ಡೆಹ್ರಾಡೂನ್: ಉತ್ತರಾಖಂಡದಲ್ಲಿ ಸುರಿಯುತ್ತಿರುವ ಕುಂಭ ದ್ರೋಣ ಮಳೆಗೆ ಅಲ್ಲಿನ ಜನರು ತತ್ತರಿಸಿ ಹೋಗಿದ್ದಾರೆ. ಸತತ ಮೂರನೇ ದಿನವೂ ಮಳೆ ಅವಾಂತರ ಸೃಷ್ಟಿಸುತ್ತಿದೆ. ರಾಜ್ಯದ ಎಲ್ಲ ನದಿಗಳು ಈಗಾಗಲೇ ತುಂಬಿ ಹರಿಯುತ್ತಿವೆ. ಹಲವೆಡೆ ಭೂಕುಸಿತಗಳು ಸಂಭವಿಸಿದೆ. ಅಲ್ಲಿನ ಗೌಲಾ ನದಿ ಪ್ರವಾಹ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಹಲ್ದುಚೂರ್ ಮತ್ತು ಲಾಲ್ಕುನ್ ನದಿಗಳ ನಡುವೆ ಪಚ್ಲ್ಯಾಂಗ್ ಎಂಬ ದ್ವೀಪವಿದೆ. ಅಲ್ಲಿ ಆನೆ ಹಿಂಡಿನಿಂದ ಕಳೆದು ಹೋದ ಆನೆ ಹೊಳೆಯ ಮಧ್ಯದಲ್ಲಿ ಸಿಲುಕಿಕೊಂಡಿದೆ.
https://twitter.com/realabhipandey1/status/1450394764042391553?t=pgVsD0LGwmUVrwtkfq54vg&s=19
ಆನೆ ಮುಂದೆ ಸಾಗಲು ಸಾಧ್ಯವಾಗದೆ ಅಲ್ಲೇ ನೀರಿನಲ್ಲಿ ನಿಂತಿದೆ. ಈ ದೃಶ್ಯವನ್ನು ಸಾಮಾಜಿಕ ಮಾಧ್ಯಮದಲ್ಲಿ ಟ್ವಿಟರ್ ಬಳಕೆದಾರ ಅಭಿಷೇಕ್ ಪಾಂಡೆ ಪೋಸ್ಟ್ ಮಾಡಿದ್ದಾರೆ. ಇದೀಗ ವೈರಲ್ ಆಗಿದೆ. ಇದಕ್ಕೆ ಪ್ರತಿಕ್ರಿಯಿಸಿದ ಸ್ಥಳೀಯ ಅರಣ್ಯ ವಿಭಾಗೀಯ ಅಧಿಕಾರಿ ಸಂದೀಪ್ ಕುಮಾರ್ ತಮ್ಮ ಸಿಬ್ಬಂದಿಯನ್ನು ಸ್ಥಳಕ್ಕೆ ಕಳುಹಿಸಿ ಆನೆಯನ್ನು ರಕ್ಷಿಸಿ ಕಾಡಿಗೆ ಕಳುಹಿಸಿದ್ದಾರೆ.
ಪ್ರಸ್ತುತ ಆನೆ ಅಪಾಯದಿಂದ ಪಾರಾಗಿದೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಇದನ್ನು ನೋಡಿದ ನೆಟ್ಟಿಗರು ಆನೆಯ ಜೀವ ಉಳಿಸಿದ ಸಿಬ್ಬಂದಿಗೆ ಧನ್ಯವಾದಗಳನ್ನು ಅರ್ಪಿಸುತ್ತಿದ್ದಾರೆ. ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ ಪ್ರವಾಹದಿಂದಾಗಿ ಈಗಾಗಲೇ ರಾಜ್ಯದಲ್ಲಿ ರೆಡ್ ಅಲರ್ಟ್ ಘೋಷಿಸಿದ್ದಾರೆ ಎಂದು ತಿಳಿದುಬಂದಿದೆ.