Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಎಸ್ .ಐ.ಆರ್ ಪಟ್ಟಿಯಲ್ಲಿ ಇಲ್ಲದ ಮತದಾರರು ನಮೂನೆ-6 ಸಲ್ಲಿಸಲು ಅವಕಾಶ

---Advertisement---

ಬೆಂಗಳೂರು : ಕೇಂದ್ರ ಚುನಾವಣಾ ಆಯೋಗದ ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2026 ರ ಕರಡು ಮತದಾರರ ಪಟ್ಟಿಯಲ್ಲಿ ಹೆಸರು ಕಂಡುಬರದ ಹಿಂದಿನ ಮತದಾರರು ನಮೂನೆ-6 ಸಲ್ಲಿಸಬಹುದಾಗಿದೆ ಎಂದು ಅಪರ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಬೆಂಗಳೂರು ನಗರ  ಜಿಲ್ಲಾಧಿಕಾರಿಗಳಾದ ಕಾಂತರಾಜು.ಪಿ.ಎಸ್ ಅವರು ತಿಳಿಸಿದ್ದಾರೆ .

ಮತದಾರರೊಬ್ಬರು ಈ ಹಿಂದಿನ ಮತದಾರರ ಪಟ್ಟಿಯಲ್ಲಿ ಸೇರ್ಪಡೆಗೊಂಡಿದ್ದು, ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2026 (SIR) ಪ್ರಕ್ರಿಯೆಯ ಸಂದರ್ಭದಲ್ಲಿ ಅಥವಾ ತದನಂತರ ನಮೂನೆ-6 (Form 6) ನ್ನು ಸಲ್ಲಿಸಿರುತ್ತಾರೆ ಎಂಬ ಕಾರಣಕ್ಕಾಗಿ ಮಾತ್ರ, ಆ ಮತದಾರರ ವಿರುದ್ಧ ಮತದಾರರ ನೋಂದಣಾಧಿಕಾರಿಗಳು (ERO), ಪ್ರಜಾಪ್ರತಿನಿಧಿ ಕಾಯ್ದೆ, 1950 ರ ಕಲಂ 31 ರ ಅಡಿಯಲ್ಲಿ ಯಾವುದೇ ಕ್ರಮ ಜರುಗಿಸುವಂತಿಲ್ಲ.

ಆದರೆ, ಆ ಮತದಾರರು ಬೇರೆ ಯಾವುದೇ ಲೋಕಸಭಾ ಅಥವಾ ವಿಧಾನಸಭಾ ಕ್ಷೇತ್ರದಲ್ಲಿ ಈಗಾಗಲೇ ನೋಂದಾಯಿತರಾಗಿರಬಾರದು ಹಾಗೂ ಅವರು ಸಲ್ಲಿಸಿರುವ ಘೋಷಣೆಯು (Declaration) ಕಾನೂನಿನ ನಿಯಮಾವಳಿಗಳಿಗೆ ಅನುಸಾರವಾಗಿರಬೇಕು ಎಂಬ ಷರತ್ತಿಗೊಳಪಟ್ಟಿರುತ್ತದೆ ಎಂದು ಭಾರತ ಚುನಾವಣಾ ಆಯೋಗ ಸ್ಪಷ್ಟೀಕರಣ ನೀಡಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Join WhatsApp

Join Now

Join Telegram

Join Now