ಹಿರಿಯೂರಿಗೆ 3 ಬಿಎಂಸಿ ಕೇಂದ್ರ ಮಂಜೂರು : ಬಿಸಿ ಸಂಜೀವಮೂರ್ತಿ

1 Min Read

ಸುದ್ದಿಒನ್, ಹಿರಿಯೂರು, ಅಕ್ಟೋಬರ್. 03 : ನಗರದ ಅನ್ನಪೂರ್ಣೇಶ್ವರಿ ಖಾಸಗಿ ಹೋಟೆಲಿನಲ್ಲಿ ತಾಲ್ಲೂಕು ಹಾಲು ಉತ್ಪಾದಕರ ಸಹಕಾರ ಸಂಘಗಳ ಮಾಸಿಕ ಪ್ರಗತಿ ಪರಿಶೀಲನಾ ಸಭೆ ಜರುಗಿತು.

ಸಭೆ ಕುರಿತು ಶಿಮುಲ್ ನಿರ್ದೇಶಕ ಬಿಸಿ ಸಂಜೀವಮೂರ್ತಿ ಮಾತನಾಡಿ ತಾಲೂಕಿನಲ್ಲಿ ಯಾವುದೇ ಸಮಸ್ಯೆಯಿಲ್ಲದೆ ಹಾಲು ಉತ್ಪಾದಕರ ಸಹಕಾರ ಸಂಘಗಳು ಕಾರ್ಯ ನಿರ್ವಹಿಸುತ್ತಿರುವುದು ಸಂತಸ ತಂದಿದೆ. ತಾಲ್ಲೂಕಿನ ಬೇತೂರು, ರಂಗೇನಹಳ್ಳಿ 5ಸಾವಿರ ಹಾಗೂ ಬ್ಯಾಡರಹಳ್ಳಿ ಸಹಕಾರ ಸಂಘ 3 ಸಾವಿರ ಹಾಲು ಉತ್ಪಾದನೆ ಹಿನ್ನೆಲೆಯಲ್ಲಿ ಮೂರು ಬಿಎಂಸಿ ಕೇಂದ್ರಗಳನ್ನು ಮಂಜೂರು ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಬೀರೆನಹಳ್ಳಿ ಗ್ರಾಮದಲ್ಲೂ ಬಿಎಂಸಿ ಕೇಂದ್ರ ತೆರೆಯಲು ಚಿಂತನೆ ನಡೆಸಲಾಗುವುದು. ಹೈನುಗಾರಿಕೆ ರೈತರ ಉಪಕಸುಬಾಗಿದ್ದು ಅವರ ಕುಟುಂಬ ನಿರ್ವಹಣೆಗೆ ಬಹಳ ಉಪಯುಕ್ತವಾಗಿದೆ. ಪ್ರತಿಯೊಬ್ಬರೂ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ಸಹಾಯಕ ನಿರ್ದೇಶಕ ಎಂ. ಪುಟ್ಟರಾಜು ಅವರು ಹಾಲು ಉತ್ಪಾದಕರ ಸಹಕಾರ ಸಂಘಗಳ ವಾರ್ಷಿಕ ವರದಿ, ಲೆಕ್ಕಪತ್ರ, ಅಡಿಟ್ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ವಿಸ್ತರಣಾಧಿಕಾರಿ ಜಿ. ಕೃಷ್ಣಕುಮಾರ್, ಪಶುವೈದ್ಯ ದೀರಾಜ್ ಪ್ರಕಾಶ್ ಜಿ, ಸೂಪರ್ವೈಸರ್ ಮಂಜುನಾಥ್ ಸೇರಿದಂತೆ ತಾಲೂಕಿನ ಹಾಲು ಉತ್ಪಾದಕರ ಸಹಕಾರ ಸಂಘಗಳ ಕಾರ್ಯದರ್ಶಿಗಳು ಇದ್ದರು.

Share This Article