Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಚಿತ್ರದುರ್ಗದಲ್ಲಿ ವಿಶಾಖ ಮಳೆಯ ಆರ್ಭಟ | ಜಿಲ್ಲೆಯಾದ್ಯಂತ ಧಾರಾಕಾರ ಮಳೆ, ಕೆಲವೆಡೆ ಹಾನಿ…!

---Advertisement---

 

ಸುದ್ದಿಒನ್, ಚಿತ್ರದುರ್ಗ, ನವಂಬರ್.08  : ಜಿಲ್ಲೆಯಲ್ಲಿ ವಿಶಾಖ ಮಳೆ ಆರ್ಭಟ ಜೋರಾಗಿದೆ. ಬಿಸಿಲಿಗೆ ತತ್ತರಿಸಿದ್ದ ಜನತೆಗೆ ಚಿತ್ರದುರ್ಗದಲ್ಲಿ ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಮಳೆ ತಂಪೆರದಿದೆ. ಬುಧವಾರ ಸಂಜೆಯಿಂದ  ಭರ್ಜರಿ ಮಳೆ ಸುರಿಯುತ್ತಿದೆ. ಕಳೆದ ಎರಡು ದಿನ ಸ್ವಲ್ಪ ಮಳೆಯಾಗಿತ್ತು. ಆದರೆ ಬುಧವಾರ ಸಂಜೆಯಿಂದ ಧಾರಾಕಾರವಾಗಿ ಮಳೆ ಸುರಿಯುತ್ತಿದೆ.ರಾತ್ರಿ 8 ಗಂಟೆಯಾದರೂ ಮಳೆ ಸುರಿಯುತ್ತಲೇ ಇತ್ತು.

ಈ ವಿಶಾಖ ಮಳೆಯು ಈ ತಿಂಗಳು ಮೂರನೇ ತಾರೀಖಿನಂದ ಆರಂಭವಾಗಿ ಮುಂದಿನ ಹತ್ತು ದಿನಗಳ ಕಾಲ ಸುರಿಯುವ ಸಾಧ್ಯತೆಯಿದೆ.

ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದ ಚರಂಡಿಯಲ್ಲಿ ಪ್ರವಾಹದಂತೆ ನೀರು ಹರಿಯುತ್ತಿತ್ತು. ರಸ್ತೆಯಲ್ಲಿನ ಗುಂಡಿಯಲ್ಲಿ ನೀರು ತುಂಬಿಕೊಂಡು ಕೆಲವೆಡೆ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿತು.

ನಗರದ ಗಾಂಧಿ ವೃತ್ತದ ಬಳಿಯ ಬೀದಿಬದಿಯ ವ್ಯಾಪಾರಿಗಳು ಪರದಾಡಿದರು.
ನಗರಕ್ಕೆ ಹೊಂದಿಕೊಂಡಿರುವ ರಾಷ್ಟ್ರೀಯ ಹೆದ್ದಾರಿಯ ಮೇಲ್ಸೇತುವೆ ಬಳಿ, ರೈಲ್ವೆ ಕೆಳಸೇತುವೆ ಕೆಳಗೆ, ತುರುವನೂರಿಗೆ ಹೋಗುವ ರಸ್ತೆಯ ಕೆಳಸೇತುವೆ ಸೇರಿದಂತೆ ಹಲವೆಡೆ ನೀರು ನಿಂತಿದ್ದು ವಾಹನ ಸವಾರರು ಪರದಾಡುವಂತಾಯಿತು.

ಮಳೆಯೇ ಇಲ್ಲದೇ ಕಂಗಾಲಾಗಿದ್ದ ರೈತನ ಮೊಗದಲ್ಲಿ ಮಂದಹಾಸ ಮೂಡಿದೆ. ಅಡಿಕೆ ಮತ್ತು ತೆಂಗಿನ ತೋಟಗಳಿಗೆ ಹಿಂಗಾರು ಮಳೆಯಿಂದ ಅನುಕೂಲವಾಗಿದ್ದರೆ, ಈಗಾಗಲೇ ಕೊಯಿಲಿಗೆ ಬಂದಿರುವ ರಾಗಿ, ಶೇಂಗಾ, ಮೆಕ್ಕೆಜೋಳ ಬೆಳೆ ನೆಲಕಚ್ಚುವ ಭೀತಿ ಎದುರಾಗಿದೆ. ಮುಂದಿನ ದಿನಗಳಲ್ಲಿ ಕಡಲೆ, ಬಿಳಿ ಕುಸುಮೆ, ಸೂರ್ಯಕಾಂತಿ ಹಾಗೂ ಜೋಳದಂತಹ ಕೃಷಿ ಬೆಳೆಗಳನ್ನು ಬಿತ್ತನೆ ಮಾಡುವ ರೈತರಿಗೆ ಈ ಮಳೆ ಅನುಕೂಲವಾಗಲಿದೆ. ಮುಂಗಾರು ಹಂಗಾಮು ಇಲ್ಲದೆ ನಿರಾಶನಾಗಿದ್ದ ರೈತನಿಗೆ ಹಿಂಗಾರು ಮಳೆ ಭರವಸೆ ಮೂಡಿಸಿದೆ.

ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗುತ್ತಿದ್ದು,
ಮಂಗಳವಾರ ಸುರಿದ ಮಳೆ ವಿವರದನ್ವಯ ಜಿಲ್ಲೆಯ ಹೊಸದುರ್ಗದಲ್ಲಿ  26.4 ಮಿ.ಮೀ ಮಳೆಯಾಗಿದ್ದು, ಇದು ಜಿಲ್ಲೆಯ ಅತ್ಯಧಿಕ ಮಳೆಯಾಗಿದೆ.

ಹೊಸದುರ್ಗ ತಾಲ್ಲೂಕಿನ ಬಾಗೂರಿನಲ್ಲಿ 4.3 ಮಿ.ಮೀ, ಮತ್ತೋಡಿನಲ್ಲಿ 6.3 ಮಿ.ಮೀ ಮಳೆಯಾಗಿದೆ. ಹೊಳಲ್ಕೆರೆ ತಾಲ್ಲೂಕಿನ ಹೊಳಲ್ಕೆರೆಯಲ್ಲಿ 2.4 ಮಿ.ಮೀ, ರಾಮಗಿರಿ 24.4 ಮಿ.ಮೀ ಮಳೆಯಾಗಿದೆ.

24 ಮನೆಗಳು ಭಾಗಶಃ ಹಾನಿ: ಮಂಗಳವಾರ ಸುರಿದ ಮಳೆಗೆ ಜಿಲ್ಲೆಯಾದ್ಯಂತ  ಒಟ್ಟು 24 ಮನೆಗಳು ಭಾಗಶಃ ಹಾನಿಯಾಗಿದ್ದು, 1 ಸಣ್ಣ ಜಾನುವಾರು ಹಾನಿಯಾಗಿದೆ.
ಹೊಸದುರ್ಗ ತಾಲ್ಲೂಕಿನಲ್ಲಿ 17 ಮನೆಗಳು ಭಾಗಶಃ ಹಾನಿಯಾಗಿದೆ. ಹೊಳಲ್ಕೆರೆ ತಾಲ್ಲೂಕಿನಲ್ಲಿ 5 ಮನೆಗಳು ಭಾಗಶಃ ಹಾನಿಯಾಗಿದೆ. ಮೊಳಕಾಲ್ಮುರು ತಾಲ್ಲೂಕಿನಲ್ಲಿ 2 ಮನೆ ಭಾಗಶಃ ಹಾನಿಯಾಗಿದೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...