Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ವಿವಿಧ ಪ್ರಕರಣಗಳಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ : ಚಿತ್ರದುರ್ಗದಲ್ಲಿ ಮಹಿಳಾ ಸಂಘಟನೆಗಳ ಪ್ರತಿಭಟನೆ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಚಿತ್ರದುರ್ಗ,(ಜು.28) :  ಮಣಿಪುರದ ಮಹಿಳೆ ಬೆತ್ತಲೆ ಕೃತ್ಯದ ದೌರ್ಜನ್ಯ, ಉಡುಪಿಯಲ್ಲಿ ವೈದ್ಯಕೀಯ ವಿದ್ಯಾರ್ಥಿಗಳ ಶೌಚಾಲಯದ ವಿಡಿಯೋ ಮಾಡಿ ವೈರಲ್ ಮಾಡಿರುವ ಬಗ್ಗೆ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳದ ಸೌಜನ್ಯಳ ಪ್ರಕರಣಗಳಲ್ಲಿ ಮಹಿಳೆಯರಿಗೆ ಆಗಿರುವ ದೌರ್ಜನ್ಯವನ್ನು ಖಂಡಿಸಿ ಇಂದು ವಿವಿಧ ಮಹಿಳಾ ಸಂಘಟನೆಗಳು ಪ್ರತಿಭಟನೆಯನ್ನು ನಡೆಸಿ ಮಹಿಳೆಯರಿಗೆ ಸುರಕ್ಷತೆ ಹಾಗೂ ಗೌರವದಿಂದ ಬದುಕಲು ವ್ಯವಸ್ಥೆಯನ್ನು ಕಲ್ಪಿಸುವಂತೆ ಆಗ್ರಹಿಸಿ ಜಿಲ್ಲಾಡಳಿತದ ಮೂಲಕ ಪ್ರಧಾನ ಮಂತ್ರಿಗಳಿಗೆ ಮನವಿ ಮಾಡಿದರು.

ಮಣಿಪುರದಲ್ಲಿನ ಎರಡು ಕೋಮಿನ ದ್ವೇಷದ ಗಲಭೆ ಮತ್ತು ಮಹಿಳೆಯ ಮೇಲಿನ ಬೆತ್ತಲೆ ಮೆರವಣಿಗೆ ಮತ್ತು ಅತ್ಯಾಚಾರ ನಡೆದಿದ್ದು ಇದು ದೇಶದ ಮಹಿಳೆಯರು ತೆಲೆ ತಗ್ಗಿಸುವಂತಾಗಿದೆ. ಮಣಿಪುರದ ಕುಕಿ ಜನಾಂಗದ ಇಬ್ಬರು ಮಹಿಳೆಯರನ್ನು  ಬೆತ್ತಲೆಗೊಳಿಸಿ  ನಡುಬೀದಿಯಲ್ಲಿ ಮೆರವಣಿಗೆ ಮಾಡಿ ನಾನಾ ರೀತಿ ಚಿತ್ರಹಿಂಸೆ ನೀಡುತ್ತಾ ಅವರ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ಕೊಲೆ ಮಾಡಿದ ಘಟನೆಯಲ್ಲಿ ಇಡಿ ದೇಶವೆ ತಲೆತಗ್ಗಿಸುವಂತಹ ಅಮಾನುಷ ಕೃತ್ಯವಾಗಿದೆ.

