Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮತಗಳ್ಳತನ ದೇಶದಾದ್ಯಂತ ವ್ಯಾಪಿಸಿದೆ : ಮಾಜಿ ಸಚಿವ ವಿನಯಕುಮಾರ್ ಸೊರಕೆ

---Advertisement---

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

 

ಸುದ್ದಿಒನ್, ಚಿತ್ರದುರ್ಗ. ಸೆ. 11 : ಮತಗಳ್ಳತನ ವಿರುದ್ದ ರಾಹುಲ್ ಗಾಂಧಿ ಅವರ ಹೋರಾಟವನ್ನು ಬಿಜೆಪಿಯವರು ಹೇಗಾದರೂ ಟೀಕಿಸಲಿ, ಆದರೆ ಈ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಮಧ್ಯ ಪ್ರವೇಶಿಸಿ ರಾಹುಲ್ ಗಾಂಧಿ ಹೋರಾಟಕ್ಕೆ ಸಿಕ್ಕ ಜಯವೇ ಆಗಿದೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಹಾಗೂ ಮಾಜಿ ಸಚಿವ ವಿನಯಕುಮಾರ್ ಸೊರಕೆ ಹೇಳಿದರು.

ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಗುರುವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಮತಗಳ್ಳತನ ಕೇವಲ ಕರ್ನಾಟಕ, ಬಿಹಾರ ಅಥವಾ ಮಹಾರಾಷ್ಟ್ರಕ್ಕೆ ಮಾತ್ರ ಸಿಮೀತವಾಗಿಲ್ಲ, ಇಡೀ ದೇಶಕ್ಕೆ ವ್ಯಾಪಿಸಿದೆ. ಮಹಾರಾಷ್ಟ್ರದಲ್ಲಿ ವಿಧಾನಸಭೆ ಚುನಾವಣೆ ವೇಳೆ 1 ಲಕ್ಷ ದಷ್ಟು ಹೆಚ್ಚುವರಿ ಇದ್ದ ವೋಟರ್ ಸಂಖ್ಯೆ ಪಾರ್ಲಿಮೆಂಟ್ ಚುನಾವಣೆ ವೇಳೆ ದುಪ್ಪಟ್ಟಾಗುತ್ತದೆ. ಇದು ಹೇಗೆ? ಆದ್ದರಿಂದಲೇ ಮತ ಗಳ್ಳತನದ ಬಗ್ಗೆ ದೊಡ್ಡ ಅನುಮಾನವೇ ಮೂಡಿದೆ. ಇದರ ಬಗ್ಗೆಯೇ ರಾಜ್ಯದ ಜನರ ಗಮನ ಸೆಳೆಯಲು ಕೆಪಿಸಿಸಿ ಪ್ರಚಾರ ಸಮಿತಿ ಪ್ರವಾಸ ಹಮ್ಮಿಕೊಂಡಿದೆ ಎಂದರು.

ಬೆಂಗಳೂರಿನ ಮಹದೇವಪುರ ಕ್ಷೇತ್ರದಲ್ಲಿ ನಾನು ಪಕ್ಷದ ಚುನಾವಣಾ ವೀಕ್ಷಕನಾಗಿದ್ದೆ. ಆ ವೇಳೆ ಅಪಾರ್ಟ್ ಮೆಂಟ್‍ಗೆ ಒಂದು ಹೋದರೆ ಅಲ್ಲಿಗೆ ಹೋಗುವುದಕ್ಕೆ ನಮಗೆ ಬಿಡಲಿಲ್ಲ. ಅಲ್ಲಿಯೇ ಅಧಿಕ ಮತಗಳು ಇದ್ದವು. ಇದೆಲ್ಲಾ ಕಾರಣ ದಿಂದಲೇ ಪಕ್ಷದ ಅಧ್ಯಕರು ಸತ್ಯ ಶೋಧನಾ ಸಮಿತಿಯೊಂದನ್ನು ರಚನೆ ಮಾಡಿ ಮತಗಳ್ಳತನದ ವರದಿ ತಯಾರಿಸಲು ಸೂಚಿಸಿದ್ದರು. ಆ ಪ್ರಕಾರ ನಾವು ಸತ್ಯ ಶೋಧನೆ ನಡೆಸಿ, ವರದಿ ತಯಾರಿಸಿ ಎಐಸಿಸಿಗೆ ಸಲ್ಲಿಸಲಾಗಿತ್ತು ಎಂದ ಅವರು.  ಜನರಿಗೆ ಅರಿವು ಮೂಡಿಸುವುದರ ಜೊತೆಗೆ ಪಕ್ಷದ ಜನಪರ ಕಾರ್ಯ ಕ್ರಮಗಳನ್ನು ತಿಳಿಸುವ ಸಲುವಾಗಿ ಈಗ ಕೆಪಿಸಿಸಿ ಪ್ರಚಾರ ಸಮಿತಿ ರಾಜ್ಯ ಪ್ರವಾಸ ಹಮ್ಮಿಕೊಂಡಿದೆ. ಈಗಾಗಲೇ ಎರಡು ಹಂತಗಳಲ್ಲಿ ಜಿಲ್ಲೆಗಳಲ್ಲಿ ಪ್ರವಾಸ ನಡೆದಿದೆ. ಚಿತ್ರದುರ್ಗ ಜಿಲ್ಲೆ 20 ನೇ ಜಿಲ್ಲೆಯಾಗಿದೆ ಎಂದರು.

