ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ : ಅಬಕಾರಿ ಇಲಾಖೆಯ ಭರ್ಜರಿ ಕಾರ್ಯಾಚರಣೆ : ಅಬಕಾರಿ ಉಪ ಆಯುಕ್ತ ಡಾ.ಬಿ.ಮಾದೇಶ್ ಹೇಳಿದ್ದೇನು ?

2 Min Read

 

 

ಮಾಹಿತಿ ಮತ್ತು ಫೋಟೋ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ

ಚಿತ್ರದುರ್ಗ,(ಏ.21) : ವಿಧಾನಸಭಾ ಚುನಾವಣೆಯ ಹಿನ್ನಲೆಯಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದು, ಚಿತ್ರದುರ್ಗ ಜಿಲ್ಲೆಯಲ್ಲಿ ಅಬಕಾರಿ ಇಲಾಖೆಯು ಜಾರಿ ಮತ್ತು ತನಿಖಾ ಕಾರ್ಯ ತೀವ್ರಗೊಳಿಸಿದೆ.

ಮಾದರಿ ನೀತಿ ಸಂಹಿತೆ ಅವಧಿಯಲ್ಲಿ ಅಬಕಾರಿ ಇಲಾಖಾ ಅಧಿಕಾರಿಗಳು ಜಿಲ್ಲೆಯಾದ್ಯಂತ ರೂ.1.18 ಕೋಟಿ ಮೌಲ್ಯದ 34800 ಲೀಟರ್ ಅಕ್ರಮ ಮದ್ಯ ಹಾಗೂ 43 ವಾಹನ ವಶಪಡಿಕೊಂಡಿದ್ದಾರೆ. ಇದರೊಟ್ಟಿಗೆ 540 ಪ್ರಕರಣ ದಾಖಲಿಸಿ, 574 ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಅಬಕಾರಿ ಉಪ ಆಯುಕ್ತ ಡಾ.ಬಿ.ಮಾದೇಶ್ ತಿಳಿಸಿದ್ದಾರೆ.

ಚುನಾವಣಾ ಸಂಬಂಧ ಅಕ್ರಮ ಮದ್ಯ ದಾಸ್ತಾನು ಹೊಂದುವಿಕೆ, ಸಾಗಾಣಿಕೆ, ಮಾರಾಟ ಹಾಗೂ ವಿತರಣೆಯಂತಹ ಅಕ್ರಮಗಳು ಜರುಗದಂತೆ ಕಟ್ಟೆಚ್ಚರ ವಹಿಸಿಲಾಗಿದೆ. ಇದಕ್ಕಾಗಿ ಇಲಾಖೆಯ ಮೂರು ತಂಡಗಳು ಖಾಯಂ ತನಿಖಾ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತವೆ.

ರಾತ್ರಿ-ಹಗಲು ಕಾರ್ಯನಿರ್ವಹಿಸುವ 9 ಎಫ್‍ಎಸ್‍ಟಿ ತಂಡಗಳನ್ನು ರಚಿಸಲಾಗಿದೆ. ಈ ತಂಡಗಳು ಜಿಲ್ಲಾಡಳಿತದಿಂದ ಚುನಾವಣಾ ಸಂಬಂಧ ನಿಯೋಜನೆಗೊಂಡಿರುವ ಎಸ್‍ಎಸ್‍ಟಿ, ಎಫ್‍ಎಸ್‍ಟಿ ಮತ್ತು ಇತರೆ ತಂಡಗಳೊಂದಿಗೆ ಸಮನ್ವಯ ಸಾಧಿಸಿ ಕಾರ್ಯನಿರ್ವಹಿಸುತ್ತಿವೆ.

2023ರ ಮಾರ್ಚ್ 29 ರಿಂದ ಏ.19 ರವರೆಗೆ ಚಿತ್ರದುರ್ಗ ವಿಧಾನಸಭಾ ಕ್ಷೇತ್ರದಲ್ಲಿ ರೂ.58 ಲಕ್ಷ ಮೌಲ್ಯದ 24597 ಲೀಟರ್ ಅಕ್ರಮ ಮದ್ಯ ಹಾಗೂ 8 ವಾಹನ ವಶಪಡಿಸಿಕೊಳ್ಳಲಾಗಿದೆ. 90 ಪ್ರಕರಣ ದಾಖಲಿಸಿ, 75 ಆರೋಪಿಗಳನ್ನು ಬಂಧಿಸಲಾಗಿದೆ.

