Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಅಭಿಮಾನ್ ಸ್ಟುಡಿಯೋದಲ್ಲಿ ವಿಷ್ಣುದಾದಾ ವಿಜಯೋತ್ಸವ : ಹೈಕೋರ್ಟ್ ತಡೆ, ಅಭಿಮಾನಿಗಳ ನಿರ್ಧಾರ ಮುಂದೇನು..?

---Advertisement---

ಬೆಂಗಳೂರು: ಈ ಬಾರಿಯ ವಿಷ್ಣುವರ್ಧನ್ ಅವರ ಹುಟ್ಟುಹಬ್ಬವನ್ನ ಬಹಳ ಅದ್ದೂರಿಯಾಗಿ ಮಾಡಬೇಕು ಅಂತ ಅಭಿಮಾನಿಗಳೆಲ್ಲಾ ಆಸೆ ಪಟ್ಟಿದ್ದರು. ಆದ್ರೆ ಅದೇ ಸಮಯಕ್ಕೆ ವಿಷ್ಣು ದಾದಾ ಅವರ ಸಮಾಧಿಯನ್ನೇ ನೆಲಸಮ ಮಾಡಿ ಎಲ್ಲಾ ಆಸೆಗಳನ್ನ ಮಣ್ಣು ಪಾಲು ಮಾಡಿ ಹಾಕಿದ್ರು. ಬಳಿಕ ರಾಜ್ಯ ಸರ್ಕಾರ ಆ ಜಾಗವನ್ನ ಮುಟ್ಟುಗೋಲು ಹಾಕಿಕೊಂಡ ಮೇಲೆ ಅಭಿಮಾನಿಗಳು ಮತ್ತಷ್ಟು ಖುಷಿ ಪಟ್ಟರು. ಆದ್ರೆ ಇದೀಗ ಅಭಿಮಾನ್ ಸ್ಟುಡಿಯೋದಲ್ಲಿ ಆ ಸಂಭ್ರಮಕ್ಕೆ ಕೋರ್ಟ್ ಬ್ರೇಕ್ ಹಾಕಿದೆ.

ವಿಷ್ಣುದಾದಾ ಅವರ 75ನೇ ವರ್ಷದ ಸಂಭ್ರಮಾಚರಣೆಯನ್ನು ಉತ್ತರಹಳ್ಳಿ ಮೇನ್ ರೋಡ್ ನಲ್ಲಿರುವ ಅಭಿಮಾನ್ ಸ್ಟುಡಿಯೋದಲ್ಲಿ ಆಚರಣೆ ಮಾಡಲು ಅವರ ಅಭಿಮಾನಿಗಳು ತಯಾರಿಯಲ್ಲಿದ್ದರು. ಇದಕ್ಕಾಗಿ ಅವರ ಅಭಿಮಾನಿಗಳ ಸಂಘ, ಹೈಕೋರ್ಟ್ ಗೆ ಅರ್ಜಿಯನ್ನು ಸಲ್ಲಿಕೆ ಮಾಡಿದ್ದರು. ಆ ಸಂಬಂಧ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯವು ಅನುಮತಿಯನ್ನು ನಿರಾಕರಣೆ ಮಾಡಿದೆ. ಸಮಾಧಿ ಜಾಗ್ ವಿವಾದ ವಿಚಾರಣೆ ಇನ್ನೂ ಬಾಕಿ ಇದೆ. ಹೀಗಾಗಿ ಆ ಜಾಗದಲ್ಲಿ ಸಂಭ್ರಮಾಚರಣೆ ಬೇಡ ಎಂದಿದೆ.

ಅಭಿಮಾನ್ ಸ್ಟುಡಿಯೋದಲ್ಲಿಯೇ ಅದ್ದೂರಿಯಾಗಿ ಹುಟ್ಟುಹಬ್ಬವನ್ನ ಆಚರಣೆ ಮಾಡುವುದಕ್ಕೆ ಅಭಿಮಾನಿಗಳು ಕಾಯ್ತಾ ಇದ್ದರು. ಹೀಗಿರುವಾಗ ಹೈಕೋರ್ಟ್ ಈ ರೀತಿಯ ನಿರ್ಧಾರ ತೆಗೆದುಕೊಂಡಿದೆ. ಈಗ ಅಭಿಮಾನಿಗಳು ಹೇಗೆ..? ಎಲ್ಲಿ ಸಂಭ್ರಮಾಚರಣೆ ಮಾಡ್ತಾರೆ ಎಂಬುದನ್ನ ನೋಡಬೇಕಿದೆ. ಇನ್ನು ಮೈಸೂರಿನಲ್ಲಿ ಅದ್ದೂರಿಯಾಗಿಯೇ ಸಂಭ್ರಮಾಚರಣೆ ನಡೆಯಲಿದೆ. ಕುಟುಂಬಸ್ಥರೆಲ್ಲಾ ಮೈಸೂರಿಗೆ ತೆರಳಿ, ಅಲ್ಲಿರುವ ವಿಷ್ಣುವರ್ಧನ್ ಸ್ಮಾರಕಕ್ಕೆ ಪೂಜೆ ಸಲ್ಲಿಸಿ ಬರುತ್ತಾರೆ. ಅದನ್ನು ಬಿಟ್ಟರೆ ಅಭಿಮಾನಿಗಳೆಲ್ಲಾ ಸಾಮಾಜಿಕ ಸೇವೆಯನ್ನು ಮುಂದುವರೆಸಲಿದ್ದಾರೆ. ಅನ್ನದಾನ ಮಾಡುವ ಮೂಲಕವೂ ವಿಷ್ಣುದಾದಾರನ್ನ ನೆನೆಯಲಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...