ಸುದ್ದಿಒನ್, ವಿಜಯನಗರ, ನವೆಂಬರ್. 19 : ಜಿಲ್ಲೆಯ ಹೂವಿನ ಹಡಗಲಿ ತಾಲ್ಲೂಕಿನ ಬೂದನೂರು ಗ್ರಾಮದ ವಾಸಿ, ಮಾಜಿ ಗ್ರಾಮ ಪಂಚಾಯತಿ ಸದಸ್ಯ ಡಿ.ಸಿ. ಗುರುಶಾಂತ ಗೌಡರು (44 ವರ್ಷ) ಹೃದಯಾಘಾತದಿಂದ ಇಂದು ಬೆಳಿಗ್ಗೆ 9 ಗಂಟೆಗೆ ನಿಧನರಾದರು.

ಮೃತರು ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರು ಸೇರಿದಂತೆ ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ. ಅಂತ್ಯಕ್ರಿಯೆ ನಾಳೆ (ನವೆಂಬರ್. 20, ಗುರುವಾರ) ಬೆಳಿಗ್ಗೆ ಬೂದನೂರಿನ ಹಿಂದೂ ರುದ್ರಭೂಮಿಯಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.












