ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಆಯ್ಕೆ : ಹೊಸ ಕಿರಣವಾಗಿ ಹೊರಹೊಮ್ಮಲಿ ಎಂದು ಹಾರೈಸಿದ ಬಿವೈ ರಾಘವೇಂದ್ರ

1 Min Read

ಬೆಂಗಳೂರು : ಬಿಜೆಪಿ ಕಡೆಗೂ ರಾಜ್ಯಾಧ್ಯಕ್ಷರನ್ನು ನೇಮಕ ಮಾಡಿದೆ. ಯಡಿಯೂರಪ್ಪ ಅವರ ಆಸೆಯಂತೆ ತಮ್ಮ ಪುತ್ರನಿಗೆ ಆ ಸ್ಥಾನವನ್ನು ನೀಡಿದ್ದಾರೆ. ಬಿವೈ ವಿಜಯೇಂದ್ರ ಅವರಿಗೆ ಬಿಜೆಪಿಯ ನಾಯಕರು, ಮುಖಂಡರು, ಆತ್ಮೀಯರು, ಅಭಿಮಾನಿಗಳು ಶುಭ ಹಾರೈಸುತ್ತಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ವಿಶ್ ಮಾಡುತ್ತಿದ್ದಾರೆ.

ಇದೀಗ ತಮ್ಮನಿಗೆ ರಾಜ್ಯಾಧ್ಯಕ್ಷ ಸ್ಥಾನ ಸಿಕ್ಕಿದ್ದಕ್ಕೆ ಬಿವೈ ರಾಘವೇಂದ್ರ ಅವರು ಶುಭ ಹಾರೈಸಿದ್ದಾರೆ. ‘ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷರಾಗಿ ನೇಮಕವಾಗಿರುವ ಶ್ರೀ ಬಿ ವೈ ವಿಜಯೇಂದ್ರ ಅವರಿಗೆ ಹಾರ್ದಿಕ ಶುಭಾಶಯಗಳು. ಹಿರಿಯರ ಆಶೀರ್ವಾದ ಹಾಗೂ ಕಿರಿಯರ ಬೆಂಬಲದೊಂದಿಗೆ ಪಕ್ಷವನ್ನು ಇನ್ನಷ್ಟು ಬಲಿಷ್ಠಗೊಳಿಸಿ ಮುನ್ನಡೆಸುತ್ತಾರೆ ಮತ್ತು ಮಾಜಿ ಮುಖ್ಯಮಂತ್ರಿ ಶ್ರೀ ಬಿ. ಎಸ್. ಯಡಿಯೂರಪ್ಪನವರು, ದಿ. ಶ್ರೀ ಅನಂತಕುಮಾರ್ ಅವರೇ ಮುಂತಾದ ನಾಯಕರುಗಳ ದಾರಿಯಲ್ಲಿ ನಡೆಯುತ್ತಾರೆ ಅನ್ನುವ ಭರವಸೆ ನನಗಿದೆ.

ಅವರ ನಾಯಕತ್ವದಲ್ಲಿ ಪಕ್ಷ ಹೊಸ ಚೈತನ್ಯದೊಂದಿಗೆ ಬೆಳೆಯಲಿ, ರಾಜ್ಯವನ್ನು ಆವರಿಸಿಕೊಂಡಿರುವ ಕಾಂಗ್ರೆಸ್ ದುರಾಡಳಿತದ ಕಾರ್ಮೋಡದ ನಡುವೆ ಭರವಸೆಯ ಒಂದು ಹೊಸ ಕಿರಣವಾಗಿ ಹೊರಹೊಮ್ಮಲಿ ಎಂದು ಹಾರೈಸುತ್ತೇನೆ’ ಎಂದಿದ್ದಾರೆ.

ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಬಿಜೆಪಿ ಹೈಕಮಾಂಡ್ ಈ ನಿರ್ಧಾರಕ್ಕೆ ಬಂದಿದೆ. ಲೋಕಸಭಾ ಚುನಾವಣೆಯಲ್ಲಿ, ವಿಜಯೇಂದ್ರ ಅವರ ನೇತೃತ್ವದಲ್ಲಿ ಗೆಲ್ಲುವ ಸ್ಥಾನಗಳ ಮೇಲೆ ಭರವಸೆ ನಿಲ್ಲುತ್ತದೆ. ರಾಜ್ಯದಲ್ಲಿ ಬಿಎಸ್ವೈಗಿರುವ ಹೆಸರು, ಗೌರವ ಎಲ್ಲರಿಗೂ ಗೊತ್ತಿದೆ. ಅವರ ಮಗನ ಮೇಲೂ ರಾಜ್ಯದ ಜನತೆಗೆ ಅಪಾರ ಅಭಿಮಾನ ಇದೆ. ಹೀಗಾಗಿ ಎಲ್ಲರೂ ಶುಭ ಹಾರೈಸುತ್ತಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *