ದಾವಣಗೆರೆ : ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ಸಿಗದ ಹಿನ್ನೆಲೆ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ರಾಜಕಾರಣಿ ಜಿಬಿ ವಿನಯ್ ಕುಮಾರ್ ಅವರು, ತಮಗೆ ಎದುರಾದ ಒತ್ತಡ ಮತ್ತು ಸಂಕಷ್ಟಗಳ ಕುರಿತು ಬಹಿರಂಗಪಡಿಸಿದ್ದಾರೆ. ಈ ಸಂಬಂಧ ಬಿಡುಗಡೆ ಮಾಡಿದ ವಿಡಿಯೋದಲ್ಲಿ ಅವರು, ಉಪ ಚುನಾವಣೆಯಲ್ಲಿ ಕಾಂಗ್ರೆಸ್ ವಿರುದ್ಧ ಕಣಕ್ಕಿಳಿದಿರುವ ಅಭ್ಯರ್ಥಿಗಳು, ವಿಶೇಷವಾಗಿ ಮುಸ್ಲಿಂ ಅಭ್ಯರ್ಥಿಗಳು ನಾಮಪತ್ರ ಹಿಂಪಡೆಯದಂತೆ ಮನವಿ ಮಾಡಿದ್ದಾರೆ.
2024ರ ಲೋಕಸಭಾ ಚುನಾವಣೆಯಲ್ಲಿ ಸ್ವತಂತ್ರವಾಗಿ ನಾಮಪತ್ರ ಸಲ್ಲಿಸಿದ ವೇಳೆ ತಮಗೆ ಉನ್ನತ ಮಟ್ಟದ ಒತ್ತಡಗಳು ಎದುರಾದವು ಎಂದು ಹೇಳಿದ ಅವರು, “ಒಂದು ಮತ ಬಂದರೂ, ಲಕ್ಷ ಮತ ಬಂದರೂ ಹೋರಾಟದಿಂದ ಹಿಂದೆ ಸರಿಯುವುದಿಲ್ಲ ಎಂಬ ದೃಢ ನಿಲುವು ತೆಗೆದುಕೊಂಡಿದ್ದೆ. ಫಲಿತಾಂಶ ಏನೇ ಇರಲಿ, ಹೋರಾಡಿದ್ದೇನೆ ಎಂಬ ಆತ್ಮತೃಪ್ತಿ ಇದೆ” ಎಂದರು.ಸ್ವತಂತ್ರ ಅಭ್ಯರ್ಥಿಗಳಿಗೆ ಸಂದೇಶ ನೀಡಿದ ಅವರು, ಕಡಿಮೆ ಮತಗಳ ಭಯದಿಂದ ಹಿಂದೆ ಸರಿಯಬಾರದು ಎಂದು ಕರೆ ನೀಡಿದರು. “ಮತಗಳ ಸಂಖ್ಯೆಯಿಂದ ನಿಮ್ಮ ವ್ಯಕ್ತಿತ್ವ ನಿರ್ಧಾರವಾಗುವುದಿಲ್ಲ. ಸಮಾಜದಲ್ಲಿ ಕೆಟ್ಟ ಹೆಸರು ಬರುತ್ತದೆ ಎಂಬ ಭಯ ಬೇಡ” ಎಂದು ಹೇಳಿದರು.
ಇನ್ನೂ ರಾಜಕೀಯ ಒತ್ತಡಗಳು ಹಾಗೂ ಆಮಿಷಗಳ ಬಗ್ಗೆ ಎಚ್ಚರಿಕೆ ನೀಡಿದ ಅವರು, “ದೊಡ್ಡವರ ಮಾತುಗಳಿಗೆ ಮಾರು ಹೋಗಬೇಡಿ. ಚುನಾವಣೆ ವೇಳೆಯಲ್ಲಿ ಭರವಸೆ ನೀಡುವವರು ನಂತರ ನಿಮ್ಮನ್ನು ಗುರುತಿಸುವುದೇ ಇಲ್ಲ” ಎಂದು ಟೀಕಿಸಿದರು.ನಾಮಪತ್ರ ಹಿಂಪಡೆಯುವುದರಿಂದ ಸಾರ್ವಜನಿಕರಲ್ಲಿ ತಪ್ಪು ಸಂದೇಶ ಹೋಗುವ ಸಾಧ್ಯತೆ ಇದೆ ಎಂದು ಎಚ್ಚರಿಸಿದ ಅವರು, “ಜನರು ‘ಡೀಲ್ ಆಗಿದ್ದಾರೆ’ ಎಂಬ ಆರೋಪ ಮಾಡಬಹುದು” ಎಂದರು.
ಕೊನೆಗೆ, ಮುಸ್ಲಿಂ ಅಭ್ಯರ್ಥಿಗಳಿಗೆ ವಿಶೇಷ ಮನವಿ ಮಾಡಿದ ಅವರು, “ಎಷ್ಟು ಕಷ್ಟ ಬಂದರೂ ಹಿಂದೆ ಸರಿಯಬೇಡಿ. ಮೊದಲ ಪ್ರಯತ್ನದಲ್ಲಿ ಗೆಲುವು ಸಿಗದಿದ್ದರೂ ಮುಂದಿನ ದಿನಗಳಲ್ಲಿ ಜಯ ನಿಮ್ಮದೇ ಆಗುತ್ತದೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











