು ಜಾಗವಿಲ್ಲದಂತಾಗಿದೆ. ಆಧುನಿಕ ನ್ಯಾಯಾಂಗ ಸಂಕೀರ್ಣವಾಗಬೇಕು. ಇದರಿಂದ ಕಕ್ಷಿದಾರರು ಹಾಗೂ ವಕೀಲರುಗಳಿಗೆ ಅನುಕೂಲವಾಗಲಿದೆ. ನಮ್ಮ ಮನವಿಗೆ ಸ್ಪಂದಿಸದಿದ್ದರೆ ಮುಂದಿನ ದಿನಗಳಲ್ಲಿ ಏಕಾಂಗಿಯಾಗಿಯಾದರೂ ಹೋರಾಟ ಮಾಡುತ್ತೇನೆಂದು ಕೆ.ಎಸ್.ವಿಜಯ ಎಚ್ಚರಿಸಿದರು.

ಕರ್ನಾಟಕ ರಾಜ್ಯ ವಕೀಲರ ಪರಿಷತ್ತಿನ ಚುನಾವಣೆಯಲ್ಲಿ 25 ಚುನಾಯಿತರು ಹಾಗೂ ಒಬ್ಬ ನಾಮ ನಿರ್ದೇಶಿತರು ನೇಮಕವಾಗುವುದರಿಂದ ಜಿಲ್ಲಾವಾರು ಅಥವಾ ವಕೀಲರ ಸಂಖ್ಯೆಯನ್ನು ಆಧರಿಸಿ ಎರಡು ಜಿಲ್ಲೆಗೊಂದರಂತೆ ಕ್ಷೇತ್ರಗಳನ್ನಾಗಿ ವಿಂಗಡಿಸಿ ಪ್ರತಿನಿಧಿಸಲು ತಿದ್ದುಪಡಿ ತರುವಂತೆ ರಾಜ್ಯ ವಕೀಲರ ಪರಿಷತ್‍ನ ಗಮನ ಸೆಳೆದರು.
ವಕೀಲರುಗಳಾದ ಮಾಲತೇಶ್ ಅರಸ್, ಸಚಿನ್‍ಬಾಬು, ಮಲ್ಲಿಕಾರ್ಜುನ, ವಂದನ ಇವರುಗಳು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...