Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕೋಟ್ಪಾ ಕಾಯ್ದೆ ಉಲ್ಲಂಘನೆ; ಚಿತ್ರದುರ್ಗದಲ್ಲಿ 19 ಪ್ರಕರಣ ದಾಖಲು

---Advertisement---

 

ಚಿತ್ರದುರ್ಗ. ಏ.17: ಯುವಜನತೆ ತಂಬಾಕಿನ ದುಶ್ಚಟಗಳಿಗೆ ಬಲಿಯಾಗಿ ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹೊಳಲ್ಕೆರೆ ತಾಲ್ಲೂಕಿನ ನಗರ ಪ್ರದೇಶದ ಬಾರ್ ಮತ್ತು ರೆಸ್ಟೋರೆಂಟ್ ಹಾಗೂ ತಂಬಾಕು ಉತ್ಪನ್ನ ಮಾರಾಟಗಾರರ ಅಂಗಡಿಗಳ ಮೇಲೆ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ವತಿಯಿಂದ ಸೋಮವಾರ ದಿಢೀರ್ ದಾಳಿ ನಡೆಸಿ ಜಾಗೃತಿ ಮೂಡಿಸಲಾಯಿತು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಜಿ.ಪಿ.ರೇಣುಪ್ರಸಾದ್ ಹಾಗೂ ಜಿಲ್ಲಾ ತಂಬಾಕು ನಿಯಂತ್ರಣಾಧಿಕಾರಿ ಡಾ. ರೇಖಾ ಅವರ ಮಾರ್ಗದರ್ಶನದಲ್ಲಿ ಆರೋಗ್ಯ ಇಲಾಖೆ, ಪುರಸಭೆ ಹಾಗೂ ಪೆÇಲೀಸ್ ಇಲಾಖೆಯ ಜಂಟಿ ತಂಡವು ಹೊಳಲ್ಕೆರೆ ನಗರದ ವಿವಿಧೆಡೆ ತಪಾಸಣೆ ನಡೆಸಿತು.

ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವುದು ಹಾಗೂ ಪಾನ್ ಮಸಾಲ ಜಗಿದು ಉಗಿಯುವುದರಿಂದ ಆಗುವ ಆರೋಗ್ಯ ಹಾನಿಯ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಿದ ಅಧಿಕಾರಿಗಳು, ನಿಯಮದಂತೆ ಸೆಕ್ಷನ್ 4, 6ಎ ಮತ್ತು 6ಬಿ ಫಲಕಗಳನ್ನು ಕಡ್ಡಾಯವಾಗಿ ಅಳವಡಿಸುವಂತೆ ಅಂಗಡಿ ಮಾಲೀಕರಿಗೆ ಸೂಚನೆ ನೀಡಿದರು.

 

ಕೋಟ್ಪಾ-2003ರ ಕಾಯ್ದೆಯಡಿ ನಿಯಮ ಉಲ್ಲಂಘಿಸಿದವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಂಡ ತಂಡವು, ಸಾರ್ವಜನಿಕ ಸ್ಥಳದಲ್ಲಿ ಧೂಮಪಾನ ಮಾಡಿದ (ಸೆಕ್ಷನ್-4) 14 ಪ್ರಕರಣಗಳನ್ನು ದಾಖಲಿಸಿ 1550 ರೂ. ದಂಡ ಹಾಗೂ ಅಪ್ರಾಪ್ತರಿಗೆ ತಂಬಾಕು ಮಾರಾಟ ಮಾಡಿದ (ಸೆಕ್ಷನ್-6ಎ) 5 ಪ್ರಕರಣಗಳನ್ನು ದಾಖಲಿಸಿ 550 ರೂ. ಸೇರಿದಂತೆ ಒಟ್ಟು 2100 ರೂ. ದಂಡ ವಸೂಲಿ ಮಾಡಿದೆ.

 

ಈ ದಾಳಿಯಲ್ಲಿ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರ ಬಿ.ಎಂ. ಪ್ರಭುದೇವ, ಸಮಾಜ ಕಾರ್ಯಕರ್ತ ಕೆ.ಎಂ.ತಿಪ್ಪೇಸ್ವಾಮಿ, ಆರೋಗ್ಯ ನಿರೀಕ್ಷಣಾಧಿಕಾರಿ ಎಂ.ಕೆ.ರಂಗನಾಥ, ಪುರಸಭೆಯ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಟಿ.ಕಲ್ಪನಾ, ಮಹಿಳಾ ಹೆಡ್ ಕಾನ್ಸ್‍ಟೇಬಲ್ ಪುಷ್ಪ ಸೇರಿದಂತೆ ತಾಲ್ಲೂಕು ಮಟ್ಟದ ಅಧಿಕಾರಿಗಳು ಪಾಲ್ಗೊಂಡಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...