Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬೆಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ

---Advertisement---

ಚಿತ್ರದುರ್ಗ. ಏ.16: ಜಿಲ್ಲೆಯಲ್ಲಿ ಪೂರ್ವ ಮುಂಗಾರು ಮಳೆಯಿಂದಾಗಿ ಹಾನಿಗೊಳಗಾದ ಬೆಳೆಹಾನಿ ಪ್ರದೇಶಗಳಿಗೆ ಕೃಷಿ ಮತ್ತು ತೋಟಗಾರಿಕೆ ಇಲಾಖೆ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿ ನಿಖರ ವರದಿ ನೀಡಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಬೆಳೆಹಾನಿ ಹಾಗೂ ಕುಡಿಯುವ ನೀರಿಗೆ ಸಂಬಂಧಿಸಿದಂತೆ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

 

ಕೃಷಿ ಮತ್ತು ತೋಟಗಾರಿಕೆ ಅಧಿಕಾರಿಗಳು ಮಳೆಹಾನಿ ಪ್ರದೇಶಗಳ ಸ್ಥಳ ಪರಿಶೀಲನೆ ನಡೆಸುತ್ತಿಲ್ಲ ಎಂದು ರೈತರು ದೂರುತ್ತಿದ್ದು, ಬೆಳೆಹಾನಿ ಪ್ರದೇಶಗಳ ಸ್ಥಳ ಪರಿಶೀಲನೆ ನಡೆಸದ ಅಧಿಕಾರಿಗಳ ಅಮಾನತಿಗೆ ಕ್ರಮ ವಹಿಸಲಾಗುವುದು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಎಚ್ಚರಿಕೆ ನೀಡಿದರು.

 

ಹೊಳಲ್ಕೆರೆ ತಾಲ್ಲೂಕಿನಲ್ಲಿ 25 ಎಕೆರೆ ಅಡಿಕೆ ಬೆಳೆ, 15 ಎಕರೆ ಮಾವು, ಹಾಗೂ 03 ಎಕರೆ ಬಾಳೆ ಬೆಳೆ ಹಾನಿಯಾಗಿವೆ. ಚಳ್ಳಕೆರೆ ತಾಲ್ಲೂಕಿನಲ್ಲಿ 120 ಎಕರೆ ಪಪ್ಪಾಯಿ ಬೆಳೆ ಹಾಗೂ 8.30 ಎಕರೆ ಕೃಷಿ ಬೆಳೆಗಳು ಹಾನಿಯಾಗಿವೆ. ಚಿತ್ರದುರ್ಗ ತಾಲ್ಲೂಕಿನ ವಿ.ಪಾಳ್ಯ, ನಲ್ಲೆಕಟ್ಟೆ ಗ್ರಾಮಗಳಲ್ಲಿ ಅಡಿಕೆ ಬೆಳೆ ಹಾಗೂ ಪಪ್ಪಾಯಿ ಬೆಳೆ ಹಾನಿಯಾಗಿದೆ. ಹಿರಿಯೂರು ತಾಲ್ಲೂಕಿನಲ್ಲಿ ಒಂದು ಜಾನುವಾರು ಮೃತಪಟ್ಟಿದೆ. ತೋಟಗಾರಿಕೆ ಬೆಳೆ ಹಾನಿಯಾಗಿದ್ದು, ಮನೆಯ ಮೇಲ್ಛಾವಣೆಯು ಹಾನಿಯಾಗಿದೆ. ಹೊಸದುರ್ಗ ತಾಲ್ಲೂಕಿನಲ್ಲಿ 4.20 ಎಕರೆ ತೋಟಗಾರಿಕೆ ಬೆಳೆ ಹಾನಿಯಾಗಿದೆ. ಮೊಳಕಾಲ್ಮುರು ತಾಲ್ಲೂಕಿನಲ್ಲಿ 1 ಹೆಕ್ಟೇರ್ ಕೃಷಿ ಹಾಗೂ 1 ಹೆಕ್ಟೇರ್ ತೋಟಗಾರಿಕೆ ಬೆಳೆಹಾನಿ ಹಾಗೂ ಒಂದು ಜಾನುವಾರು ಮೃತಪಟ್ಟಿದೆ, 06 ಮನೆಗಳು ಭಾಗಶಃ ಹಾನಿಗೊಳಗಾಗಿವೆ ಎಂದು ತಹಶೀಲ್ದಾರ್‍ಗಳು ಸಭೆಗೆ ಮಾಹಿತಿ ನೀಡಿದರು.

 

ಬೆಳೆಹಾನಿಗೆ ಸಂಬಂಧಿಸಿದಂತೆ ಎಲ್ಲ ವರದಿಯನ್ನು ಸಿದ್ದತೆ ಮಾಡಿಟ್ಟುಕೊಂಡು, ಪರಿಹಾರ ಸಾಫ್ಟವೇರ್ ಓಪನ್ ಆದ ತಕ್ಷಣ ಎಂಟ್ರಿ ಮಾಡಬೇಕು.  ನಿಯಮಾನುಸಾರ ಪರಿಹಾರ ವಿತರಣೆಗೆ ಕ್ರಮವಹಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ತಿಳಿಸಿದರು.

 

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯಪಾಲಕ ಇಂಜಿನಿಯರ್ ಬಸನಗೌಡ ಪಾಟೀಲ್ ಮಾತನಾಡಿ, ಹಿರಿಯೂರು ತಾಲ್ಲೂಕು ವ್ಯಾಪ್ತಿಯಲ್ಲಿ ಪ್ರಸ್ತುತ 7 ಗ್ರಾಮಗಳಿಗೆ ಟ್ಯಾಂಕರ್ ಮೂಲಕ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ ಎಂದು ತಿಳಿಸಿದರು.
ಮುಂದಿನ ದಿನಗಳಲ್ಲಿ ಕುಡಿಯುವ ನೀರು ಸಮಸ್ಯೆ ಉದ್ಭವಿಸುವ ಸಮಸ್ಯೆಯಾತ್ಮಕ ಗ್ರಾಮಗಳ ನಿಖರ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

 

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಉಪವಿಭಾಗಾಧಿಕಾರಿ ಮೆಹಬೂಬ್ ಜಿಲಾನ್ ಖುರೇಷಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯಪಾಲಕ ಇಂಜಿನಿಯರ್  ಬಸನಗೌಡ ಪಾಟೀಲ್ ಸೇರಿದಂತೆ ತಹಶೀಲ್ದಾರ್‍ಗಳು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment