Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಮತದಾನ ಜಾಗೃತಿ : ಚಿತ್ರದುರ್ಗದಲ್ಲಿ ಗಮನ ಸೆಳೆದ ವಿಕಲಚೇತನರ ಬೈಕ್ ರ‌್ಯಾಲಿ

---Advertisement---

 

ಮಾಹಿತಿ ಮತ್ತು ಫೋಟೋ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ

ಚಿತ್ರದುರ್ಗ, (ಏ.18) : ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023ರ ಸಂಬಂಧ ಮತದಾನದ ಬಗ್ಗೆ ಅರಿವು ಮೂಡಿಸಲು ವಿ.ಆರ್.ಡಬ್ಲ್ಯೂ, ಯು.ಆರ್.ಡಬ್ಲ್ಯೂ, ಎಂ.ಆರ್.ಡಬ್ಲ್ಯೂ ಮತ್ತು ವಿಕಲಚೇತನರಿಂದ ಏರ್ಪಡಿಸಿದ್ದ ವಿಕಲಚೇತನರ ಬೈಕ್ ರ್ಯಾಲಿ ಗಮನ ಸೆಳೆಯಿತು.

ಇಲ್ಲಿನ ಮದಕರಿ ನಾಯಕ ವೃತ್ತದಲ್ಲಿ ಮಂಗಳವಾರ ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ, ತಾಲ್ಲೂಕು ಆಡಳಿತ, ತಾಲ್ಲೂಕು ಸ್ವೀಪ್ ಸಮಿತಿ ಹಾಗೂ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಇವರ ಸಹಯೋಗದಲ್ಲಿ ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಅಂಗವಾಗಿ ಮತದಾನ ಶೇಕಡವಾರು ಪ್ರಮಾಣ ಹೆಚ್ಚಿಸುವ ಹಾಗೂ ನೈತಿಕ ಮತದಾನಕ್ಕೆ ಹೆಚ್ಚಿಸುವ ಸಂಬಂಧ ಹಮ್ಮಿಕೊಂಡಿದ್ದ ವಿಕಲಚೇತನರ ಬೈಕ್ ರ್ಯಾಲಿಗೆ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಂ.ಎಸ್.ದಿವಾಕರ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.

ವಿಕಲಚೇತನರ ಬೈಕ್ ರ್ಯಾಲಿಯಲ್ಲಿ ಪಾಲ್ಗೊಂಡು, ಜಿಲ್ಲಾಧಿಕಾರಿ ಕಚೇರಿ ವೃತ್ತದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ, ಕಡಿಮೆ ಮತದಾನವಾಗಿರುವ ಪ್ರದೇಶಗಳಲ್ಲಿ ಸ್ವೀಪ್ ಸಮಿತಿಯಿಂದ ಮತದಾನದ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ. ವಿ.ಆರ್.ಡಬ್ಲ್ಯೂ, ಯು.ಆರ್.ಡಬ್ಲ್ಯೂ, ಎಂ.ಆರ್.ಡಬ್ಲ್ಯೂ ಮತ್ತು ವಿಕಲಚೇತನರು ಮತದಾನದ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಪಾಲ್ಗೊಂಡಿರುವುದು ಸಂತೋಷದ ಸಂಗತಿ ಎಂದು ಹೇಳಿದರು.

ಮೇ 10ರಂದು ನಡೆಯುವ ವಿಧಾನಸಭೆ ಸಾರ್ವತ್ರಿಕ ಚನಾವಣೆಯಲ್ಲಿ ಎಲ್ಲ ಮತದಾರರು ನೈತಿಕ ಮತದಾನ ಮಾಡಬೇಕು. ಯಾವುದೇ ಆಮಿಷಕ್ಕೆ ಒಳಗಾಗದೇ ಜಿಲ್ಲೆಯ ಎಲ್ಲ ಮತದಾರರು ತಮ್ಮ ಮತಗಟ್ಟೆಗಳಿಗೆ ತೆರಳಿ ಕಡ್ಡಾಯವಾಗಿ ಮತ ಚಲಾಯಿಸುವ ಮೂಲಕ ಪ್ರಜಾಪ್ರಭುತ್ವದ ಹಬ್ಬದಲ್ಲಿ ಎಲ್ಲರೂ ಭಾಗಿಯಾಗಿ ಪ್ರಜಾಪ್ರಭುತ್ವ ಸದೃಢಗೊಳಿಸಬೇಕು ಎಂದರು.

