ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 26 : ಕರ್ನಾಟಕ ಸಹಕಾರ ಇಲಾಖೆಯಿಂದ ಅನುಮೋದಿಸಲ್ಪಟ್ಟಿರುವ ಸರ್ಕಾರಿ ಹೊರಗುತ್ತಿಗೆ ನೌಕರರ ಸಂಘದ ಚಿತ್ರದುರ್ಗ ಜಿಲ್ಲಾ ಘಟಕದ ನೂತನ ಅಧ್ಯಕ್ಷರಾಗಿ ವಿನಯ್. ಎಸ್ ಅವರು ನೇಮಕಗೊಂಡಿದ್ದಾರೆ.
ರಾಜ್ಯಾದ್ಯಂತ ವಿವಿಧ ಜಿಲ್ಲೆಗಳಿಗೆ ನೂತನ ಜಿಲ್ಲಾಧ್ಯಕ್ಷರನ್ನು ಆಯ್ಕೆ ಮಾಡಿ ಸಂಘದ ರಾಜ್ಯಾಧ್ಯಕ್ಷರಾದ ಸುಧಾಕರ್ ಅವರು ಅಧಿಕೃತ ಆದೇಶ ಹೊರಡಿಸಿದ್ದಾರೆ. ಈ ಆದೇಶದ ಅನ್ವಯ ವಿನಯ್. ಎಸ್ ಅವರು 2026 ರಿಂದ 2029 ರ ವರೆಗೆ ಅಥವಾ ಮುಂದಿನ ಆದೇಶದವರೆಗೆ ಚಿತ್ರದುರ್ಗ ಜಿಲ್ಲಾಧ್ಯಕ್ಷರಾಗಿ ಅಧಿಕಾರ ನಿರ್ವಹಿಸಲಿದ್ದಾರೆ.
ಚಿತ್ರದುರ್ಗ ಜಿಲ್ಲೆಯ ಹೊರಗುತ್ತಿಗೆ ನೌಕರರ ಹಿತರಕ್ಷಣೆ ಹಾಗೂ ಸಂಘಟನೆಯ ಬಲವರ್ಧನೆಗೆ ಶ್ರಮಿಸುವ ಜವಾಬ್ದಾರಿಯನ್ನು ಅವರಿಗೆ ವಹಿಸಲಾಗಿದೆ.












