ಎನ್.ವೈ.ಗೋಪಾಲಕೃಷ್ಣ ಅವರಿಗೆ ಮತ ನೀಡಿ ಗೆಲ್ಲಿಸಿ : ಬಿ.ಎನ್.ಚಂದ್ರಪ್ಪ

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಚಿತ್ರದುರ್ಗ, (ಏ.28) : ಮೊಳಕಾಲ್ಮೂರು ಕ್ಷೇತ್ರ 10 ವರ್ಷಗಳಿಂದ ಅಭಿವೃದ್ಧಿಯಲ್ಲಿ ಕುಂಠಿತವಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಬಿ.ಎನ್.ಚಂದ್ರಪ್ಪ ತಿಳಿಸಿದರು.

ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದ ನಾಯಕನಹಟ್ಟಿಯಲ್ಲಿ ಶುಕ್ರವಾರ ಕಾಂಗ್ರೆಸ್ ಅಭ್ಯರ್ಥಿ ಎನ್.ವೈ.ಗೋಪಾಲಕೃಷ್ಣ ಅವರ ಪರ ಮತಯಾಚಿಸಿ ಮಾತನಾಡಿದ ಅವರು, ಮೊಳಕಾಲ್ಮೂರು ಅತ್ಯಂತ ಹಿಂದುಳಿದ ಕ್ಷೇತ್ರವಾಗಿದ್ದು ಅಭಿವೃದ್ಧಿಯಲ್ಲಿ ತುಂಬಾ ಹಿನ್ನಡೆಯಾಗಿದೆ, ಹಾಗಾಗಿ ಕ್ಷೇತ್ರದ ಅಭಿವೃದ್ಧಿ ಹಾಗೂ ಜನರ ನಾಡಿಮಿಡಿತ ಅರಿತಿರುವ ಅತ್ಯಂತ ಅನುಭವಿ ಹಾಗೂ ಹಿರಿಯರಾದ ಎನ್.ವೈ.ಗೋಪಾಲಕೃಷ್ಣ ಅವರಿಗೆ ಮತ ನೀಡುವ ಮೂಲಕ ಗೆಲ್ಲಿಸಿ ಕ್ಷೇತ್ರದ ಅಭಿವೃದ್ಧಿಗೆ ಪಣ ತೊಡಬೇಕು ಎಂದು ಮತದಾರರಿಗೆ ಕರೆ ನೀಡಿದರು.

ಗೃಹಲಕ್ಷ್ಮಿ, ಗೃಹಜ್ಯೋತಿ, ಬಡಕುಟುಂಬಕ್ಕೆ 10 ಕೆ.ಜಿ ಉಚಿತ ಅಕ್ಕಿ, ನಿರುದ್ಯೋಗಿ ಪದವೀಧರ ಯುವಕರಿಗೆ ರೂ.3000/-, ಡಿಪ್ಲೋಮಾ ಪದವೀಧರರಿಗೆ ರೂ.1500/- ಗ್ಯಾರಂಟಿ ಮಾತ್ರವಲ್ಲದೇ 5ನೇ ಗ್ಯಾರಂಟಿಯಾಗಿ ಮಹಿಳೆಯರಿಗೆ ಸರ್ಕಾರಿ ಬಸ್ ಪ್ರಯಾಣ ಉಚಿತವಾಗಿ ತಮ್ಮ ಪಕ್ಷ ಅಧಿಕಾರಕ್ಕೆ ಬಂದ ದಿನದಿಂದಲೇ ಈ ಎಲ್ಲಾ ಗ್ಯಾರಂಟಿಗಳನ್ನ ಜಾರಿಗೊಳಿಸುತ್ತೇವೆ ಎಂದು ಭರವಸೆ ನೀಡಿದರು.

ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ದಾಗ ಸಿದ್ಧರಾಮಯ್ಯನವರು ನೀಡಿದ ಪ್ರತಿಯೊಂದು ಯೋಜನೆಯ ಬಗ್ಗೆ ಮತದಾರರಿಗೆ ಮನವರಿಕೆ ಮಾಡಿದರು. ಸಿದ್ಧರಾಮಯ್ಯ ಅವರು ಭ್ರಷ್ಟಚಾರ ರಹಿತವಾಗಿ ಐದು ವರ್ಷಗಳ ಕಾಲ ಸರ್ಕಾರ ನಡೆಸಿ ಅನೇಕ ಜನಪರ ಯೋಜನೆಗಳೆ ಕಾಂಗ್ರೆಸ್ ಪಕ್ಷಕ್ಕೆ ಶ್ರೀರಕ್ಷೆಯಾಗಿವೆ ಎಂದು ಹೇಳಿದರು.

ಮೂರು ವರ್ಷಗಳಿಂದ ಕೆಪಿಸಿಸಿ ಅಧ್ಯಕ್ಷರು ಭ್ರಷ್ಟ ಬಿಜೆಪಿ ಸರ್ಕಾರವನ್ನು ಕಿತ್ತಾಕಲು ಕಾಂಗ್ರೆಸ್ ಪಕ್ಷವನ್ನ ಅಧಿಕಾರಕ್ಕೆ ತರಲು ಅಗಲಿರುಳು ಶ್ರಮಿಸುತ್ತಿದ್ದಾರೆ. ಅವರ ಶ್ರಮ ಸಂಘಟನೆಗೆ ಬಲಬಂತಾಗಿದೆ ಎಂದು ತಿಳಿಸಿದರು.

ಎನ್.ವೈ.ಗೋಪಾಲಕೃಷ್ಣ ಹಾಗೂ ಯೋಗೇಶ್‌ಬಾಬು ಇಬ್ಬರೂ ಜೋಡೆತ್ತುಗಳಿದ್ದಂತೆ, ಯೋಗೇಶ್‌ಬಾಬು ಅವರು ಅತ್ಯಂತ ಪ್ರಾಮಾಣಿಕ ಕಾಂಗ್ರೆಸ್ ಕಾರ್ಯಕರ್ತರು. ಎನ್.ವೈ.ಗೋಪಾಲಕೃಷ್ಣ ಗೆಲುವಿಗೆ ಹಗಲಿರುಳು ಶ್ರಮಿಸುತ್ತಿದ್ದಾರೆ ಎಂದು ಶ್ಲಾಘಿಸಿದರು.

ಎಐಸಿಸಿ ವೀಕ್ಷಕರಾದ ಸಂಜಯ್‌ದತ್ ರವರು ಮಾತನಾಡಿ, ದೇಶದ ಸುರಕ್ಷತೆ ಸರ್ವಾಂಗಿಣ ಅಭಿವೃದ್ಧಿಗೆ ಕಾಂಗ್ರೆಸ್‌ನ್ನು ಅಧಿಕಾರಕ್ಕೆ ತರಬೇಕು. ದೇಶವನ್ನು ಪ್ರಗತಿ ದಿಕ್ಕಿನಲ್ಲಿ ಕೊಂಡೊಯ್ಯಲು ಕಾಂಗ್ರೆಸ್‌ನಿಂದ ಮಾತ್ರ ಸಾಧ್ಯ. ಹಾಗಾಗಿ ಕಾಂಗ್ರೆಸ್‌ಗೆ ಮತ ನೀಡಿ ಶೇ.40%  ಭ್ರಷ್ಟಚಾರದ ಬಿಜೆಪಿ ಸರ್ಕಾರವನ್ನು ಅಧಿಕಾರದಿಂದ ಕಿತ್ತು ಹೊಗೆಯಿರಿ ಎಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎನ್.ವೈ.ಗೋಪಾಲಕೃಷ್ಣ, ಯೋಗೇಶ್‌ಬಾಬು,ಯುವ ಕಾಂಗ್ರೆಸ್ ಅಧ್ಯಕ್ಷ ಕಾರೇಹಳ್ಳಿ ಉಲ್ಲಾಸ್,  ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗೇಶ್‌ರೆಡ್ಡಿ, ಮಾಜಿ ಜಿ.ಪಂ. ಅಧ್ಯಕ್ಷ ಬಾಲರಾಜ್, ಕಾಂಗ್ರೆಸ್ ಎಸ್.ಸಿ ಘಟಕದ ಅಧ್ಯಕ್ಷ ಜಯಣ್ಣ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

suddionenews

Recent Posts

ಮೈಸೂರಿನ ಘಟನೆ ಮಾಸುವ ಮುನ್ನವೇ ವಿಸಿ ನಾಲೆಗೆ ಹಾರಿದ ಒಂದೇ ಕುಟುಂಬದ ಮೂವರು..!