ಚಿತ್ರದುರ್ಗ ನಗರದ ಮದಕರಿ ನಾಯಕ ವೃತ್ತದಿಂದ ಆರಂಭವಾದ ವಿಕಲಚೇತನರ ಬೈಕ್ ರ್ಯಾಲಿಯು, ಅಂಬೇಡ್ಕರ್ ವೃತ್ತ, ಮಹಾವೀರ ವೃತ್ತ, ಎಸ್‍ಬಿಎಂ ವೃತ್ತ, ಗಾಂಧಿ ವೃತ್ತದ ಮೂಲಕ ಸಂಗೋಳ್ಳಿ ರಾಯಣ್ಣ ವೃತ್ತದವರೆಗೂ ಸಂಚರಿಸಿ, ನಂತರ ಜಿಲ್ಲಾಧಿಕಾರಿ ಕಚೇರಿ ವೃತ್ತ ತಲುಪಿತು.

ಜಿಲ್ಲಾಧಿಕಾರಿ ಕಚೇರಿ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ, ನಮ್ಮ ಮತ ನಮ್ಮ ಹಕ್ಕು, ನೇತ್ರದಾನ ಮಹಾದಾನ, ಮತದಾನ ಶ್ರೇಷ್ಟದಾನ, ಮತ ಮಾಡಿ, ಮತ ಮಾಡಿಸಿ, ಮತದಾನ ನಮ್ಮ ಕರ್ತವ್ಯ, ನಿಮ್ಮ ಮತ ನಾಡಿಗೆ ಹಿತ, ಮತದಾನ ಪವಿತ್ರ ದಾನ, ಎಲ್ಲರೂ ತಪ್ಪದೇ ಮತದಾನ ಮಾಡಿ, ಸದೃಢ ಭಾರತಕ್ಕಾಗಿ ನನ್ನ ಮತದಾನ,  ಮೇ 10ರಂದು ಬುಧವಾರ ತಪ್ಪದೇ ಎಲ್ಲರೂ ಮತದಾನ ಮಾಡಬೇಕು ಎಂದು ಸಂದೇಶ ಸಾರುವುದರ ಮೂಲಕ ಮತದಾನ ಜಾಗೃತಿ ಮೂಡಿಸಲಾಯಿತು.

ಇದೇ ಸಂದರ್ಭದಲ್ಲಿ ತಾಲ್ಲೂಕು ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಚಿತ್ರದುರ್ಗ ವಿಧಾನಸಭಾ ಕ್ಷೇತ್ರ ಎಂ.ಸಿ.ಸಿ ನೋಡೆಲ್ ಅಧಿಕಾರಿ ಹನುಮಂತಪ್ಪ ಅವರು ವಿ.ಆರ್.ಡಬ್ಲ್ಯೂ, ಯು.ಆರ್.ಡಬ್ಲ್ಯೂ, ಎಂ.ಆರ್.ಡಬ್ಲ್ಯೂ ಮತ್ತು ವಿಕಲಚೇತನರಿಗೆ ಮತದಾರರ ಪ್ರತಿಜ್ಞಾವಿಧಿ ಬೋಧಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಂ.ಎಸ್.ದಿವಾಕರ, ತಾಲ್ಲೂಕು ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೆಚ್.ಹನುಮಂತಪ್ಪ, ಸಹಾಯಕ ನಿರ್ದೇಶಕ ಪಿ.ಟಿ.ಧನಂಜಯ, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜೆ.ವೈಶಾಲಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸುಧಾ, ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ವೀಣಾ, ಎಂ.ಆರ್.ಡಬ್ಯೂ ಎನ್.ಮೈಲಾರಪ್ಪ ಸೇರಿದಂತೆ ವಿ.ಆರ್.ಡಬ್ಲ್ಯೂ, ಯು.ಆರ್.ಡಬ್ಲ್ಯೂ ಹಾಗೂ ವಿಕಲಚೇತನರು ಇದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...