ತುಮಕೂರು: ಬಿಜೆಪಿಯ ನೂತನ ರಾಜ್ಯಾಧ್ಯಕ್ಷರಾಗಿ ನೇಮಕಗೊಂಡಿರುವ ಬಿವೈ ವಿಜಯೇಂದ್ರ ಅವರು ಇಂದು ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿದ್ದಾರೆ. ಮಠದಲ್ಲಿರುವ ಸಿದ್ದಗಂಗಾ ಮಠದ ಶಿವಕುಮಾರ ಶ್ರೀಗಳ ಗದ್ದುಗೆಗೆ ನಮಸ್ಕರಿಸಿ, ಪೂಜೆ ಸಲ್ಲಿಸಿದ್ದಾರೆ.
ನೂತನ ರಾಜ್ಯಾಧ್ಯಕ್ಷರಿಗೆ ಸಚಿವರು, ಶಾಸಕರು ಸಾಥ್ ನೀಡಿದ್ದಾರೆ. ಶಾಸಕ ಸುರೇಶ್ ಗೌಡ ಸೇರಿದಂತೆ ಹಲವರು ಮಠಕ್ಕೆ ವಿಜಯೇಂದ್ರ ಅವರ ಜೊತೆಗೆ ಭೇಟಿ ನೀಡಿದ್ದಾರೆ. ಈ ವೇಳೆ ಬುದ್ದಿಯವರನ್ನು ಭೇಟಿ ಮಾಡಿದ ವಿಜಯೇಂದ್ರ ಅವರು, ಆಶೀರ್ವಾದವನ್ನು ಪಡೆದಿದ್ದಾರೆ.
ಇದೇ ವೇಳೆ ಮಾತನಾಡಿದ ವಿಜಯೇಂದ್ರ ಅವರು, ವಿರೋಧ ಪಕ್ಷದ ನಾಯಕನ ತೀರ್ಮಾನವೂ ಆಗಲಿದೆ. ಇದೇ 15 ರಂದು ಅಧಿಕಾರ ಸ್ವೀಕಾರ ಮಾಡುತ್ತೇನೆ. ಪಕ್ಷದ ಹಿರಿಯ ಸಮ್ಮುಖದಲ್ಲಿ ಅಧಿಕಾರ ಸ್ವೀಕಾರ ಮಾಡುತ್ತೇನೆ. ಕೇಂದ್ರ ನಾಯಕರು ಬ್ಯುಸಿಯಾಗಿದ್ದಾರೆ. ಹೀಗಾಗಿ ಅವರು ಬರುವ ಸಾಧ್ಯತೆ ಕಡಿಮೆ ಇದೆ. ವೀಕ್ಷಕರ ಮುಂದೆ ಅಧಿಕಾರ ಸ್ವೀಕರಿಸುತ್ತೇನೆ ಎಂದಿದ್ದಾರೆ.
ಲೋಕಸಭಾ ಚುನಾವಣೆ ಸನಿಹವಿರುವ ಕಾರಣ ಬಿಜೆಪಿ ರಾಜ್ಯಾಧ್ಯಕ್ಷರನ್ನು ನೇಮಕ ಮಾಡಿದೆ. ಕರ್ನಾಟಕದಲ್ಲಿ ಯಡಿಯೂರಪ್ಪ ಅವರೇ ಮೇಲುಗೈ ಎಂಬುದನ್ನು ಅರಿತಿರುವ ಬಿಜೆಪಿ ಹೈಕಮಾಂಡ್, ಲೋಕಸಭೆಯ ಗೆಲುವಿಗಾಗಿ ಯಡಿಯೂರಪ್ಪ ಅವರಿಗೆ ಮಣೆ ಹಾಕಿದೆ. ಹೀಗಾಗಿ ಅವೆ ಮಗನನ್ನೇ ರಾಜ್ಯಾಧ್ಯಕ್ಷರನ್ನಾಗಿ ಮಾಡಿದೆ ಎಂಬ ಮಾತುಗಳು ಕೇಳಿ ಬಂದಿವೆ.