ಮಾಹಿತಿ ಮತ್ತು ಫೋಟೋ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ
ಚಿತ್ರದುರ್ಗ,(ಆ.18) : ನಗರ ಸಮೀಪದ ಆಶ್ರಯ ಬಡಾವಣೆಯಲ್ಲಿ ವಾಂತಿ ಬೇದಿ ಪ್ರಕರಣಗಳು ವರದಿಯಾದ ಹಿನ್ನಲೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಅವರು ಶುಕ್ರವಾರ ಆಶ್ರಯ ಬಡಾವಣೆಗೆ ಭೇಟಿ ನೀಡಿದರು.
ಆಶ್ರಯ ಬಡಾವಣೆಯಲ್ಲಿ ತಾತ್ಕಾಲಿಕವಾಗಿ ತೆರೆಯಲಾಗಿರುವ ಚಿಕಿತ್ಸಾಲಯಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ನಂತರ ಆಶ್ರಯ ಬಡಾವಣೆಯ ವಿವಿಧ ಮನೆಗಳಿಗೆ ಭೇಟಿ ನೀಡಿದ ಅವರು, ಸ್ವಚ್ಛ ಕುಡಿಯುವ ನೀರನ್ನು ಉಪಯೋಗಿಸಬೇಕು. ಬಿಸಿ,ಶುದ್ದ ಆಹಾರ ಹಾಗೂ ಸುತ್ತಮುತ್ತಲಿನ ಪರಿಸರವನ್ನು ನಿರ್ಮಲವಾಗಿಟ್ಟುಕೊಳ್ಳಬೇಕು ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ನಗರಸಭೆ ಪೌರಾಯುಕ್ತ ಶ್ರೀನಿವಾಸ್, ವೈದ್ಯರು, ಆಶ್ರಯ ಬಡಾವಣೆಯ ನಿವಾಸಿಗಳು ಇದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











