ನವದೆಹಲಿ: ಟೀಂ ಇಂಡಿಯಾದ ಟೆಸ್ಟ್ ನಾಯಕತ್ವವನ್ನು ತ್ಯಜಿಸಿದ ವಿರಾಟ್ ಕೊಹ್ಲಿ ತೆಗೆದುಕೊಂಡಿರುವ ನಿರ್ಧಾರಕ್ಕೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಪ್ರತಿಕ್ರಿಯಿಸಿದೆ.
ಬಿಸಿಸಿಐ ಕೊಹ್ಲಿ ನಿರ್ಧಾರವನ್ನು ಸ್ವಾಗತಿಸಿದ್ದು, ಅಭಿನಂದನೆ ಸಲ್ಲಿಸಿದೆ. ಬಿಸಿಸಿಐ ಕಾರ್ಯದರ್ಶಿ ಜೈ ಶಾ ಕೊಹ್ಲಿ ನಿರ್ಧಾರದ ಬಳಿಕ ಪ್ರತಿಕ್ರಿಯಿಸಿದ್ದಾರೆ.
BCCI congratulates #TeamIndia captain @imVkohli for his admirable leadership qualities that took the Test team to unprecedented heights. He led India in 68 matches and has been the most successful captain with 40 wins. https://t.co/oRV3sgPQ2G
— BCCI (@BCCI) January 15, 2022
‘ಟೀಂ ಇಂಡಿಯಾ ನಾಯಕನಾಗಿ ತಂಡವನ್ನು ಉನ್ನತ ಮಟ್ಟಕ್ಕೆ ಕೊಂಡೊಯ್ದಿದ್ದಾರೆ. ನಿಮ್ಮ ನಾಯಕತ್ವದಲ್ಲಿ ಭಾರತ ತಂಡ ದೇಶ-ವಿದೇಶಗಳಲ್ಲಿ ಬಲಿಷ್ಠ ಶಕ್ತಿಯಾಗಿ ಬೆಳೆದಿದೆ. ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್‌ನಲ್ಲಿ ನಿಮ್ಮ ನಾಯಕತ್ವದಲ್ಲಿ ಸಾಧನೆಗಳು ವಿಶೇಷ. ಅವಿಸ್ಮರಣೀಯ’ ಎಂದು ಜೈ ಶಾ ಹೇಳಿದ್ದಾರೆ.
ಮತ್ತೊಂದೆಡೆ, ಕೊಹ್ಲಿ ಅವರ ಈ ದಿಢೀರ್ ನಿರ್ಧಾರಕ್ಕೆ ಬಿಸಿಸಿಐ ತನ್ನ ಟ್ವಿಟರ್ ಖಾತೆಯಲ್ಲಿ ಪ್ರತಿಕ್ರಿಯಿಸಿದೆ. ಕೊಹ್ಲಿ ನಾಯಕತ್ವದಲ್ಲಿ ಭಾರತ ತಂಡ ಹಲವು ಮೈಲಿಗಲ್ಲುಗಳನ್ನು ಸಾಧಿಸಿದ್ದು, ಮಾತ್ರವಲ್ಲದೆ ಅತ್ಯುನ್ನತ ಮಟ್ಟಕ್ಕೆ ಏರಿದೆ. ಕೊಹ್ಲಿ ಭಾರತವನ್ನು ಪ್ರತಿನಿಧಿಸಿದ 68 ಟೆಸ್ಟ್ ಪಂದ್ಯಗಳ ಪೈಕಿ 40 ರಲ್ಲಿ ಗೆಲುವು ಸಾಧಿಸಿದೆ ಎಂದು ಬಿಸಿಸಿಐ ಟ್ವೀಟ್ ಮಾಡಿದೆ.