Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ವಿನಯ್ ಕುಲಕರ್ಣಿ ಅವರ ಧಾರವಾಡ ಪ್ರವೇಶ ನಿರಾಕರಣೆ : ಚುನಾವಣೆ ಆಸೆಗೆ ತಣ್ಣೀರು..!

Facebook
Twitter
Telegram
WhatsApp

 

 

ಧಾರವಾಡ: ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದೆ. ಚುನಾವಣಾ ಅಭ್ಯರ್ಥಿಗಳು ಸದ್ಯ ಜನರ ಮನಸ್ಸನ್ನು ಗೆಲ್ಲುವತ್ತ ಗಮನ ಹರಿಸುತ್ತಿದ್ದಾರೆ. ಇದೀಗ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ಚುನಾವಣಾ ಆಸೆಗೆ ಕೋರ್ಟ್ ತಣ್ಣೀರು ಎರಚಿದೆ. ಧಾರವಾಡ ಜಿಲ್ಲಾ ಪ್ರವೇಶಕ್ಕೆ ಅನುಮತಿ ನಿರಾಕರಣೆ ಮಾಡಲಾಗಿದೆ.

ಮಾಜಿ ಸಚಿವ ವಿನಯ್ ಕುಲಕರ್ಣಿ, ಈ ಬಾರಿಯ ಚುನಾವಣಾ ಆಕಾಂಕ್ಷಿಯಾಗಿದ್ದರು. ಅವರ ಪತ್ನಿಯಿಂದ ನಾಮಪತ್ರ ಕೂಡ ಸಲ್ಲಿಕೆ ಮಾಡಿದ್ದರು. ಇದೀಗ ಧಾರವಾಡ ಪ್ರವೇಶ ಅಸಾಧ್ಯವಾಗಿದೆ. ಧಾರವಾಡ ಜಿಲ್ಲಾ ಪ್ರವೇಶಕ್ಕೆ ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತಿರಸ್ಕರಿಸಿದೆ.

ಜಿಲ್ಲಾ ಗ್ರಾಮ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಆರೋಪಿಯಾಗಿದ್ದಾರೆ. ಈ ಸಂಬಂಧ ಸಿಬಿಐ ವಿಚಾರಣೆಯನ್ನು ಎದುರಿಸಿದ್ದಾರೆ. ಸುಪ್ರೀಂಕೋರ್ಟ್ ಕೂಡ ಧಾರವಾಡ ಪ್ರವೇಶಕ್ಕೆ ನಿರಾಕರಣೆ ಹೇರಿದೆ. ಹೀಗಾಗಿ ಜನಪ್ರತಿನಿಧಿಗಳ ನ್ಯಾಯಾಲಯ ಕೂಡ ಅರ್ಜಿ ತಿರಸ್ಕಾರ ಮಾಡಿದೆ.

ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಅವರ ಕೊಲೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿಯನ್ನು ಸಿಬಿಐ ಬಂಧಿಸಿತ್ತು. ಬಳಿಕ ಸುಪ್ರೀಂ ಕೋರ್ಟ್ ಧಾರವಾಡ ಪ್ರವೇಶ ನಿರ್ಬಂಧಿಸಿ ಜಾಮೀನು ನೀಡಿದೆ. ಈಗ ಧಾರವಾಡ ಪ್ರವೇಶ ನಿರಾಕರಣೆ ಮಾಡಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ತುರುವನೂರಿನಲ್ಲಿ  ಮತದಾನ ಜಾಗೃತಿ

  ಚಿತ್ರದುರ್ಗ. ಏ.16: ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಚುನಾವಣೆಗೆ ಏಪ್ರಿಲ್ 26ರಂದು ಮತದಾನ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಚಿತ್ರದುರ್ಗ ತಾಲ್ಲೂಕಿನ ತುರುವನೂರು ಹೋಬಳಿ ವ್ಯಾಪ್ತಿಯಲ್ಲಿ ತಾಲ್ಲೂಕು ಸ್ವೀಪ್ ಸಮಿತಿಯಿಂದ ಮಂಗಳವಾರ ಮತದಾನ ಜಾಗೃತಿ ನಡೆಸಲಾಯಿತು.

ಕನ್ನಡದ ಹಿರಿಯ ನಟ ದ್ವಾರಕೀಶ್ ನಿಧನ : ಗಣ್ಯರಿಂದ ಸಂತಾಪ

ಬೆಂಗಳೂರು, ಏಪ್ರಿಲ್. 16 : ಕನ್ನಡದ ಹಿರಿಯ ನಟ, ನಿರ್ಮಾಪಕ, ನಿರ್ದೇಶಕ ದ್ವಾರಕೀಶ್ ಅವರು ನಿಧನರಾಗಿದ್ದಾರೆ. 81 ವರ್ಷದ ದ್ವಾರಕೀಶ್ ಅವರು, ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ದ್ವಾರಕೀಶ್ ನಿಧನಕ್ಕೆ ಕನ್ನಡ ಚಿತ್ರರಂಗದ ಗಣ್ಯರು ಕಂಬನಿ

ಬೇಸಿಗೆಯಲ್ಲಿ ಮೊಟ್ಟೆ ತಿಂದರೆ ಏನಾಗುತ್ತೆ ಗೊತ್ತಾ ?

ಸುದ್ದಿಒನ್ : ಮೊಟ್ಟೆ ಆರೋಗ್ಯಕ್ಕೆ ಒಳ್ಳೆಯದು ಎನ್ನುತ್ತಾರೆ. ಮೊಟ್ಟೆ ಸೇವನೆ ಆರೋಗ್ಯಕ್ಕೆ ತುಂಬಾ ಉಪಯುಕ್ತ ಎಂದು ಹೇಳುತ್ತಾರೆ. ಮೊಟ್ಟೆಗಳಲ್ಲಿ ವಿಟಮಿನ್ ಎ, ವಿಟಮಿನ್ ಬಿ12, ವಿಟಮಿನ್ ಡಿ, ಪ್ರೊಟೀನ್, ಕ್ಯಾಲ್ಸಿಯಂ, ಸತು, ಫೋಲೇಟ್ ಮತ್ತು

error: Content is protected !!