ಚಿತ್ರದುರ್ಗ : ಮಳೆ ಹಾನಿ ಪ್ರದೇಶಗಳಿಗೆ ಭೇಟಿ, ಪರಿಶೀಲನೆ

1 Min Read

ಮಾಹಿತಿ ಮತ್ತು ಫೋಟೋ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ

 



ಚಿತ್ರದುರ್ಗ, (ಜೂನ್.02) : ಮಳೆಯಿಂದ ಹಾನಿಗೆ ಒಳಗಾದ ಚಿತ್ರದುರ್ಗ ನಗರದ ಕೆಳಗೋಟೆ ಪ್ರದೇಶಗಳಿಗೆ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ ರಾಜ್ಯ ಖಾತೆ ಸಚಿವ ಎ.ನಾರಾಯಣಸ್ವಾಮಿ, ಶಾಸಕ ಕೆ.ಸಿ.ವಿರೇಂದ್ರ ಪಪ್ಪಿ, ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್ ಹಾಗೂ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಶುಕ್ರವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ನಗರದಲ್ಲಿ ಮಳೆಯಿಂದ ಮರಗಳು ಮನೆಗಳ ಮೇಲೆ ಬಿದ್ದು ಹಾನಿ ಉಂಟಾಗುತ್ತಿದೆ. ಇಂತಹ ಮರಗಳನ್ನು ಗುರುತಿಸಿ, ಅರಣ್ಯ ಇಲಾಖೆ ಸಹಯೋಗದೊಂದಿಗೆ ತೆರವುಗೊಳಿಸಬೇಕು. ಮರ ಬಿದ್ದು ಹಾನಿಗೆ ಒಳಗಾದ ಮನೆಗಳಿಗೆ ತಕ್ಷಣವೇ ಪರಿಹಾರ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು.

ಈ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ಆರ್.ಚಂದ್ರಯ್ಯ, ತಹಶೀಲ್ದಾರ್ ನಾಗವೇಣಿ ಸೇರಿದಂತೆ ನಗರಸಭೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Share This Article
Leave a Comment

Leave a Reply

Your email address will not be published. Required fields are marked *