Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮತದಾರರ ಪಟ್ಟಿ ಮ್ಯಾಪಿಂಗ್ : ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ  ಶಿಸ್ತುಕ್ರಮ

---Advertisement---

 

ಚಿತ್ರದುರ್ಗ. ಮಾರ್ಚ್10: ಮತದಾರರ ಪಟ್ಟಿಗಳ ಸಮಗ್ರ ಪರಿಷ್ಕರಣೆ (ಎಸ್‍ಐಆರ್)-2026ರ ಸಂಬಂಧ ಬಾಕಿ ಇರುವ ಮತದಾರರ ಪಟ್ಟಿಗಳ ಮ್ಯಾಪಿಂಗ್ ಕಾರ್ಯವನ್ನು ಇದೇ ಮಾರ್ಚ್ 20ರೊಳಗಾಗಿ ಶೇ.100ರಷ್ಟು ಪೂರ್ಣಗೊಳಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ ನೀಡಿದ್ದಾರೆ.

2002ರ ಮತದಾರರ ಪಟ್ಟಿಗೆ 2025ರ ಮತದಾರರ ಪಟ್ಟಿಯನ್ನು ಮ್ಯಾಪಿಂಗ್ ಮಾಡುವ ಪ್ರಕ್ರಿಯೆಯು ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರಗಳಲ್ಲಿ ಈಗಾಗಲೇ ಪ್ರಗತಿಯಲ್ಲಿದೆ. 2025ರ ಸೆಪ್ಟೆಂಬರ್ ಮಾಹೆಯಿಂದ ಮತಗಟ್ಟೆ ಮಟ್ಟದ ಅಧಿಕಾರಿಗಳು (ಬಿಎಲ್‍ಒ) ಈ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಕೆಲವು ಮತಗಟ್ಟೆ ಮಟ್ಟದ ಅಧಿಕಾರಿಗಳು ಶೇ.50 ರಿಂದ 80ರಷ್ಟು ಪೂರ್ಣಗೊಳಿಸಿದ್ದು, ಇನ್ನೂ ಬಾಕಿ ಇರುವ ಮತದಾರರ ಮ್ಯಾಪಿಂಗ್ ಕಾರ್ಯವನ್ನು ಇದೇ ಮಾರ್ಚ್ 20ರೊಳಗಾಗಿ ಶೇ.100ರಷ್ಟು ಪೂರ್ಣಗೊಳಿಸಬೇಕು.

 

ಮತದಾರರ ಪಟ್ಟಿಗಳ ಮ್ಯಾಪಿಂಗ್ ಕಾರ್ಯವನ್ನು ಬಾಕಿ ಉಳಿಸಿಕೊಂಡು ನಿರ್ಲಕ್ಷ್ಯ ತೋರುವ ಮತಗಟ್ಟೆ ಮಟ್ಟದ ಅಧಿಕಾರಿಗಳ ವಿರುದ್ಧ ಪ್ರಜಾ ಪ್ರಾತಿನಿಧ್ಯ ಕಾಯ್ದೆಯಡಿ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...