ಉಡುಪಿಯ ನೇತ್ರ ಜ್ಯೋತಿ ಕಾಲೇಜಿನಲ್ಲಿ ಹಿಂದೂ ಯುವತಿಯರು ಶೌಚಾಲಯವನ್ನು ಬಳಸುವ ವೀಡಿಯೋವನ್ನು ಮುಸ್ಲಿಂ ಯುವತಿಯರು ಮಾಡಿದ್ದು, ಈಗಾಗಲೇ ಮಾಧ್ಯಮಗಳಲ್ಲಿ ಬಂದಂತೆ ತಮಾಷೆಗಾಗಿ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಮಾಡಿದ್ದೇವೆ ಎಂಬುದು ತೀರ ಬಾಲಿಷ ಹಾಗೂ ಪ್ರಕರಣವನ್ನು ದಾರಿ ತಪ್ಪಿಸುವ ಹೇಳಿಕೆ ಶೌಚ ಕ್ರಿಯೆ ಮಾಡುವಂತ ಖಾಸಗಿ ಜಾಗದಲ್ಲಿ ವಿಡಿಯೋ ಚಿತ್ರೀಕರಣ ಮಾಡುವಂತ ಹೇಯ ಕೃತ್ಯದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳ ವಿರುದ್ಧ ಪೊಲೀಸ್ ಇಲಾಖೆ ಯಾವುದೇ ಒತ್ತಡಕ್ಕೆ ಒಳಗಾಗದೆ ಸತ್ಯಾಸತ್ಯತೆಯನ್ನು ಪರಿಶೀಲಿಸಿ ಕ್ರಮ ತೆಗೆದುಕೊಂಡು ಇದರ ಹಿಂದಿರುವಂತ ಷಡ್ಯಂತ್ರವನ್ನು ಬಯಲಿಗೆಳೆಯಬೇಕು. ಈ ಕುರಿತು ಜಿಲ್ಲಾಡಳಿತ ಸೂಕ್ತ ರೀತಿಯ ತನಿಖೆಯನ್ನು ನಡೆಸಿ ತಪ್ಪಿತಸ್ಥರ ಮೇಲೆ ಕಾನೂನಾತ್ಮಕ ಕಠಿಣ ಕ್ರಮವನ್ನು ತೆಗೆದುಕೊಳ್ಳಬೇಕೆಂದು ಆಗ್ರಹಿಸಿದೆ.

ಧರ್ಮಸ್ಥಳದ ಸೌರ್ಜನ್ಯಳ ವಿರುದ್ದ ಹನ್ನೂಂದು ವರ್ಷಗಳ ಹಿಂದೆ ನಡೆದಂತಹ ಅನ್ಯಾಯ ಇದಕ್ಕೆ ನಿರಪರಾಧಿಗಳಿಗೆ ಶಿಕ್ಷೆಯಾಗಿರುವುದು ಶೋಚನೀಯವಾಗಿದೆ. ಇದರ ಬಗ್ಗೆ ಕೊಲಕುಂಶವಾಗಿ ಪರಿಶೀಲನೆಯನ್ನು ನಡೆಸುವುದರ ಮೂಲಕ ತಪ್ಪಿತಸ್ಥರಿಗೆ ಶಿಕ್ಷೆಯನ್ನು ನೀಡಬೇಕಿದೆ. ಇದರಿಂದ ಸೌರ್ಜನ್ಯಳ ಸಾವಿಗೆ ನ್ಯಾಯವನ್ನು ಕೂಡಿಸಬೇಕಿದೆ ಎಂದು ಮಹಿಳಾ ಸಂಘಟನೆಗಳು  ಒತ್ತಾಯಿಸಿದೆ.

ಪ್ರಧಾನ ಮಂತ್ರಿಗಳು ಈ ಎಲ್ಲಾ ಪ್ರಕರಣಗಳನ್ನು ಸೂಕ್ಷ್ಮವಾಗಿ ಗಮನಿಸಿ, ದೇಶ, ರಾಜ್ಯ ಮತ್ತು ಜಿಲ್ಲೆಯ ಮಹಿಳೆಯರಿಗೆ ಸುರಕ್ಷಿತವಾದ ಕಾನೂನು ಅಗತ್ಯ ಇದೆ. ಸಮಸ್ತ ಮಹಿಳೆಯರಿಗೆ ಸುರಕ್ಷತೆ ಹಾಗೂ ಗೌರವದಿಂದ ಬದುಕಲು ವ್ಯವಸ್ಥೆಯನ್ನು ಕಲ್ಪಿಸಬೇಕೆಂದು ಆಗ್ರಹಿಸಿದರು.

