Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸೆಪ್ಟೆಂಬರ್ 17 ರಂದು ವಿಶ್ವಕರ್ಮ ಜಯಂತಿ

---Advertisement---

 

ಚಿತ್ರದುರ್ಗ. ಸೆ.16: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ನಗರಸಭೆ ಸಂಯುಕ್ತಾಶ್ರಯದಲ್ಲಿ ವಿಶ್ವಕರ್ಮ ಜಯಂತಿ ಆಚರಣೆ ಸಮಾರಂಭ ಇದೇ ಸೆ.17 ರಂದು ಬೆಳಿಗ್ಗೆ 11ಕ್ಕೆ ಚಿತ್ರದುರ್ಗ ನಗರದ ಬುರುಜನಹಟ್ಟಿಯ ವಿಶ್ವಕರ್ಮ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದೆ.
ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲ್ಲೂಕು ವಡ್ಡನಹಾಳ್ ಕಾಶಿಮಠದ ಶ್ರೀಮದ್ ಜಗದ್ಗುರು ವಿಶ್ವಕರ್ಮ ಮಹಾ ಸಂಸ್ಥಾನ ಸಾವಿತ್ರಿಪೀಠದ ಅಷ್ಟೋತ್ತರ ಶತ ಶ್ರೀ ಶಂಕರಾತ್ಮಾನಂದ ಸರಸ್ವತಿ ಮಹಾಸ್ವಾಮೀಗಳು ದಿವ್ಯಸಾನಿಧ್ಯ ವಹಿಸುವರು. ಯೋಜನಾ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಉದ್ಘಾಟನೆ ನೆರವೇರಿಸುವರು. ಶಾಸಕ ಕೆ.ಸಿ.ವೀರೇಂದ್ರ ಅಧ್ಯಕ್ಷತೆ ವಹಿಸುವರು. ಗೌರವಾನ್ವಿತ ಅತಿಥಿಗಳಾಗಿ ಸಂಸದ ಗೋವಿಂದ ಎಂ.ಕಾರಜೋಳ, ಹೊಸದುರ್ಗ ಶಾಸಕರು ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ಅಧ್ಯಕ್ಷ ಬಿ.ಜಿ.ಗೋವಿಂದಪ್ಪ, ಚಳ್ಳಕೆರೆ ಶಾಸಕರು ಹಾಗೂ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ ಅಧ್ಯಕ್ಷ ಟಿ.ರಘುಮೂರ್ತಿ, ಮೊಳಕಾಲ್ಮೂರು ಶಾಸಕ ಎನ್.ವೈ. ಗೋಪಾಲಕೃಷ್ಣ, ಹೊಳಲ್ಕೆರೆ ಶಾಸಕ ಡಾ. ಎಂ.ಚಂದ್ರಪ್ಪ, ವಿಧಾನ ಪರಿಷತ್ ಸದಸ್ಯರುಗಳಾದ ಚಿದಾನಂದ ಎಂ.ಗೌಡ, ಕೆ.ಎಸ್.ನವೀನ್, ಡಿ.ಟಿ. ಶ್ರೀನಿವಾಸ ಭಾಗವಹಿಸುವರು. ಮುಖ್ಯ ಅತಿಥಿಗಳಾಗಿ ಕರ್ನಾಟಕ ದ್ರಾಕ್ಷರಸ ಮಂಡಳಿ ಅಧ್ಯಕ್ಷ ಡಾ.ಬಿ.ಯೋಗೇಶ್ ಬಾಬು, ಕರ್ನಾಟಕ ಆದಿಜಾಂಬವ  ಅಭಿವೃದ್ಧಿ ನಿಗಮ ಅಧ್ಯಕ್ಷ ಜಿ.ಎಸ್.ಮಂಜುನಾಥ, ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಎಂ.ಕೆ.ತಾಜ್‍ಪೀರ್, ನಗರಸಭೆ ಅಧ್ಯಕ್ಷೆ ಎಂ.ಪಿ.ಅನಿತಾ ರಮೇಶ್, ಜಿಲ್ಲಾ ಗ್ಯಾರಂಟಿ ಯೋಜನಾ ಪ್ರಾಧಿಕಾರ ಅಧ್ಯಕ್ಷ ಆರ್.ಶಿವಣ್ಣ, ಜಿಲ್ಲಾ ವಿಶ್ವಕರ್ಮ ಸಮಾಜ ಜಿಲ್ಲಾಧ್ಯಕ್ಷ ಕೆ.ಟಿ.ಸುರೇಶಾಚಾರ್ಯ, ವಿಶ್ವಕರ್ಮ ಕಾಳಿಕಾಂಬ ಕಲ್ಯಾಣ ಮಂಟಪ ಟ್ರಸ್ಟ್ ಅಧ್ಯಕ್ಷ ಎ.ಶಂಕರಾಚಾರ್ ಸೇರಿದಂತೆ ಜಿಲ್ಲೆಯ ಸಮಸ್ತ ಗೌರವಾನ್ವಿತ ಜನಪ್ರತಿನಿಧಿಗಳು ಚುನಾಯಿತ ನಗರಸಭೆ ಸದಸ್ಯರು ಹಾಗೂ ಜಿಲ್ಲೆಯ ವಿಶ್ವಕರ್ಮ ಸಮಾಜದ ಸಮಸ್ತ ಗೌರವಾನ್ವಿತ ಮುಖಂಡರು ಹಾಗೂ ಗಣ್ಯರು ಭಾಗವಹಿಸುವರು. ಹೊಳಲ್ಕೆರೆ ತಾಲ್ಲೂಕು ಚಿಕ್ಕಜಾಜೂರಿನ ನಿವೃತ್ತ ಶಿಕ್ಷಕ ಕೆ.ಪಿ. ರವೀಂದ್ರನಾಥಾಚಾರ್ ಉಪನ್ಯಾಸ ನೀಡುವರು. ಚಿತ್ರದುರ್ಗದ ಉಮೇಶ ಪತ್ತಾರ ಮತ್ತು ತಂಡದವರು ಗೀತಗಾಯನ ನಡೆಸಿಕೊಡುವರು ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...