ವಿಜಯದಶಮಿ ದಿನ ರಾಜ್ಯದ ಎಲ್ಲ ಜನತೆಯ ಆರೋಗ್ಯಕ್ಕಾಗಿ ವಿಶೇಷ ಪೂಜೆ: ಶಶಿಕಲಾ ಜೊಲ್ಲೆ

suddionenews
1 Min Read

ಬೆಂಗಳೂರು: ವಿಶ್ವದಲ್ಲಿ ಕೊರೊನಾ ಎರಡು ಅಲೆಗಳಿಂದ ಸಾಕಷ್ಟು ಜನರ ಹಾನಿಯಾಗಿದೆ. ಈಗ ಮೂರನೆ ಅಲೆ ಮಕ್ಕಳ ಆರೋಗ್ಯದ ಮೇಲೆ ಪರಿಣಾಮ ಬೀರಲಿದೆ ಎಂದು ತಜ್ಞರು ಅಭಿಪ್ರಾಾಯ ಪಟ್ಟಿದ್ದಾರೆ.

ನಾವು ನಮ್ಮ ಇಲಾಖೆ ವ್ಯಾಪ್ತಿಯಲ್ಲಿ ಬರುವ ಎಲ್ಲ ವರ್ಗದ ದೇವಸ್ಥಾನಗಳಲ್ಲಿ ವಿಜಯದಶಮಿ ಹಬ್ಬದ ಪ್ರಯುಕ್ತ ಅಕ್ಟೋಬರ್ 15 ರಂದು ಎಲ್ಲ ಜನರು ಹಾಗೂ ಮಕ್ಕಳ ಆರೋಗ್ಯ ರಕ್ಷಣೆಗಾಗಿ ಪ್ರಾರ್ಥಿಸಲು ವಿಶೇಷ ಪೂಜೆ ಸಲ್ಲಿಸಲು ಎಲ್ಲ ದೇವಸ್ಥಾನಗಳಿಗೆ ಸುತ್ತೋಲೆ ಹೊರಡಿಸಲಾಗಿದೆ ಎಂದು ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.

ಈ ವೇಳೆ ಸುದ್ಷಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಂದು ಧರ್ಮ ಶಾಸ್ತ್ರ ಪುರಾಣದಲ್ಲಿ ವಿಜಯದಶಮಿಯನ್ನು ವಿಶೇಷ ದಿನವೆಂದು ಪರಿಗಣಿಸಲಾಗುತ್ತದೆ. ಇದು ದುಷ್ಟ ಶಕ್ತಿಯನ್ನು ಸಂಹರಿಸಿ ವಿಜಯವನ್ನು ಆಚರಿಸುವ ದಿನ. ಆದ್ದರಿಂದ ಈ ದಿನ ಶ್ರೀ ಭಗವತಿ ಮತ್ತು ಭಗವಂತನನ್ನು ವಿಶೇಷವಾಗಿ ಪ್ರಾರ್ಥಿಸಿ ಪೂಜಿಸಿದರೆ. ವಿಶೇಷ ಫಲ ಹೊಂದ ಬಹುದೆಂದು ಶಾಸ್ತ್ರ ವಿಧಿತವಾಗಿದೆ. ಅಲ್ಲದೇ ಭಕ್ತರ ನಂಬಿಕೆಯೂ ಆಗಿರುವುದರಿಂದ ಪ್ರಾಕೃತಿಕವಾಗಿ ಯಾರಿಗೂ ದಷ್ಪರಿಣಾಮ ಆಗದಂತೆ ವಿಜಯ ದಶಮಿಯ ದಿನ ಅಕ್ಟೋಬರ 15 ರಂದು ಎಲ್ಲ ಮುಜರಾಯಿ ದೇವಸ್ಥಾನಗಳಲ್ಲಿ ಕೊರೊನಾ ಸಂಕಟ ದೂರ ಮಾಡಿ ಜನತೆಯ ಆರೋಗ್ಯ ಕಾಯುವಂತೆ ವಿಶೇಷ ಪೂಜೆ ನೆರವೇರಿಸಲು ಸೂಚಿಸಲಾಗಿದೆ ಎಂದು ಹೇಳಿದರು.

ಇದೇ ವೇಳೆ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಸ್ಥಾನಗಳ ಪ್ರವೇಶಕ್ಕೆ ಡ್ರೆಸ್ ಕೋಡ್ ಮಾಡುವ ಬಗ್ಗೆ ನನ್ನ ಮುಂದೆ ಯಾವುದೆ ಪ್ರಸ್ತಾಪ ಬಂದಿಲ್ಲ. ಧಾರ್ಮಿಕ ಪರಿಷತ್ ನಲ್ಲಿ ಚರ್ಚೆಯಾಗಿದ್ದರೆ ಮಾಹಿತಿ ಪಡೆದು ಪರಿಶೀಲನೆ ಮಾಡಲಾಗುವುದು.
ಚಿಕ್ಕಮಗಳೂರಿನ ಬಾಬಾ ಬುಡನ್ ಗಿರಿ ದತ್ತ ಪೀಠದಲ್ಲಿ ಮುಜಾವರ ಅವರನ್ನು ನೇಮಕ ಮಾಡಿದ್ದನ್ನು ರದ್ದು ಪಡಿಸಿರುವ ಹೈಕೋರ್ಟ್ ಆದೇಶದ ಬಗ್ಗೆ ಸಂಪುಟ ಉಪ ಸಮಿತಿಯಲ್ಲಿ ಚರ್ಚೆಯಾಗಿದೆ ಎಂದು ಸಚಿವರಿಗೆ ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.

ಪತ್ರಿಕಾಗೋಷ್ಠಿಯಲ್ಲಿ ಕಂದಾಯ ಹಾಗೂ ಮುಜರಾಯಿ ಇಲಾಖೆ ಪ್ರಧಾನ ಕಾರ್ಯದರ್ಶಿ ತುಷಾರ್ ಗಿರಿನಾಥ, ಮುಜರಾಯಿ ಇಲಾಖೆಯ ಆಯುಕ್ತರಾದ ರೋಹಿಣಿ ಸಿಂಧೂರಿ ಉಪಸ್ಥಿತರಿದ್ದರು.

Share This Article
Leave a Comment

Leave a Reply

Your email address will not be published. Required fields are marked *