ಧಾರವಾಡ: ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದೆ. ಚುನಾವಣಾ ಅಭ್ಯರ್ಥಿಗಳು ಸದ್ಯ ಜನರ ಮನಸ್ಸನ್ನು ಗೆಲ್ಲುವತ್ತ ಗಮನ ಹರಿಸುತ್ತಿದ್ದಾರೆ. ಇದೀಗ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ಚುನಾವಣಾ ಆಸೆಗೆ ಕೋರ್ಟ್ ತಣ್ಣೀರು ಎರಚಿದೆ. ಧಾರವಾಡ ಜಿಲ್ಲಾ ಪ್ರವೇಶಕ್ಕೆ ಅನುಮತಿ ನಿರಾಕರಣೆ ಮಾಡಲಾಗಿದೆ.

ಮಾಜಿ ಸಚಿವ ವಿನಯ್ ಕುಲಕರ್ಣಿ, ಈ ಬಾರಿಯ ಚುನಾವಣಾ ಆಕಾಂಕ್ಷಿಯಾಗಿದ್ದರು. ಅವರ ಪತ್ನಿಯಿಂದ ನಾಮಪತ್ರ ಕೂಡ ಸಲ್ಲಿಕೆ ಮಾಡಿದ್ದರು. ಇದೀಗ ಧಾರವಾಡ ಪ್ರವೇಶ ಅಸಾಧ್ಯವಾಗಿದೆ. ಧಾರವಾಡ ಜಿಲ್ಲಾ ಪ್ರವೇಶಕ್ಕೆ ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತಿರಸ್ಕರಿಸಿದೆ.

ಜಿಲ್ಲಾ ಗ್ರಾಮ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಆರೋಪಿಯಾಗಿದ್ದಾರೆ. ಈ ಸಂಬಂಧ ಸಿಬಿಐ ವಿಚಾರಣೆಯನ್ನು ಎದುರಿಸಿದ್ದಾರೆ. ಸುಪ್ರೀಂಕೋರ್ಟ್ ಕೂಡ ಧಾರವಾಡ ಪ್ರವೇಶಕ್ಕೆ ನಿರಾಕರಣೆ ಹೇರಿದೆ. ಹೀಗಾಗಿ ಜನಪ್ರತಿನಿಧಿಗಳ ನ್ಯಾಯಾಲಯ ಕೂಡ ಅರ್ಜಿ ತಿರಸ್ಕಾರ ಮಾಡಿದೆ.
ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಅವರ ಕೊಲೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿಯನ್ನು ಸಿಬಿಐ ಬಂಧಿಸಿತ್ತು. ಬಳಿಕ ಸುಪ್ರೀಂ ಕೋರ್ಟ್ ಧಾರವಾಡ ಪ್ರವೇಶ ನಿರ್ಬಂಧಿಸಿ ಜಾಮೀನು ನೀಡಿದೆ. ಈಗ ಧಾರವಾಡ ಪ್ರವೇಶ ನಿರಾಕರಣೆ ಮಾಡಿದೆ.