ಹೊಳಲ್ಕೆರೆ ವಿಧಾನಸಭಾ ಕ್ಷೇತ್ರದಲ್ಲಿ ರೂ.6.38 ಲಕ್ಷ ಮೌಲ್ಯದ 279 ಲೀಟರ್ ಅಕ್ರಮ ಮದ್ಯ ಹಾಗೂ 5 ವಾಹನ ವಶಪಡಿಸಿಕೊಳ್ಳಲಾಗಿದೆ. 94 ಪ್ರಕರಣ ದಾಖಲಿಸಿ, 109 ಆರೋಪಿಗಳನ್ನು ಬಂಧಿಸಲಾಗಿದೆ.

ಹೊಸದುರ್ಗ ವಿಧಾನಸಭಾ ಕ್ಷೇತ್ರದಲ್ಲಿ ರೂ.4.29 ಲಕ್ಷ ಮೌಲ್ಯದ 225 ಲೀಟರ್ ಅಕ್ರಮ ಮದ್ಯ ಹಾಗೂ 5 ವಾಹನ ವಶಪಡಿಸಿಕೊಳ್ಳಲಾಗಿದೆ. 68 ಪ್ರಕರಣ ದಾಖಲಿಸಿ, 71 ಆರೋಪಿಗಳನ್ನು ಬಂಧಿಸಲಾಗಿದೆ.

ಚಳ್ಳಕೆರೆ ವಿಧಾನಸಭಾ ಕ್ಷೇತ್ರದಲ್ಲಿ ರೂ.38.25 ಲಕ್ಷ ಮೌಲ್ಯದ 9270 ಲೀಟರ್ ಅಕ್ರಮ ಮದ್ಯ ಹಾಗೂ 10 ವಾಹನ ವಶಪಡಿಸಿಕೊಳ್ಳಲಾಗಿದೆ. 90 ಪ್ರಕರಣ ದಾಖಲಿಸಿ, 87 ಆರೋಪಿಗಳ ಬಂಧಿಸಲಾಗಿದೆ.

ಹಿರಿಯೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ರೂ.7.58 ಲಕ್ಷ ಮೌಲ್ಯದ, 192 ಲೀಟರ್ ಅಕ್ರಮ ಮದ್ಯ ಹಾಗೂ 9 ವಾಹನ ವಶಪಡಿಸಿಕೊಳ್ಳಲಾಗಿದೆ. 119 ಪ್ರಕರಣ ದಾಖಲಿಸಿ, 119 ಆರೋಪಿಗಳನ್ನು ಬಂಧಿಸಲಾಗಿದೆ.

ಮೊಳಕಾಲ್ಮುರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ರೂ.3.66 ಲಕ್ಷ ಮೌಲ್ಯದ 227 ಲೀಟರ್ ಅಕ್ರಮ ಮದ್ಯ ಹಾಗೂ 6 ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. 79 ಪ್ರಕರಣ ದಾಖಲಿಸಿದ್ದು, 103 ಆರೋಪಿಗಳನ್ನು ಬಂಧಿಸಲಾಗಿದೆ.

ಮುಂದಿನ ದಿನಗಳಲ್ಲಿಯೂ ಅಬಕಾರಿ ಇಲಾಖೆ ಕಾರ್ಯಾಚರಣೆ ಮುಂದುವರೆಯಲಿದ್ದು, ಸಾರ್ವಜನಿಕರು ಅಕ್ರಮ ಮದ್ಯ ದಾಸ್ತಾನು ಸಂಗ್ರಹಣೆ, ಸಾಗಾಣಿಕೆ, ಮಾರಾಟ, ವಿತರಣೆ ಮುಂತಾದ ಚುನಾವಣಾ ಅಕ್ರಮಗಳು ಕಂಡು ಬಂದಲ್ಲಿ ಅಬಕಾರಿ ಇಲಾಖೆಯ ಟೋಲ್ ಫ್ರೀ ನಂಬರ್ 18004253521ಕ್ಕೆ ಕರೆ ಮಾಡಿ ಮಾಹಿತಿ ನೀಡಬೇಕು ಎಂದು ಅಬಕಾರಿ ಉಪ ಆಯುಕ್ತ ಡಾ.ಬಿ.ಮಾದೇಶ್ ಮನವಿ ಮಾಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *