Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸವರ್ಣಿಯರಿಂದ ದೌರ್ಜನ್ಯ : ಕೋನಿಗರಹಳ್ಳಿ ಗ್ರಾಮಸ್ಥರಿಂದ ಪ್ರತಿಭಟನೆ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 24 : ಸವರ್ಣಿಯರಿಂದ ದೌರ್ಜನ್ಯಕ್ಕೊಳಗಾಗಿರುವ ಚಳ್ಳಕೆರೆ ತಾಲ್ಲೂಕು ಪರಶುರಾಂಪುರ ಹೋಬಳಿ ಟಿ.ಎನ್.ಕೋಟೆ ಗ್ರಾಮ ಪಂಚಾಯಿತಿಗೆ ಸೇರಿದ ಕೋನಿಗರಹಳ್ಳಿ ಗ್ರಾಮಸ್ಥರು ಜಿಲ್ಲಾಧಿಕಾರಿ ಕಚೇರಿ ವೃತ್ತದಲ್ಲಿ ಶುಕ್ರವಾರ ಧರಣಿ ಸತ್ಯಾಗ್ರಹ ನಡೆಸಿದರು.

 

ದಿನಾಂಕ : 29-5-2014 ರಂದು ಸವರ್ಣಿಯರಿಂದ ದೌರ್ಜನ್ಯ, ಬಹಿಷ್ಕಾರಕ್ಕೊಳಪಟ್ಟಿರುವ ನಾವುಗಳು ಸ್ವಾವಲಂಭಿಯಾಗಿ ಬದುಕು ಕಟ್ಟಿಕೊಳ್ಳಲು ಬೇಕಾಗಿರುವ ಮೂಲಭೂತ ಸೌಲಭ್ಯಗಳು ಇದುವರೆವಿಗೂ ಸಿಕ್ಕಿಲ್ಲ. ವಿವಿಧ ಯೋಜನೆಯಡಿ ಸಾಲ ಸೌಲಭ್ಯಗಳನ್ನು ದೊರಕಿಸುವಲ್ಲಿ ಸಂತ್ರಸ್ತ ಕುಟುಂಬಗಳು ಮತ್ತು ಅವಲಂಭಿತರನ್ನು ಆಯ್ಕೆ ಮಾಡಿಕೊಳ್ಳುವ ಬದಲಾಗಿ ಅಧಿಕಾರಿಗಳು ಪ್ರಭಾವಕ್ಕೆ ಒಳಗಾಗಿ ಮನಸೋಇಚ್ಚೆ ಪಟ್ಟಿಯನ್ನು ತಯಾರಿಸಿ ಸರ್ಕಾರಕ್ಕೆ ಕಳಿಸಿದ್ದಾರೆ. ಅಧಿಕಾರಿಗಳು ಎಸಗಿರುವ ಲೋಪವನ್ನು ಪರಿಶೀಲಿಸಿ ಪಟ್ಟಿಯಲ್ಲಿ ಕೈಬಿಟ್ಟಿರುವವರ ಹೆಸರುಗಳನ್ನು ಸೇರಿಸಿ ಸರ್ಕಾರಕ್ಕೆ ಸಲ್ಲಿಸುವಂತೆ ಧರಣಿನಿರತರು ಜಿಲ್ಲಾಧಿಕಾರಿಯನ್ನು ಒತ್ತಾಯಿಸಿದರು.

 

ಗೋವಿಂದಪ್ಪ, ಶ್ರೀನಿವಾಸ, ತಿಪ್ಪೇಸ್ವಾಮಿ, ಅಭಿಷೇಕ್, ಮಂಜುನಾಥ, ಲಕ್ಷ್ಮಕ್ಕ, ಮಮತ, ಎಂ.ಮೇಘ, ಭಾರತಮ್ಮ, ಲಕ್ಷ್ಮಮ್ಮ, ಮೀನಾಕ್ಷಮ್ಮ ಇನ್ನು ಅನೇಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...