Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹೆಣ್ಣುಮಕ್ಕಳ ಮೇಲೆ ದೌರ್ಜನ್ಯ : ಚಿತ್ರದುರ್ಗದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

 

ಚಿತ್ರದುರ್ಗ,(ಜು.27) : ರಾಜ್ಯದಲ್ಲಿ ಹಾಗೂ ದೇಶದಲ್ಲಿ ಹೆಣ್ಣುಮಕ್ಕಳ ಮೇಲೆ ನಡೆಯುತಿರುವ ದೌರ್ಜನ್ಯವನ್ನು ಖಂಡಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಇಂದು ಪ್ರತಿಭಟನೆ ಮಾಡುವ ಮೂಲಕ ಜಿಲ್ಲಾಧಿಕಾರಿಗಳ ಮುಖಾಂತರ ರಾಷ್ಟ್ರಪತಿ ಮತ್ತು ರಾಜ್ಯಪಾಲರಿಗೆ ಮನವಿ ಮಾಡಿತು.

ಸುಮಾರು ವರ್ಷಗಳಿಂದ ನಮ್ಮ ರಾಜ್ಯದಲ್ಲಿ ಹಾಗೂ ದೇಶದಲ್ಲಿ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ ಮತ್ತು ಕೊಲೆ ಮಾಡುತ್ತಾ ಬಂದಿದ್ದಾರೆ. ಅದರಲ್ಲೂ ಹಿಂದುಳಿದ ವರ್ಗದ ಹೆಣ್ಣು ಮಕ್ಕಳನ್ನು ಪ್ರೀತಿ ಹೆಸರಿನಲ್ಲಿ ಮೋಸ ಮಾಡಿ ನಮ್ಮ ಮನೆಯಲ್ಲಿ ಜಾತಿ ಸಮಸ್ಯೆ ಎಂದು ಅವರನ್ನು ಉಪಯೋಗಿಸಿ ಬಿಟ್ಟು ಹೋಗಿರುತ್ತಾರೆ. ಮೊನ್ನೆ ಆ ರಾಜ್ಯದಲ್ಲಿ ಮೂರು ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ ಮಾಡಿ ಕೊಲೆ ಮಾಡಲಾಗಿದೆ. ಹಾಗೂ ಮಣಿಪುರದ ಇಬ್ಬರು ಮಹಿಳೆಯರನ್ನು ಬೆತ್ತಲೆಗೊಳಿಸಿ ರಸ್ತೆಯಲ್ಲಿ ಮೆರವಣಿಗೆ ನಡೆಸಿ, ಲೈಂಗಿಕ ದೌರ್ಜನ್ಯ ಎಸಗಲಾಗಿದೆ. ಈ ವಿಚಾರವಾಗಿ ಈ ಘಟನೆಗಳ ವಿರುದ್ಧವಾಗಿ, ದ ಹಾಗೂ ರಾಜ್ಯದ ಹೆಣ್ಣು ಮಕ್ಕಳ ಮೇಲಿನ ಈ ದೌರ್ಜನ್ಯ ವಿರುದ್ಧವಾಗಿ, ಪ್ರತಿಭಟನಾ ಹೋರಾಟ ಮಾಡುವ ಮೂಲಕ ಈ ದೂರನ್ನು ನೀಡಿರುತ್ತೇವೆ ತಾವುಗಳು ನಮ್ಮ ದೂರನ್ನು ಗಂಭೀರವಾಗಿ ಪರಿಗಣಿಸಿ ಆರೋಪಿಗಳಿಗೆ ಶಿಕ್ಷೆಯಾಗುವ ಹಾಗೆ ಮತ್ತು ರಾಜ್ಯದ ಹಾಗೂ ದೇಶದ ಹೆಣ್ಣು ಮಕ್ಕಳಿಗೆ ಸಂರಕ್ಷಣೆ ನೀಡಲು ಸಾಧ್ಯವಾಗದಿರುವ ರಾಜಕಾರಣಿಗಳು ಸ್ವಯಂ ಪ್ರೇರಿತವಾಗಿ ರಾಜೀನಾಮೆ ನೀಡುವಂತೆ ಎಚ್ಚರ ನೀಡಬೇಕಾಗಿ, ರಾಜ್ಯಪಾಲರಲ್ಲಿ ಮನವಿ ಮಾಡಲಾಯಿತು.

