Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ವಿನಯ್ ಕುಲಕರ್ಣಿ ಪತ್ನಿಗೂ ಸಿಕ್ತು ನಿಗಮದಲ್ಲಿ ಸ್ಥಾನ : ಯಾವುದಕ್ಕೆ ಅಧ್ಯಕ್ಷೆ..?

---Advertisement---

ನವದೆಹಲಿ: ಸದ್ಯ ಸರ್ಕಾರದ ನಿಗಮ ಮಂಡಳಿಗಳಿಗೆ ಅಧ್ಯಕ್ಷರನ್ನ ನೇಮಕ ಮಾಡಲಾಗಿದೆ. ನಿನ್ನೆಯಷ್ಟೇ ಯಾವೆಲ್ಲಾ ನಿಗಮಗಳಿಗೆ ಯಾರನ್ನೆಲ್ಲಾ ನೇಮಕ ಮಾಡಲಾಗಿದೆ ಎಂಬ ಲೀಸ್ಟ್ ಇಲ್ಲಿದೆ. ಸಿದ್ದರಾಮಯ್ಯ ಸರ್ಕಾರಕ್ಕೆ ಸದ್ಯ ಎರಡೂವರೆ ವರ್ಷ ತುಂಬುತ್ತಿದೆ. ಈ ಬೆನ್ನಲ್ಲೆ 39 ನಿಗಮಗಳಿಗೆ ಅಧ್ಯಕ್ಷರನ್ನ ನೇಮಕ ಮಾಡಲಾಗಿದೆ.

ಎಐಸಿಸಿಯೂ ನಿಗಮಗಳ ಅಧ್ಯಕ್ಷರ ಪಟ್ಟಿಯನ್ನು ಬಿಡುಗಡೆ ಮಾಡಿದೆ. ನಿಗಮಗಳಿಗೆ ಅಧ್ಯಕ್ಷರನ್ನ ನೇಮಕ ಮಾಡುವ ವಿಚಾರದಲ್ಲಿ ಸಚುವರಿಗೆ ಹೆಚ್ಚು ಮಣೆ ಹಾಕುವುದಕ್ಕೆ ಹೋಗಿಲ್ಲ. ಬದಲಿಗೆ ಕಾರ್ಯಕರ್ತರಿಗೆ ಮಣೆ ಹಾಕಲಾಗಿದೆ. ಹೀಗಾಗಿ ಪಕ್ಷಕ್ಕಾಗಿ ಹೆಚ್ಚು ಕೆಲಸ ಮಾಡಿದ ಕಾರ್ಯಕರ್ತರಿಗೆ ಸ್ಥಾನ ನೀಡಲಾಗಿದೆ. ಅದರಲ್ಲಿ ಶಾಸಕ ವಿನಯ್ ಕುಲಕರ್ಣಿ ಅವರ ಪತ್ನಿಯೂ ಸೇರಿದ್ದಾರೆ.

ಹೌದು, ನಿಗಮಗಳ ಅಧ್ಯಕ್ಷ ಸ್ಥಾನಕ್ಕೆ ವಿನಯ್ ಕುಲಕರ್ಣಿ ಅವರ ಹೆಂಡತಿಗೆ ಸ್ಥಾನ ನೀಡಲಾಗಿದೆ. ವಿನಯ್ ಕುಲಕರ್ಣಿ ಪತ್ನಿ ಶಿವಲೀಲಾ ಕುಲಕರ್ಣಿ ಅವರಿಗೆ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯಲ್ಲಿ ಅಧ್ಯಕ್ಷ ಸ್ಥಾನ ನೀಡಲಾಗಿದೆ.

ವಿನಯ್ ಕುಲಕರ್ಣಿ ಕೊಲೆ ಆರೋಪ್ ಮೇಲೆ ಈಗಲೂ ಜೈಲಿನಲ್ಲಿದ್ದಾರೆ. ಮಗನ ಅನಾರೋಗ್ಯದ ಹಿನ್ನೆಲೆ ಇತ್ತೀಚೆಗೆ ಎರಡು ದಿನಗಳ ಅನುಮತಿ ಮೇರೆಗೆ ಹೊರಗೆ ಬಂದಿದ್ದರು. ಇದೀಗ ಅವರ ಪತ್ನಿಗೆ ಹೈಕಮಾಂಡ್ ಮಣೆ ಹಾಕಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಅವರು ಸೇರಿ ಚರ್ಚೆ ನಡೆಸಿ, ಅಂತಿಮ ಪಟ್ಟಿಯನ್ನು ಸಿದ್ಧ ಮಾಡಿದ್ದರು. ಬಳಿಕ ಆ ಪಟ್ಟಿಯನ್ನು ಕೆ.ಸಿ.ವೇಣುಗೋಪಾಲ್ ಅವರಿಗೆ ಸಲ್ಲಿಕೆ ಮಾಡಿದ್ದರು. ಆ ಪಟ್ಟಿ ಆ ನಂತರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಸಲ್ಲಿಕೆಯಾಗಿತ್ತು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now