ಈ ಪ್ರತಿಭಟನೆಯಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾ ಸಭಾದ ಮಹಿಳಾ ಘಟನಕದ ಅಧ್ಯಕ್ಷರಾದ ಶ್ರೀಮತಿ ನಿರ್ಮಲ ಬಸವರಾಜು, ಕಾರ್ಯದರ್ಶಿ ಶ್ರೀಮತಿ ರೀನಾ ವೀರಭದ್ರಪ್ಪ, ಲಿಂಗಾಯತ್ ಶಿವಸಿಂಪಿ ಮಹಿಳಾ ಘಟಕದ ಅಧ್ಯಕ್ಷರಾದ ಶ್ರೀಮತಿ ಅನಿತಾ ಮುರುಗೇಶ್, ಕಾರ್ಯದರ್ಶಿ ಶ್ರೀಮತಿ ಕವಿತಾ, ಶ್ರೀಮತಿ ಗಾಯತ್ರಿ ಶಿವರಾಂ, ಮಂಗಳಾ ವೀರಣ್ಣ, ಅನಿತಾ, ಸರೋಜ ಲಿಂಗರಾಜು, ಕುಸುಮ ರಾಜಣ್ಣ, ಶೈಲಾ ಉಮೇಶ್, ಸರೋಜ ಲಿಂಗಮೂರ್ತಿ, ಸುಜಾತಾ, ಕವಿತಾ ಸುರೇಶ್, ಕೆ.ಪಿ.ಎಂ.ಗಣೇಶಯ್ಯ, ಡಾ.ಲೋಕೇಶ ಅಗಸನಕಟ್ಟೆ, ಡಾ.ಸಂಗೇನಹಳ್ಳಿ ಅಶೋಕ್ ಕುಮಾರ್ ಸೇರಿದಂತೆ ಇತರರು ಭಾಗವಹಿಸಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಿಇಎನ್ ಪೊಲೀಸರ ದಾಳಿ : ಅಂತರ್ ರಾಜ್ಯ ಗಾಂಜಾ ಪೆಡ್ಲರ್ ಬಂಧನ

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 22 : ಆಂದ್ರಪ್ರದೇಶದ ವಿಶಾಖಪಟ್ಟಣಂ ನಿಂದ ಗಾಂಜಾವನ್ನು ತಂದು ಚಿತ್ರದುರ್ಗ ನಗರಕ್ಕೆ ಬಂದು ಗಾಂಜಾ ಮಾರಾಟ ಮಾಡುತ್ತಿದ್ದ ಡ್ರಗ್ಸ್‌ ಪೆಡ್ಲರ್‌ನನ್ನು ಸಿಇಎನ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಿಹಾರದ ಹರಿ ಓಂಕುಮಾರ್(24

ಪೆಟ್ರೋಲ್ ಬಂಕಿನಲ್ಲಿ ವಂಚನೆ ಆರೋಪ : ಗ್ರಾಹಕರು ಹಾಗೂ ಸಿಬ್ಬಂದಿಗಳ ನಡುವೆ ಮಾತಿನ ಚಕಮಕಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ನವೆಂಬರ್. 22 : ಬೈಕ್ ಗಳಿಗೆ ಪೆಟ್ರೋಲ್ ಹಾಕುವ ವೇಳೆ ಗ್ರಾಹಕರಿಗೆ ಇಲ್ಲಿನ ಸಿಬ್ಬಂದಿ ವಂಚನೆ

ಅಕ್ರಮ ಕಸಾಯಿ ಖಾನೆ ಬಂದ್ ಮಾಡಿ : ದಾದಾ ಪೀರ್ ಆಗ್ರಹ : ವಿಡಿಯೋ ವೈರಲ್..!

ಸುದ್ದಿಒನ್, ಹಿರಿಯೂರು : ಅಕ್ರಮವಾಗಿ ಕಸಾಯಿ ಖಾನೆ ನಡೆಸುತ್ತಿರುವವರ ವಿರುದ್ಧ ದಾದಾ ಪೀರ್ ಎಂಬುವವರು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದಾದಾ ಪೀರ್ 6ನೇ ವಾರ್ಡ್ ನಲ್ಲಿ ವಾಸಿಸುವವ ವ್ಯಕ್ತಿಯಾಗಿದ್ದಾರೆ. ಕಸಾಯಿ ಖಾನೆಯಿಂದ ಮಕ್ಕಳು ಅನಾರೋಗ್ಯಕ್ಕೆ

error: Content is protected !!