ಮಂಡ್ಯ: ಇತ್ತೀಚೆಗೆ ಸಾಲದಿಂದ ಮನನೊಂದು ಮೈಸೂರಿನ ವಿಶ್ವೇಶ್ವರಯ್ಯ ನಗರ ಅಪಾರ್ಟ್ಮೆಂಟ್ ನಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿದ್ದರು. ಇದೀಗ…

1 hour ago

ಮಾರ್ಚ್ 01 ರಂದು ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ

ಚಿತ್ರದುರ್ಗ ಫೆ. 24 : ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ (20 ಅಂಶಗಳ ಕಾರ್ಯಕ್ರಮಗಳೂ ಸೇರಿದಂತೆ) ಮಾ. 01…

2 hours ago

ನರೇಗಾ : ಕರ್ತವ್ಯಕ್ಕೆ ಗೈರಾದ ತಾಂತ್ರಿಕ ಸಹಾಯಕರ ಬಿಡುಗಡೆ

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 24 : ಮಹಾತ್ಮಾ ಗಾಂಧೀಜಿ ನರೇಗಾ ಯೋಜನೆಯಡಿ ಹೊರಗುತ್ತಿಗೆ ಆಧಾರದಲ್ಲಿ ಚಿತ್ರದುರ್ಗ ತಾಲ್ಲೂಕಿನಲ್ಲಿ ತಾಂತ್ರಿಕ ಸಹಾಯಕರಾಗಿ…

3 hours ago

ಕರ ವಸೂಲಾತಿಯಲ್ಲಿ ನಿರ್ಲಕ್ಷ್ಯ : ಮೂವರು ಪಿಡಿಒ ಗಳ ವಾರ್ಷಿಕ ವೇತನ ಬಡ್ತಿಗೆ ತಡೆ

ಚಿತ್ರದುರ್ಗ ಫೆ. 24 : ಜಿಲ್ಲೆಯ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಕರ ವಸೂಲಾತಿ ಆದೋಲನ ಹಮ್ಮಿಕೊಂಡು, ತೆರಿಗೆ ವಸೂಲಾತಿ ಮಾಡಿ,…

3 hours ago

ಮೈಸೂರಲ್ಲಿ ವಿಜಯೇಂದ್ರ : ಭೇಟಿಗೆ ಓಡಿ ಬಂದ ಪ್ರತಾಪ್ ಸಿಂಹ : ಇವರ್ಯಾರ ಬಣ ಎಂಬುದೇ ದೊಡ್ಡ ಪ್ರಶ್ನೆ..!

    ಮೈಸೂರು: ಇಂದು ಬಿಜೆಪಿ ರಾಜ್ಯಾಧ್ಯಕ್ಷ ಮೈಸೂರಿಗೆ ಭೇಟಿ ನೀಡಿದ್ದಾರೆ. ಹಿಂದೂಪರ ಸಂಘಟನೆಗಳು ಹಾಗೂ ಬಿಜೆಪಿ ನಾಯಕರು ನಡೆಸುತ್ತಿರುವ…

3 hours ago

ಚಿತ್ರದುರ್ಗ APMC | ಶೇಂಗಾ, ಕಡಲೆ, ಸೂರ್ಯಕಾಂತಿ ಸೇರಿದಂತೆ ಇತರೆ ಉತ್ಪನ್ನಗಳ ಫೆಬ್ರವರಿ 24 ರ ಮಾರುಕಟ್ಟೆ ಧಾರಣೆ ವಿವಿರ ಇಲ್ಲಿದೆ…!

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 24 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಕಡಲೆ, ಶೇಂಗಾ, ಸೂರ್ಯಕಾಂತಿ, ಮೆಕ್ಕೆಜೋಳ ಸೇರಿದಂತೆ ಇತರೆ…

3 hours ago