Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ವಿಜೃಂಭಣೆಯಿಂದ ಜರುಗಿದ ಹಿಂದೂ ಮಹಾಗಣಪತಿಯ ವಿಸರ್ಜನಾ ಯಾತ್ರೆ : ಮತಾಂಧ ಶಕ್ತಿಗೆ ಕಡಿವಾಣ ಹಾಕಲು ಹಿಂದೂಗಳು ಒಗ್ಗಟ್ಟಾಗಿ : ಪ್ರಭಂಜನ್ ಸೂರ್ಯ

---Advertisement---

ಸುದ್ದಿಒನ್, ಹಿರಿಯೂರು, ಸೆಪ್ಟೆಂಬರ್. 11 : ಸಮಾಜದಲ್ಲಿ ಹಿಂದೂಗಳನ್ನು ರಕ್ಷಿಸುವ ಹಾಗೂ ಮತಾಂಧ ಶಕ್ತಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಹಿಂದೂಗಳು ಒಂದಾಗಬೇಕಿದೆ ಎಂದು ಬಜರಂಗದಳ ದಕ್ಷಿಣ ಕರ್ನಾಟಕ ಪ್ರಾಂತ ಸಂಯೋಜಕ ಪ್ರಭಂಜನ್ ಸೂರ್ಯ ಹೇಳಿದರು.

ನಗರದ ಬಿಇಓ ವೃತ್ತದ ಸಿಂಧೂರ ವೇದಿಕೆಯಲ್ಲಿ ನಡೆದ ಹಿಂದೂ ಮಹಾಗಣಪತಿ ವಿಸರ್ಜನೆ ಮೆರವಣಿಗೆ ಕಾರ್ಯಕ್ರಮದ ದಿಕ್ಸೂಚಿ ಭಾಷಣದಲ್ಲಿ ಅವರು ಮಾತನಾಡಿದರು.

ದೇಶದ ಸ್ವಾತಂತ್ರ್ಯಕ್ಕಾಗಿ ಹಾಗೂ ಹಿಂದೂಗಳನ್ನು ಒಂದುಗೂಡಿಸಲು ಮನೆಯಲ್ಲಿದ್ದ ಗಣೇಶನನ್ನು ಹೊರಗಡೆ ತಂದು ಆಚರಿಸುವ ಪದ್ಧತಿ ಸ್ವಾತಂತ್ರ್ಯ ಹೋರಾಟದ ಕಾಲದಲ್ಲಿ ಶುರುವಾಯಿತು. ಆಗ ಬ್ರಿಟಿಷರ ವಿರುದ್ಧ ಹೋರಾಡಲು ಹಿಂದೂಗಳು ಒಂದಾಗಿದ್ದರು. ಗಣೇಶನ ಮೆರವಣಿಗೆಯಲ್ಲಿ ಡಿಜೆ ನಿಷೇಧ ಮಾಡುವುದು, ಮೆರವಣಿಗೆಗೆ ಕರಾರು ಹಾಕುವುದು ಮಾಡುವ ಮೂಲಕ ಕಾಂಗ್ರೆಸ್ ಸರ್ಕಾರ ಹಿಂದೂಗಳನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದೆ. ಕೇವಲ ಮತ ಗಳಿಕೆಗಾಗಿ ಗಣೇಶೋತ್ಸವದ ಮೇಲೆ ನಿಮ್ಮ ಬ್ರಹ್ಮಾಸ್ತ್ರ ಬೇಡ. ಗಣಪತಿ ಹಬ್ಬ ಬಂದರೆ ಕೆಲವರಿಗೆ ಭಯ ಶುರುವಾಗುತ್ತದೆ. ಹಿರಿಯೂರಿನ ಗಣೇಶೋತ್ಸವ ಒಂದು ದಿನದ ಮೆರವಣಿಗೆಗೆ ಸೀಮಿತವಾಗಬಾರದು. ಯುವ ಪೀಳಿಗೆಯು ಗಣೇಶೋತ್ಸವದ ಮೂಲಕ ಒಂದಾಗಬೇಕಿದೆ. ಹಿಂದೂಗಳು ಎಚ್ಚೆತ್ತುಕೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ನಿಮ್ಮ ಮನೆಗಳಿಗೆ ಕಲ್ಲು ಬೀಳುವ ಸಂಭವಿರುತ್ತದೆ. ಈ ಬಗ್ಗೆ ಹಿಂದೂಗಳು ಎಚ್ಚರಿಕೆ ವಹಿಸಬೇಕು. ನಾವು ಶಾಂತಿ ಪ್ರಿಯರು. ಆದರೆ ಹಿಂದೂ ಸಮಾಜ ವಿರಾಟ ಹನುಮನ ರೂಪ ಪಡೆಯುವ ಕಾಲ ಬರುವಂತೆ ಯಾರೂ ಮಾಡಬಾರದು ಎಂದರು.

