Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ನಾಳೆ ಮತದಾನ : ಹೇಗಿದೆ ವಾತಾವರಣ, ಕಣದಲ್ಲಿರುವ ಅಭ್ಯರ್ಥಿಗಳೆಷ್ಟು..?

---Advertisement---

 

ದಾವಣಗೆರೆ: ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಭರ್ಜರಿ ಸಿದ್ಧತೆ ನಡೆದಿದೆ. ಇಂದು ಮನೆ ಮನೆ ಪ್ರಚಾರವಿದ್ದು, ನಾಳೆ ಮತದಾನ ನಡೆಯಲಿದೆ. ಕಾಂಗ್ರೆಸ್ ಮತ್ತು ಬಿಜೆಪಿಗೆ ನೇರಾ ನೇರ ಫೈಟ್ ಇದೆ. ದಾವಣಗೆರೆಯ ಜನರ ಅಭಿಪ್ರಾಯವೂ ವಿಭಿನ್ನವಾಗಿದೆ, ಮಿಶ್ರ ಮನಸ್ಥಿತಿಯಲ್ಲಿದ್ದಾರೆ. ಎಲ್ಲಾ ಪಕ್ಷಗಳಿಂದಾನೂ ಸೇರಿ ದಾವಣಗೆರೆ ಕ್ಷೇತ್ರದಲ್ಲಿ ಬರೋಬ್ಬರಿ 25 ಜನ ಕಣದಲ್ಲಿದ್ದಾರೆ. ಈಗಾಗಲೇ ಶಿಗ್ಗಾಂವಿ, ಸಂಡೂರು, ಚನ್ನಪಟ್ಟಣದ ಉಪಚುನಾವಣೆಯಲ್ಲಿ ಭರ್ಜರಿಯಾಗಿ ಗೆದ್ದಿರುವ ಕಾಂಗ್ರೆಸ್ ಈ ಎರಡು ಕ್ಷೇತ್ರಗಳಲ್ಲೂ ಗೆಲ್ಲುವ ಭರವಸೆಯನ್ನ ಹೊಂದಿದೆ. ಬಿಜೆಪಿ ಕೂಡ ಠಕ್ಕರ್ ಕೊಡೋದಕ್ಕೆ ರೆಡಿಯಾಗಿದೆ.

ಹಾಗಾದ್ರೆ ದಾವಣಗೆರೆ ಕ್ಷೇತ್ರ ಹೇಗಿದೆ ಅನ್ನೋದನ್ನ ನೋಡೋದಾದ್ರೆ, ನಾಳೆ ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮತದಾನ ನಡೆಯಲಿದೆ. ಪಿಬಿ ರಸ್ತೆಯ ಬಳಿ ಇರುವ ಡಿಆರ್ ಆರ್ ಸ್ಕೂಲ್ ನಲ್ಲಿ ಸಿದ್ಧತೆಗಳು ನಡೆದಿವೆ. ಮಸ್ಟರಿಂಗ್ ಕಾರ್ಯವೂ ನಡೆದಿದ್ದು, 1425 ಚುನಾವಣಾ ಸಿಬ್ಬಂದಿ ಭಾಗಿಯಾಗಿದ್ದಾರೆ. ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಒಟ್ಟು ಒಟ್ಟು 284 ಮತಗಟ್ಟೆಗಳನ್ನು ಸ್ಥಾಪನೆ ಮಾಡಲಾಗಿದೆ. ಇದರಲ್ಲಿ 76 ಮತಗಟ್ಟೆಗಳನ್ನು ಅತಿ ಸೂಕ್ಷ್ಮ ಎಂದು ಗುರುತಿಸಲಾಗಿದೆ.

244 ಮತಗಟ್ಟೆ ಅಧಿಕಾರಿಗಳನ್ನ ನೇಮಕ ಮಾಡಲಾಗಿದೆ. ವೆಬ್ ಕಾಸ್ಟಿಂಗ್ ವ್ಯವಸ್ಥೆಯನ್ನು ಮಾಡಲಾಗಿದೆ. ಕಾಂಗ್ರೆಸ್ ಮತ್ತು ಬಿಜೆಪಿ ಸೇರಿ 25 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಒಂದು ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿಯನ್ನ ನೇಮಕ ಮಾಡಲಾಗಿದೆ. 38 ಸಶಸ್ತ್ರ ಮೀಸಲು ತುಕಡಿಗಳು, 37 ಎಎಸ್ಐಗಳು, 164 ಪ್ರೊಬೇಷನರಿ ಪಿಎಸ್ಐಗಳು, 47 ಹೆಡ್ ಕಾನ್ಸ್‌ಟೇಬರ್, 284 ಕಾನ್ಸ್‌ಟೇಬಲ್ ಹಾಗೂ 212 ಮಹಿಳಾ ಕಾನ್ಸ್‌ಟೇಬಲ್ ಗಳನ್ನು ಭದ್ರತೆಗಾಗಿ ನಿಯೋಜನೆ ಮಾಡಲಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...