ಜಿಲ್ಲಾ ಮತ್ತು ತಾಲ್ಲೂಕು ಪಂಚಾಯ್ತಿ ಚುನಾವಣೆ ಎದುರಿಸಲು ಕಾಂಗ್ರೆಸ್ ಪಕ್ಷದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಸಜ್ಜಾಗಬೇಕು ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಗ್ಯಾರಂಟಿ ಯೋಜನೆಗಳನ್ನು ಜನರ ಬಳಿಗೆ ತೆಗೆದುಕೊಂಡು ಹೋಗಿ ಪಕ್ಷವನ್ನು ಬಲಪಡಿಸಬೇಕು ಬಿಜೆಪಿಯವರು ಭಾವನೆಗಳ ಮೇಲೆ ರಾಜಕಾರಣ ಮಾಡುತ್ತಿದ್ದಾರೆ, ಆದರೆ ಕಾಂಗ್ರೆಸ್ ಎಲ್ಲರ ಭಾವನೆಗಳಿಗೆ ಗೌರವ ನೀಡುತ್ತದೆ ಮತ್ತು ಬದುಕು ಕಟ್ಟಿಕೊಡುವ ರಾಜಕಾರಣ ಮಾಡುತ್ತದೆ ಮತಗಳ್ಳತನವನ್ನು ತಡೆಗಟ್ಟಲು ಪಕ್ಷದ ಕಾರ್ಯಕ್ರಮಗಳನ್ನು ಪ್ರತಿಯೊಬ್ಬರಿಗೂ ತಿಳಿಸಬೇಕು ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯ್ ಕುಮಾರ್ ಸೊರಕೆ ಹೇಳಿದರು.

ಕೆಪಿಸಿಸಿ ಪ್ರಚಾರ ಸಮಿತಿ ಉಪಾಧ್ಯಕ್ಷರಾದ ಜಲಜನಾಯ್ಕ್. ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ತಾಜ್ ಪೀರ್, ಕಾರ್ಯಾಧ್ಯಕ್ಷರಾದ ಹಾಲಸ್ವಾಮಿ, ಪ್ರಧಾನ ಕಾರ್ಯದರ್ಶಿಗಳಾದ ಸಂಪತ್ ಕುಮಾರ್, ಮೈಲಾರಪ್ಪ, ಉಪಾಧ್ಯಕ್ಷರಾದ ಕುಮಾರ ಗೌಡ, ಡಿ.ಟಿ. ವೆಂಕಟೇಶ್, ಚಿತ್ರದುರ್ಗ ಜಿಲ್ಲಾ ಪ್ರಚಾರ ಸಮಿತಿಯ ಅಧ್ಯಕ್ಷ ಕೃಷ್ಣಮೂರ್ತಿ, ಮಹಿಳಾ ಘಟಕದ ಅಧ್ಯಕ್ಷರಾದ ಶ್ರೀಮತಿ ಗೀತಾ ನಂದಿನಿಗೌಡ, ಓಬಿಸಿ ಅಧ್ಯಕ್ಷ ಎನ್.ಡಿ. ಕುಮಾರ್, ಜಿ.ಪಣಂ ಮಾಜಿ ಸದಸ್ಯ ನರಸಿಂಹಮೂರ್ತಿ, ಲೋಕೇಶ್, ಸೇವಾದಳದ ಅಧ್ಯಕ್ಷ ಭೂತೇಶ್, ಮಹಿಳಾ ಘಟಕದ ಅಧ್ಯಕ್ಷೆ ನೇತ್ರಾವತಿ, ವೆಂಕಟೇಶ್, ಗ್ಯಾರೆಂಟಿ ಪ್ರಾಧಿಕಾರದ ಅಧ್ಯಕ್ಷ ಶಿವಣ್ಣ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಲಕ್ಷ್ಮೀಕಾಂತ್,,  ಶಿವಮೂರ್ತಿ, ಮಂಜುನಾಥ್, ಖುದ್ದುಸ್, ನಜ್ಮತಾಜ್, ಡಾ,ಸಂತೋಷ ಕುಮಾರ್, ಮುಧುಗೌಡೆ, ಖಲಿಂವುಲ್ಲಾ, ಶಿವಣ್ಣ, ಶಿವಕುಮಾರ್, ರಾಧಮ್ಮ, ರುದ್ರಾಣಿ ಗಂಗಾಧರ್ ಸೇರಿದಂತೆ ಇತರರು ಭಾಗವಹಿಸಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...