ನಗರದ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ವತಿಯಿಂದ ಪ್ರತಿಷ್ಠಾಪಿಸಿದ್ದ ಹಿಂದೂ ಮಹಾಗಣಪತಿಯನ್ನು ಅಲಂಕರಿಸಿದ ಟ್ರಾಕ್ಟರ್ ನಲ್ಲಿ ಕೂರಿಸಿ ಭವ್ಯ ಮೆರವಣಿಗೆಯ ಮೂಲಕ ಶಂಕರ ಮಠದಿಂದ ಮುಖ್ಯ ರಸ್ತೆಗೆ ಕರೆ ತರಲಾಯಿತು. ಬಿಇಓ ಕಚೇರಿ ಮುಂಭಾಗ ವೇದಿಕೆ ಕಾರ್ಯಕ್ರಮ ಮುಗಿದ ಬಳಿಕ ಮದ್ಯಾಹ್ನ 2 ವರೆಗೆ ಆರಂಭವಾದ ಶೋಭಾಯಾತ್ರೆ ಗಾಂಧಿ ವೃತ್ತ, ಹುಳಿಯಾರು ರಸ್ತೆ, ಚರ್ಚ್ ರಸ್ತೆ, ಆಸ್ಪತ್ರೆ ರಸ್ತೆ ಮೂಲಕ ರಂಜಿತಾ ಹೋಟೆಲ್ ಮುಂಭಾಗದಿಂದ ಮತ್ತೆ ಗಾಂಧಿ ವೃತ್ತಕ್ಕೆ ಸಂಜೆ ಬಂದಾಗ ಟ್ರಸ್ ಮಾದರಿಯ ಲೇಸರ್ ಲೈಟಿಂಗ್ಸ್ ಮೂಲಕ ಜಗಮಗಿಸುವ ವಿದ್ಯುತ್ ದೀಪಗಳಿಂದ ಗಣೇಶ ಮೂರ್ತಿ ಪ್ರಜ್ವಲಿಸುವಂತಹ ವ್ಯವಸ್ಥೆ ಮಾಡಲಾಗಿತ್ತು. ಕೇಸರಿ ಶಾಲು ಹೊದ್ದ ಯುವಕರು ಮೆರವಣಿಗೆಯುದ್ಧಕ್ಕೂ ಕುಣಿದು ಕುಪ್ಪಳಿಸಿದರು.

ಮೆರವಣಿಗೆಯುದ್ದಕ್ಕೂ ಜೈ ಶ್ರೀ ರಾಮ್ ಘೋಷಣೆ ಕೂಗಿ ಸಂಭ್ರಮ ವ್ಯಕ್ತಪಡಿಸಿದರು. ಕೊನೆಗೆ ಬಬ್ಬೂರು ಫಾರಂ ಬಳಿ ಇರುವ ತೋಟಗಾರಿಕಾ ಕಾಲೇಜು ಹಿಂಭಾಗದ ಬಾವಿಯಲ್ಲಿ ಗಣೇಶ ಮೂರ್ತಿಯನ್ನು ವಿಸರ್ಜನೆ ಮಾಡಲಾಯಿತು. ಮೆರವಣಿಗೆ ಸುಗಮವಾಗಿ ಸಾಗಲು ಪೊಲೀಸರು ಸೂಕ್ತ ಬಂದೋಬಸ್ತ್ ಒದಗಿಸಿದ್ದರು. ಪಟ್ಟಣದ ಒಳಗಡೆ ಬೃಹತ್ ವಾಹನಗಳು ಬರುವುದನ್ನು ನಿಷೇಧಿಸಲಾಗಿತ್ತು.

ಈ ಸಂದರ್ಭದಲ್ಲಿ ಹಿಂದೂ ಮಹಾಗಣಪತಿ ಸಮಿತಿ ಅಧ್ಯಕ್ಷ ಡಿ. ನಾರಾಯಣ ರೆಡ್ಡಿ, ಗೌರವಾಧ್ಯಕ್ಷ ಅಮರ್ ನಾಥ್, ವಿಶ್ವ ಹಿಂದೂ ಪರಿಷತ್ ಅಧ್ಯಕ್ಷ ಪ್ರಶಾಂತ್, ರಾಜ್ಯ ಕಾಡುಗೊಲ್ಲ ಸಂಘದ ರಾಜ್ಯಾಧ್ಯಕ್ಷ ಹಾಗೂ ಮಾಜಿ ಬಿಬಿಎಂಪಿ ಸದಸ್ಯ ರಾಜಣ್ಣ, ಮಾಜಿ ಜಿಪಂ ಸದಸ್ಯ ದ್ಯಾಮೇಗೌಡ, ಬಿಜೆಪಿ ತಾಲೂಕು ಅಧ್ಯಕ್ಷ ಅಭಿನಂದನ್, ಬಿಜೆಪಿ ಹಿರಿಯ ಮುಖಂಡ ಎನ್ ಆರ್. ಲಕ್ಷ್ಮೀಕಾಂತ್, ತಾಪಂ ಮಾಜಿ ಸದಸ್ಯ ಹಾಲಪ್ಪ, ಮಾಜಿ ಬಿಜೆಪಿ ಮಂಡಲ ಅಧ್ಯಕ್ಷ ವಿಶ್ವನಾಥ್, ಎ. ರಾಘವೇಂದ್ರ, ಎಂಎಸ್ ರಾಘವೇಂದ್ರ, ಚೇತನ್ , ಮಂಜುನಾಥೇಶ್ವರ, ನವೀನ್, ಪ್ರಮೋದ್, ವೆಂಕಟೇಶ್, ಎಬಿವಿಪಿ ಯೋಗೇಶ್ ಮತ್ತು ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ಕಾರ್ಯಕರ್ತರು ಉಪಸ್ಥಿತರಿದ್ದರು.

 

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now