ಹೊಳಲ್ಕೆರೆ, (ಏ.07): ತಾಲ್ಲೂಕಿನ ಪುಣಜೂರು ಗ್ರಾಮದಲ್ಲಿ ವಿಧಾನಸಭಾ ಚುನಾವಣೆ-2023 ರ ಪ್ರಯುಕ್ತ ಗ್ರಾಮದ ಜನರಿಗೆ ಮತದಾನ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿತ್ತು.
ಈ ಸಂದಭ೯ದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿ ಜಿ.ಎಸ್.ಸುರೇಶ್ ಮಾತನಾಡಿ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾರರೇ ಪ್ರಭುಗಳು. ಅವರು ಚಲಾಯಿಸುವ ಪ್ರತಿಯೊಂದು ಮತಕ್ಕೂ ಮಹತ್ವವಿದೆ. 18 ವಷ೯ ದಾಟಿದ ಎಲ್ಲರೂ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ನೊಂದಾಯಿಸಿಕೊಂಡು ಮತದಾನ ಮಾಡಬೇಕು.
ಶೇ 100 ರಷ್ಟು ಮತದಾನವಾಗುವುದರಿಂದ ಸದೃಢ ಪ್ರಜಾಪ್ರಭುತ್ವ ಕಟ್ಟಲು ಸಾಧ್ಯ ಆ ದಿಸೆಯಲ್ಲಿ ಸಂವಿಧಾನತ್ಮಕ ಹಕ್ಕಾದ ಮತದಾನ ಕಾಯ೯ದಲ್ಲಿ ಭಾಗವಹಿಸಿ ತಪ್ಪದೇ ಮತದಾನ ಮಾಡಬೇಕು. ಮೇ 10 ರಂದು ನಡೆಯುವ ವಿಧಾನಸಭಾ ಚುನಾವಣೆಗೆ ಮತದಾನ ನಡೆಯಲಿದ್ದು 80 ವರ್ಷ ಮೇಲ್ಪಟ್ಟವರು ಹಾಗೂ ವಿಕಲಚೇತನರಿಗೆ ಮನೆಯಿಂದಲೇ ಮತದಾನ ಮಾಡುವ ವ್ಯವಸ್ಥೆಯನ್ನು ಚುನಾವಣೆ ಆಯೋಗ ಘೋಷಿಸಿದ್ದು ಇದನ್ನು ಸದುಪಯೋಗಪಡಿಸಿಕೊಂಡು ಯಾವುದೇ ಆಮಿಷೆಗಳಿಗೆ ಮರಳಾಗದೇ ಮುಕ್ತವಾಗಿ ಮತದಾನ ಮಾಡಲು ಗ್ರಾಮಸ್ಥರಿಗೆ ಮತದಾನದ ಜಾಗೃತಿ ಮೂಡಿಸಲಾಯಿತು.
ಸ್ಥಳದಲ್ಲಿ ಪೋಲಿಸ್ ರಂಗಸ್ವಾಮಿ ಪುಣಜೂರು ಗ್ರಾಮಸ್ಥರು ಉಪಸ್ಥಿತರಿದ್ದರು.