ಮಣಿಪುರದಲ್ಲಿ ಕುಕಿ ಜೋ ಬುಡಕಟ್ಟು ಸಮುದಾಯದ ಮಹಿಳೆಯರನ್ನು ಸಂಪೂರ್ಣಬೆತ್ತಲುಗೊಳಿಸಿ ಸಾರ್ವಜನಿಕವಾಗಿ ಮೆರವಣಿಗೆ ಮಾಡಿ ಸಾಮೂಹಿಕ ಅತ್ಯಾಚಾರ ಮಾಡಿರುವ ದುಷ್ರ್ಕಕರ್ಮಿಗಳನ್ನು ತಕ್ಷಣವೇ ಗಲ್ಲುಶಿಕ್ಷೆಗೆ ಒಳಪಡಿಸಬೇಕು.ಸಂಘರ್ಷ ಮತ್ತು ಹಿಂಸಾಚಾರದಿಂದ ನಿಯಂತ್ರಿಸುವಲ್ಲಿ ಮಣಿಪುರದಲ್ಲಿ ಕಾನೂನು ವಿಫಲವಾಗಿರುವ ಬಿರೇನ್‍ಸಿಂಗ್ ನೇತೃತ್ವದ ಸರ್ಕಾರವನ್ನು ತಕ್ಷಣವೇ ವಜಾಗೊಳಿಸಿ ಮತ್ತು ಸುವ್ಯವಸ್ಥೆಯನ್ನು ಕಾಪಾಡಬೇಕು 3 ತಿಂಗಳಿನಿಂದ ನಲುಗಿಹೋಗಿರುವ ಜನಾಂಗೀಯ ರಾಷ್ಟ್ರಪತಿಯವರ ಆಡಳಿತವನ್ನು ಜಾರಿಗೊಳಿಸಬೇಕು. ಕಾನೂನು ಮತ್ತ ಸುವ್ಯವಸ್ಥೆ ಕಾಪಾಡಲು ವಿಫಲವಾಗಿರುವ ಮಣಿಪುರದ ಮುಖ್ಯಮಂತ್ರಿ ಬಿರೇನ್ ಸಿಂಗ್ ಕೇಂದ್ರ ಗೃಹಮಂತ್ರಿ ಅಮಿತ್ ಷಾ ಮತ್ತು ಪ್ರಧಾನಿ ನರೇಂದ್ರಮೋದಿಯವರು ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಗಳಿಗೆ ರಾಜೀನಾಮೆ ಸಲ್ಲಿಸಬೇಕು ಎಂದು ಆಗ್ರಹಿಸಲಾಯಿತು.

