Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನರೇಂದ್ರ ಮೋದಿ ಅವರಿಗಾಗಿ ದೈವದ ಮೊರೆ ಹೋದ ವಿಜಯೇಂದ್ರ..!

---Advertisement---

 

ಮಂಗಳೂರು; ಪ್ರಧಾನಿ ನರೇಂದ್ರ ಮೋದಿ ಅವರ ಒಳಿತಿಗಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ದೈವದ ಮೊರೆ ಹೋಗಿದ್ದಾರೆ. “ಕರಾವಳಿಯ ದೈವಾರಾಧನೆಯ ಪರಂಪರೆ ನಾಡಿನ ಧಾರ್ಮಿಕ ಹಾಗೂ ಸಾಂಸ್ಕೃತಿಕ ಹೊನ್ನ ಕಲಶವಿದ್ದಂತೆ” ಎಂದಿದ್ದಾರೆ.

 

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ವಿಧಾನಸಭಾ ಕ್ಷೇತ್ರದ ಶ್ರೀ ಕ್ಷೇತ್ರ ಕೊರಂಬಡ್ಕದಲ್ಲಿ ಶ್ರೀ ನಾಗಬ್ರಹ್ಮ ಆದಿಮೊಗೇರ್ಕಳ ದೇವಸ್ಥಾನ, ಶ್ರೀ ಗುಳಿಗ ದೈವ ಹಾಗೂ ಕೊರಗಜ್ಜ ದೇವಸ್ಥಾನದಲ್ಲಿ ಆಯೋಜಿಸಿದ್ದ ಶ್ರೀ ಕೊರಗಜ್ಜ ದೈವದ ನೇಮ ಮತ್ತು ಪರಿವಾರ ದೈವಗಳಿಗೆ ತಂಬಿಲ ಸೇವಾ ಕಾರ್ಯದಲ್ಲಿ ಭಾಗವಹಿಸಿ ಗುಳಿಗ ದೈವದ ಆಶೀರ್ವಾದ ಪಡೆಯಲಾಯಿತು.

ತುಳುನಾಡಿನ ಆರಾಧನಾ ಪರಂಪರೆಯಲ್ಲಿ ದೈವದ ಆರಾಧನೆಗೆ ಪರಮಪವಿತ್ರ ಆಚರಣೆಯಲ್ಲಿ ರಾಷ್ಟ್ರದ ಅಭಿವೃದ್ಧಿ ಹಾಗೂ ಸುಭದ್ರತೆಗಾಗಿ ಮೂರನೇ ಬಾರಿ ಹೆಮ್ಮೆಯ ಪ್ರಧಾನಿ ಶ್ರೀ Narendra Modi ಯವರು ಪ್ರಧಾನಿಗಳಾಗಿ ಆಯ್ಕೆಯಾಗಲೆಂದು ನಮ್ಮ ಕಾರ್ಯಕರ್ತರು ಮಾಡಿಕೊಂಡಿದ್ದ ವಿಶೇಷ ಹರಕೆಯ ಶ್ರೀ ಕೊರಗಜ್ಜ ದೈವದ ನೇಮ ಮತ್ತು ಪರಿವಾರ ದೈವಗಳಿಗೆ ತುಂಬಿಲಸೇವೆ ಸಲ್ಲಿಸಿ ದೈವದ ಕೃಪೆಗೆ ಪಾತ್ರರಾದೆವು. ಶ್ರೀ ದೈವದ ಪ್ರಸಾದವನ್ನು ಮಾನ್ಯ ಪ್ರಧಾನಿ ಶ್ರೀ ನರೇಂದ್ರ ಮೋದಿಜೀ ಅವರಿಗೆ ತಲಿಪಿಸಲಿದ್ದೇವೆ.

ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಶ್ರೀ ಎಸ್.ಅಂಗಾರ, ಯುವಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿಗಳು ಹಾಗೂ ಶಾಸಕರಾದ ಶ್ರೀ Harish Poonja , ಸಂಸದರಾದ ಶ್ರೀ Captain Brijesh Chowta , ಶಾಸಕರಾದ ಕು ಭಾಗೀರಥಿ ಮರುಳ್ಯ, ವಿಧಾನ ಪರಿಷತ್ ಸದಸ್ಯರಾದ ಕಿಶೋರ್ ಕುಮಾರ್ ಪುತ್ತೂರು, ಜಿಲ್ಲಾಧ್ಯಕ್ಷರಾದ ಶ್ರೀ ಸತೀಶ್ ಕಂಪಲ ಸೇರಿದಂತೆ ಪಕ್ಷದ ಪದಾಧಿಕಾರಿಗಳು, ಮಂಡಲ ಮತ್ತು ಶಕ್ತಿಕೇಂದ್ರ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು ಎಂದು ಟ್ವೀಟ್ ಮಾಡಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ಚಿತ್ರದುರ್ಗ ಜಿಲ್ಲೆಯಾದ್ಯಂತ ಡಿ.ಜೆ, ಹೈ-ಡೆಸಿಬಲ್ ಧ್ವನಿವರ್ಧಕಗಳ ಬಳಕೆಗೆ ಸಂಪೂರ್ಣ ನಿಷೇಧ: ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಆದೇಶ

ಚಿತ್ರದುರ್ಗ ಮುಖ್ಯ ರಸ್ತೆ ಅಗಲೀಕರಣ : ಭೂಸ್ವಾಧೀನ, ಕಟ್ಟಡ ಪರಿಹಾರದ ನಿಖರ ಮಾಹಿತಿ ಸಂಗ್ರಹಿಸಲು ಸಚಿವ ಟಿ. ರಘುಮೂರ್ತಿ ಸೂಚನೆ

ಗೌರಿ-ಗಣೇಶ ಹಬ್ಬದ ಮೆರವಣಿಗೆಯಲ್ಲಿ ಕಲರ್ ಪೇಪರ್ ಬ್ಲಾಸ್ಟಿಂಗ್, ಪಟಾಕಿ/ಸಿಡಿಮದ್ದು ಬಳಕೆ ನಿಷೇಧ: ಚಿತ್ರದುರ್ಗ ಜಿಲ್ಲಾಧಿಕಾರಿ ಆದೇಶ

ಗೋನೂರು ಕೆರೆಯಲ್ಲಿ ಭದ್ರೆಗೆ ಸಿಎಂ ಗಂಗಾಪೂಜೆ, ಬಾಗಿನ: ಅಗತ್ಯ ಸಿದ್ಧತೆಗೆ ಸಚಿವ ಟಿ. ರಘುಮೂರ್ತಿ ಸೂಚನೆ

ಕೆಲಸ ಮಾಡಲು ಇಷ್ಟವಿರದಿದ್ದರೆ ಬಿಟ್ಟುಬಿಡಿ : ಚಿತ್ರದುರ್ಗ ಜಿಲ್ಲಾಸ್ಪತ್ರೆ ಅಧಿಕಾರಿಗಳಿಗೆ ಸಚಿವ ರಘುಮೂರ್ತಿ ಎಚ್ಚರಿಕೆ

ವಿದ್ಯಾ ನಗರದಲ್ಲಿ 18 ನೇ ವರ್ಷದ ಗಣೇಶೋತ್ಸವ : ‘ವಿ ಬಾಯ್ಸ್’ ವತಿಯಿಂದ ರಕ್ತದಾನ ಶಿಬಿರ: ಸಾರ್ಥಕತೆ ಮೆರೆದ ಯುವಪಡೆ.!

Leave a Comment