Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ವಿನಯ್ ಕುಲಕರ್ಣಿಗೆ ಮತ್ತೆ ನಿರಾಸೆ; ಜಾಮೀನು ಅರ್ಜಿ ವಿಚಾರಣೆ ಇ ದಿನಕ್ಕೆ ಮುಂದೂಡಿಕೆ

---Advertisement---

ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಕಾಂಗ್ರೆಸ್ ನಾಯಕ ವಿನಯ್ ಕುಲಕರ್ಣಿ ಅವರು ಶಿಕ್ಷೆಗೆ ತಡೆ ನೀಡುವಂತೆ ಹಾಗೂ ಜಾಮೀನು ಮಂಜೂರು ಮಾಡುವಂತೆ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ.

ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಿಧಿಸಿದ್ದ ಜೀವಾವಧಿ ಶಿಕ್ಷೆಯನ್ನು ಅಮಾನತುಗೊಳಿಸಿ ಜಾಮೀನು ನೀಡಬೇಕೆಂದು ವಿನಯ್ ಕುಲಕರ್ಣಿ ಪರ ವಕೀಲರು ನ್ಯಾಯಾಲಯದ ಮುಂದೆ ಮನವಿ ಮಾಡಿದರು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠವು ಸಿಬಿಐಗೆ ಆಕ್ಷೇಪಣೆ ಸಲ್ಲಿಸಲು ಸೂಚಿಸಿ ಪ್ರಕರಣದ ವಿಚಾರಣೆಯನ್ನು ಜೂನ್‌ 1ಕ್ಕೆ ಮುಂದೂಡಿದೆ.

ಶಿಕ್ಷೆ ಪ್ರಕಟವಾದ ಹಿನ್ನೆಲೆಯಲ್ಲಿ ವಿನಯ್ ಕುಲಕರ್ಣಿ ಶಾಸಕ ಸ್ಥಾನದಿಂದ ಅನರ್ಹಗೊಂಡಿರುವುದರಿಂದ, ಕ್ಷೇತ್ರಕ್ಕೆ ಶೀಘ್ರದಲ್ಲೇ ಚುನಾವಣೆ ಘೋಷಣೆಯಾಗುವ ಸಾಧ್ಯತೆ ಇದೆ. ಈ ಕಾರಣದಿಂದ ಅರ್ಜಿಯನ್ನು ತುರ್ತುವಾಗಿ ವಿಚಾರಣೆ ನಡೆಸುವಂತೆ ಅವರ ಪರ ವಕೀಲರು ಕೋರ್ಟ್‌ಗೆ ಮನವಿ ಮಾಡಿದರು.
ಆದರೆ ವಿಚಾರಣೆ ಮತ್ತೆ ಮುಂದೂಡಿಕೆಯಾಗಿರುವುದು ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ವಿನಯ್ ಕುಲಕರ್ಣಿಗೆ ಮತ್ತೊಮ್ಮೆ ನಿರಾಸೆ ತಂದಿದೆ.

ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ವಿಧಿಸಲ್ಪಟ್ಟ ಹಿನ್ನೆಲೆಯಲ್ಲಿ ವಿನಯ್ ಕುಲಕರ್ಣಿ ಅವರ ಶಾಸಕ ಸ್ಥಾನವನ್ನು ರದ್ದುಪಡಿಸಿ ರಾಜ್ಯ ವಿಧಾನಸಭೆ ಕಾರ್ಯದರ್ಶಿ ಅಧಿಕೃತ ಪ್ರಕಟಣೆ ಹೊರಡಿಸಿದ್ದರು. ಏಪ್ರಿಲ್‌ 13ರಂದು ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಸೇರಿ 16 ಮಂದಿಯನ್ನು ದೋಷಿ ಎಂದು ನ್ಯಾಯಾಲಯ ತೀರ್ಪು ನೀಡಿತ್ತು. ಬಳಿಕ ಏಪ್ರಿಲ್‌ 15ರಂದು ಅವರ ವಿಧಾನಸಭಾ ಸದಸ್ಯತ್ವ ಅನರ್ಹಗೊಂಡಿರುವ ಬಗ್ಗೆ ಅಧಿಸೂಚನೆ ಪ್ರಕಟಿಸಲಾಗಿತ್ತು.
2016ರ ಜೂನ್‌ನಲ್ಲಿ ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಹತ್ಯೆಯಾಗಿದ್ದು, ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಸೇರಿದಂತೆ 21 ಮಂದిపై ಆರೋಪ ಕೇಳಿಬಂದಿತ್ತು. ನಂತರ ಬಿಜೆಪಿ ಸರ್ಕಾರ ಪ್ರಕರಣವನ್ನು ಸಿಬಿಐಗೆ ವಹಿಸಿತ್ತು. ಸಿಬಿಐ ತನಿಖೆ ನಡೆಸಿ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಿತ್ತು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now