Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ತಾಪುರದಲ್ಲಿ ನಿಂತಿದ್ದ RSS ಪಥಸಂಚಲನ ಆರಂಭದ ಬಗ್ಗೆ ವಿಜಯೇಂದ್ರ ಸವಾಲ್..!

---Advertisement---

 

ಬೆಂಗಳೂರು: ರಾಜ್ಯದಲ್ಲಿ ಸದ್ಯ ಆರ್ ಎಸ್ ಎಸ್ ಕಾರ್ಯಕ್ರಮಗಳು ನಿರ್ಬಂಧದ ವಿಚಾರ ಸಾಕಷ್ಟು ಸದ್ದು ಮಾಡ್ತಾ ಇದೆ. ಅದರಲ್ಲೂ ಪ್ರಿಯಾಂಕ್ ಖರ್ಗೆ ಪತ್ರ ಬರೆದ ಮೇಲಂತು ಚರ್ಚೆಗಳು ಜೋರಾಗಿವೆ. ಇತ್ತೀಚೆಗಷ್ಟೇ ಮಲ್ಲಿಕಾರ್ಜುನ ಖರ್ಗೆ ಪ್ರತಿನಿಧಿಸುವ ಕ್ಷೇತ್ರ ಚಿತ್ತಾಪುರದಲ್ಲಿ ಆರ್ ಎಸ್ ಎಸ್ ಪಥ ಸಂಚಲನವನ್ನ ನಿಲ್ಲಿಸಲಾಗಿತ್ತು. ಅದಕ್ಕೆ ಸಂಬಂಧಿಸಿದಂತೆ ಇದೀಗ ಬಿವೈ ವಿಜಯೇಂದ್ರ ಅವರು ಸವಾಲೊಂದನ್ನ ಹಾಕಿದ್ದಾರೆ.

ಪ್ರಿಯಾಂಕ್ ಖರ್ಗೆಗೆ ಆರ್ ಎಸ್ ಎಸ್ ಟೀಕೆ ಮಾಡುವ ದುರ್ಬುದ್ದಿ ಅದ್ಯಾಕೆ ಬಂದಿದೆಯೋ ಗೊತ್ತಿಲ್ಲ. ಆರ್ ಎಸ್ ಎಸ್ ಟೀಕೆ ಮಾಡ್ತಿರೋದು ಪ್ರಚಾರಕ್ಕೋ ಅಥವಾ ಸಿಎಂ ಖುರ್ಚಿಗೆ ಟವೆಲ್ ಹಾಕುವುದಕ್ಕೋ ಗೊತ್ತಿಲ್ಲ. ಮಲ್ಲಿಕಾರ್ಜುನ ಖರ್ಗೆ ಹೇಳಿದ ಹಾಗೆ ಪ್ರಿಯಾಂಕ್ ಖರ್ಗೆ ಏಕಾಂಗಿಯಾಗಿದ್ದಾರೆ. ಗಾಂಧಿ ಕುಟುಂಬದಿಂದಲೇ ಆರ್ ಎಸ್ ಎಸ್ ಮಣಿಸುವುದಕ್ಕೆ ಆಗಲಿಲ್ಲ. ಇಂತಹ ಹೇಳಿಕೆ ನಿತ್ಯ ಕೊಡುವ ಮೂಲಕ ವಾಸ್ತವಿಕ ಸತ್ಯ ಮರೆ ಮಾಚುವ ಕೆಲಸವನ್ನ ಕಾಂಗ್ರೆಸ್ ಮಾಡ್ತಿದೆ. ಆಡಳಿತ ಪಕ್ಷದ ವೈಫಲ್ಯ ಮುಚ್ಚಿಕೊಳ್ಳುವುದಕ್ಕೆ ಆರ್ ಎಸ್ ಎಸ್ ಟೀಕೆ ಮಾಡ್ತಿದ್ದಾರೆ. ಚಿತ್ತಾಪುರದಲ್ಲಿ ನವೆಂಬರ್ 2 ರಂದು ಆರ್ ಎಸ್ ಎಸ್ ಪಥ ಸಂಚಲನ ನಡೆದೇ ನಡೆಯುತ್ತದೆ ಎಂದಿದ್ದಾರೆ.

ಚಿತ್ತಾಪುರದಲ್ಲಿ 2ನೇ ತಾರೀಖು RSS ‌ಪಥ ಸಂಚಲನ ನಡೆದೇ ನಡೆಯುತ್ತೆ. ಹೈಕೋರ್ಟ್ ಕೂಡ ಹೇಳಿದೆ. ರಾಜ್ಯದ ಎಲ್ಲಾ ಕ್ಷೇತ್ರದಲ್ಲಿ ಪಥ ಸಂಚಲನ ಆಗ್ತಿದೆ. ಹಾಗೇ ಚಿತ್ತಾಪುರದಲ್ಲಿ ನಡೆಯುತ್ತದೆ. ಪ್ರಿಯಾಂಗ್‌ ಖರ್ಗೆ ಹೀಗೆ‌ ಟೀಕೆ ಮಾಡಿ RSS ಅವಹೇಳನ ಮಾಡೋದು ಸರಿಯಲ್ಲ. RSS ಇಂತಹ ಅನೇಕ ಅಗ್ನಿ ಪರೀಕ್ಷೆ ಎದುರಿಸಿದೆ. RSS ಯಾವುದೇ ವಿಷಯಕ್ಕೆ ಪ್ರತಿಕ್ರಿಯೆ ನೀಡದೇ ಸಮಾಜ ಸೇವೆ ಕೆಲಸ ಮುಂದುವರೆಸಿಕೊಂಡು ಹೋಗ್ತಿದೆ ಎಂದಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...