Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮತಗಳ್ಳತನ : ಚಿತ್ರದುರ್ಗದಲ್ಲಿ ಕಾಂಗ್ರೆಸ್ ಅಭಿಯಾನ

---Advertisement---

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ ಅ. 02 : ನಮ್ಮ ಪಕ್ಷದ ನಾಯಕರಾದ ರಾಹುಲ್ ಗಾಂಧಿಯವರು ದೇಶದಾದ್ಯಂತ ಹಮ್ಮಿಕೊಂಡಿರುವ “ವೋಟ್ ಚೋರ್ ಗದ್ದಿ ಚೋಡ್” ಅಭಿಯಾನಕ್ಕೆ ಬೆಂಬಲವಾಗಿ ಚಿತ್ರದುರ್ಗ ನಗರದ ಮಹಾತ್ಮ ಗಾಂಧಿ ವೃತದಲ್ಲಿ ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ವಿಭಾಗದಿಂದ ಹಮ್ಮಿಕೊಂಡಿದ್ದ “ಮತಗಳ್ಳತನ ವಿರುದ್ಧ ಅಭಿಯಾನ” ನಡೆಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ಅಲ್ಪಸಂಖ್ಯಾತರ ವಿಭಾಗದ ಅಧ್ಯಕ್ಷರಾದ ಮಹಮ್ಮದ್ ಖುದ್ದುಸ್ ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿಯವರು ಸಂಪೂರ್ಣವಾಗಿ ಅಧ್ಯಯನ ಮಾಡಿ, ಮತದಾನದ ಅಂಕಿ ಅಂಶಗಳನ್ನು ಸಂಗ್ರಹಿಸಿ ವಿಶ್ಲೇಷಣೆ ಮಾಡಿ ದಾಖಲೆಗಳ ಸಮೇತ ದೇಶದ ಜನರ ಮುಂದೆ ಇಟ್ಟಿದ್ದಾರೆ. ಮತಗಳ್ಳತನದ ವಿರುದ್ಧ ಆರಂಭವಾಗಿರುವ ಈ ಪ್ರತಿಭಟನಾ ಅಭಿಯಾನ ಕರ್ನಾಟಕ ರಾಜ್ಯದಿಂದ ಆರಂಭವಾಗಿ ಇಡೀ ದೇಶಾದ್ಯಂತ ವ್ಯಾಪಿಸಲಿದೆ.ಈಗಾಗಲೇ ಸಂವಿಧಾನದ ಆಶಯದಂತೆ ಪ್ರಜಾಪ್ರಭುತ್ವ ಮತ್ತು ಸಂವಿಧಾನ ರಕ್ಷಣೆಗೆ ಚಳವಳಿ ಆರಂಭವಾಗಿದೆ. ಇದಕ್ಕೆ ಇಡೀ ರಾಜ್ಯದ ಜನತೆಯೇ ಬೆಂಬಲಕ್ಕೆ ನಿಲ್ಲಲಿದ್ದಾರೆ ಎಂದು ತಿಳಿಸಿ, ಸಹಿ ಹಾಕುವ ಮೂಲಕ ಸಹಿ ಸಂಗ್ರಹ ಅಭಿಯಾನಕ್ಕೆ ಚಿತ್ರದುರ್ಗದಲ್ಲಿ ಚಾಲನೆ ನೀಡಲಾಗಿದೆ ಎಂದರು.

ಈ ಸಂದರ್ಭದಲ್ಲಿ ಡಿಸಿಸಿ ಅಧ್ಯಕ್ಷರಾದ ತಾಜ್ ಪೀರ್, ಕಾರ್ಯಾಧ್ಯಕ್ಷರಾದ ಹಾಲಸ್ವಾಮಿ, ಪ್ರಧಾನ ಕಾರ್ಯದರ್ಶಿಗಳಾಸ ಸಂಪತ್ ಕುಮಾರಾ, ಮೈಲಾರಪ್ಪ, ಗ್ಯಾರೆಂಟಿ ಅಧ್ಯಕ್ಷರಾದ ಶಿವಣ್ಣ, ತಿಪ್ಪೇಸ್ವಾಮಿ, ಲಕ್ಷ್ಮೀಕಾಂತ್ ಚೋಟು, ಪ್ರಕಾಶ್ ರಾಮ ನಾಯ್ಕ್, ಎಸ್.ಎಂ.ಎಲ್,ತಿಪ್ಪೆಸ್ವಾಮಿ, ನಜ್ಮತಾಜ್, ಮುನೀರ ಮಕಂದರ್, ಮಹಬೂಬ್ ಖತೂನ್ ಸೇರಿದಂತೆ ಪಕ್ಷದ ಪ್ರಮುಖ ನಾಯಕರು, ಮುಖಂಡರು, ಮಹಿಳಾ ಮುಖಂಡರು, ಜನಪ್ರತಿನಿಧಿಗಳು, ಯುವ ಕಾಂಗ್ರೆಸ್ ನಾಯಕರು, ಕಾರ್ಯಕರ್ತ ಹಾಜರಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now