ರಾಜಕೀಯ ಸಾಮಾಜಿಕ, ಮತ್ತು ಮಾನವ ಹಕ್ಕುಗಳಿಗೆ ಸಂಬಂಧಿಸಿದ ಗಂಭೀರ ಪ್ರಶ್ನೆಗಳು ಹುಟ್ಟಲು ಈಗಿನ ಪರಿಸ್ಥಿತಿ ಕಾರಣವಾಗಿದೆ. ಸುಪ್ರೀಮ್ ಕೋರ್ಟಿನ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡರವರು ಗಾಢ ಕಳವಳ ವ್ಯಕ್ತಪಡಿಸಿದ್ದಾರೆ ತಳಮಟ್ಟದಲ್ಲಿ ಏನನ್ನೂ ಮಾಡಲು ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ ಎಂದಾದರೆ ನ್ಯಾಯಾಲಯವು ಮಧ್ಯಪ್ರವೇಶ ಮಾಡಬೇಕಾಗುತ್ತದೆ. ಎನ್ನುವ ಎಚ್ಚರಿಕೆಯನ್ನು ನೀಡಿದ್ದಾರೆ. ಕಾನೂನಿನ ಆಡಳಿತಕ್ಕೆ ಒಳಪಟ್ಟಿ ಯಾವುದೇನಾಗರೀಕ ಸಮಾಜವು ಇಂತಹ ಹೀನ ಕೃತ್ಯ ಹೆಸಗಿದವರಮೇಲೆ ತಕ್ಷಣವೇ ಕಾನೂನು ಕ್ರಮ ಕೈಗೊಳ್ಳುತ್ತಿತ್ತು. ವಿಡಿಯೋ ಕಳೆದವಾರ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುವವರೆಗೂ ಯಾವುದೇ ತನಿಖೆ ನಡೆದಿರಲಿಲ್ಲ. ಯಾರನ್ನೂ ಬಂಧಿಸಿರಲಿಲ್ಲ. ಇದನ್ನು ಸೂಕ್ಷ್ಮವಾಗಿ ಗಮನಿಸಿದಾಗ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರ ತಪ್ಪಿತಸ್ಥರ ವಿರುದ್ಧ ಯಾವುದೇ ಕಾನೂನು ಕ್ರಮ ಕೈಗೊಳ್ಳದಿರುವುದು ಅನುಮಾನಗಳಿಗೆ ಕಾರಣವಾಗಿದೆಯಲ್ಲದೇ ಕಾನೂನು ಮತ್ತು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದುಬಿದ್ದಿದೆ ಎಂದು ದೂರಿದ್ದಾರೆ.

ಈ ಪ್ರತಿಭಟನೆಯಲ್ಲಿ ಜಿಲ್ಲಾ ಸಂಚಾಲಕ ಕೆಂಗುಂಟೆ ಜಯ್ಯಪ್ಪ, ಸುಂದರಮೂರ್ತಿ ಕೆ.ಆರ್. ಹೊಳಲ್ಕೆರೆ ನವೀನ್ ಮದ್ದೇರುಶ್ರೀನಿವಾಸ್, ಬಂಡಿಹಟ್ಟಿ ಮಂಜುನಾಥ್ ಗುಂಡಿಮಡು ಮಸ್ತಲ್ ಮಣ್ಣ ಸೇರಿದಂತೆ ಇತರರು ಭಾಗವಹಿಸಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

Cold Water Side Effects : ಬೇಸಿಗೆಯಲ್ಲಿ ಫ್ರಿಡ್ಜ್ ನಲ್ಲಿರುವ ತಣ್ಣೀರು ಕುಡಿದರೆ ಎಷ್ಟೆಲ್ಲಾ ಸಮಸ್ಯೆ ಗೊತ್ತಾ ?

  ಸುದ್ದಿಒನ್ : ಈ ಬೇಸಿಗೆಯ ತಾಪವನ್ನು ನಿವಾರಿಸಲು ತಣ್ಣೀರಿಗಿಂತ ಉತ್ತಮ ಪರ್ಯಾಯವಿಲ್ಲ. ಅದಕ್ಕಾಗಿಯೇ ನಮ್ಮಲ್ಲಿ ಹೆಚ್ಚಿನವರು ಬಿಸಿಲಿನಿಂದ ಮನೆಗೆ ಬಂದ ತಕ್ಷಣ ರೆಫ್ರಿಜರೇಟರ್‌ನಿಂದ ತಣ್ಣೀರು ಕುಡಿಯುವ ಅಭ್ಯಾಸವನ್ನು ಹೊಂದಿರುತ್ತಾರೆ. ಆದರೆ ಈ ರೀತಿ

ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ

ಈ ರಾಶಿಯ ಜನಪ್ರತಿನಿಧಿಗಳಿಗೆ ಆತ್ಮೀಯರಿಂದ ಕಂಟಕ, ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ, ಈ ರಾಶಿಯ ವಿವಾಹಿತ ಜೀವನವು ಸಂತೋಷವಾಗಿ ಕಾಣುತ್ತದೆ, ಶುಕ್ರವಾರ-ರಾಶಿ ಭವಿಷ್ಯ ಮೇ-3,2024 ಸೂರ್ಯೋದಯ: 05:52, ಸೂರ್ಯಾಸ್ತ

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

error: Content is protected !!