Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಾಜ್ಯಾದ್ಯಂತ ನಾಳೆಯಿಂದ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಆರಂಭ: ಅಕ್ಟೋಬರ್ 7ಕ್ಕೆ ಅಂತಿಮ ಪಟ್ಟಿ ಪ್ರಕಟ

---Advertisement---

ಬೆಂಗಳೂರು.ಜೂನ್.29: ಕರ್ನಾಟಕ ರಾಜ್ಯದಲ್ಲಿ ಜುಲೈ 30ರ ಮಂಗಳವಾರದಿಂದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಗೆ ಅಧಿಕೃತವಾಗಿ ಚಾಲನೆ ಸಿಗಲಿದೆ. ಪ್ರತಿಯೊಬ್ಬ ಅರ್ಹ ನಾಗರಿಕನಿಗೂ ಮತದಾನದ ಹಕ್ಕು ಸಿಗುವಂತೆ ಮಾಡುವುದು ಮತ್ತು ಪಟ್ಟಿಯಲ್ಲಿರುವ ಲೋಪದೋಷಗಳನ್ನು ಸರಿಪಡಿಸುವುದು ಈ ಅಭಿಯಾನದ ಮುಖ್ಯ ಉದ್ದೇಶವಾಗಿದೆ.

ಈ ಮಹತ್ವದ ಕಾರ್ಯಕ್ಕಾಗಿ ಜೂನ್ 30 ರಿಂದ ಜುಲೈ 29 ರವರೆಗೆ ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್ಒ) ಪ್ರತಿ ಮನೆಗೂ ಭೇಟಿ ನೀಡಲಿದ್ದಾರೆ. ಈ ಸಂದರ್ಭದಲ್ಲಿ ಅಧಿಕಾರಿಗಳು ಸಾರ್ವಜನಿಕರಿಗೆ ದ್ವಿಪ್ರತಿಯಲ್ಲಿ ಫಾರಂಗಳನ್ನು ವಿತರಿಸಿ, ಅವುಗಳನ್ನು ಭರ್ತಿ ಮಾಡಲು ಸೂಕ್ತ ನೆರವು ನೀಡಲಿದ್ದಾರೆ. ಸಾರ್ವಜನಿಕರು ಈ ಎರಡು ಫಾರಂಗಳನ್ನು ಭರ್ತಿ ಮಾಡಿ ಅಧಿಕಾರಿಗಳಿಗೆ ಮರಳಿ ನೀಡಬೇಕಿರುತ್ತದೆ. ಮತದಾರರು ತಮ್ಮ ಹೆಸರು ಪಟ್ಟಿಯಲ್ಲಿ ಇರುವುದನ್ನು ಖಚಿತಪಡಿಸಿಕೊಳ್ಳಲು ಈ ಸಮಯವನ್ನು ಬಳಸಿಕೊಳ್ಳಬಹುದು.

ಮನೆ ಮನೆ ಸಮೀಕ್ಷೆಯ ನಂತರ, ಆಗಸ್ಟ್ 5ರಂದು ಕರಡು ಮತದಾರರ ಪಟ್ಟಿಯನ್ನು ಅಧಿಕೃತವಾಗಿ ಬಿಡುಗಡೆ ಮಾಡಲಾಗುತ್ತದೆ. ಈ ಪಟ್ಟಿಗೆ ಸಂಬಂಧಿಸಿದಂತೆ ಸಾರ್ವಜನಿಕರು ತಮ್ಮ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು ಆಗಸ್ಟ್ 5 ರಿಂದ ಸೆಪ್ಟೆಂಬರ್ 4ರ ವರೆಗೆ ಕಾಲಾವಕಾಶ ಕಲ್ಪಿಸಲಾಗಿದೆ. ಸಾರ್ವಜನಿಕರಿಂದ ಬರುವ ಆಕ್ಷೇಪಣೆಗಳ ಪರಿಶೀಲನೆ, ನೋಟಿಸ್ ಜಾರಿ ಹಾಗೂ ವಿಲೇವಾರಿ ಪ್ರಕ್ರಿಯೆಗಳು ಅಕ್ಟೋಬರ್ 3ರವರೆಗೆ ನಡೆಯಲಿವೆ. ಎಲ್ಲಾ ಪ್ರಕ್ರಿಯೆಗಳು ಮುಗಿದ ನಂತರ, ಅಕ್ಟೋಬರ್ 7ರಂದು ರಾಜ್ಯದ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Join WhatsApp

Join Now

Join Telegram

Join Now