ಕರ್ನಾಟಕ ವಾರ್ತೆ( ಚಿತ್ರದುರ್ಗ) ಮೇ.2: ಬೆಂಗಳೂರಿನಿಂದ ಹುಳಿಯಾರಿಗೆ ಸಾಗಣಿಕೆ ಮಾಡುತ್ತಿದ್ದ ದಾಖಲೆ ಇಲ್ಲದ ರೂ.4.4ಲಕ್ಷ ಹಣವನ್ನು ಮಂಗಳವಾರ ಹಿರಿಯೂರು ಪಟ್ಟಣದಲ್ಲಿ ವಶಕ್ಕೆ ಪಡೆಯಲಾಗಿದೆ.
ಪ್ರಾಥಮಿಕ ಹಂತದಲ್ಲಿ ಪ್ರಕರದಲ್ಲಿ ಯಾವುದೇ ರಾಜಕೀಯ ಪಕ್ಷದ ಸಂಬಂದ ಕಂಡುಬಂದಿಲ್ಲ. ಹಣ ಸಾಗಣಿಕೆ ಸಂಬಂಧ ಬೆಂಗಳೂರು ಮೂಲದ ಇಬ್ಬರ ವ್ಯಕ್ತಿಗಳ ಪರಿಶೀಲನೆ ನಡೆಸಲಾಗುತ್ತಿದೆ. ವಶ ಪಡಿಸಿಕೊಂಡ ಹಣವನ್ನು ಜಿಲ್ಲಾ ಚುನಾವಣೆ ಸಮಿತಿ ನೀಡಲಾಗಿದೆ. ಪ್ರಕರಣದಲ್ಲಿ ಯಾವುದೇ ಬಂಧನವಾಗಿಲ್ಲ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಪರುಶುರಾಮ ತಿಳಿಸಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!
ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.












