Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ವಿಧಾನ ಪರಿಷತ್ ಚುನಾವಣೆಗೆ ಇಂದು ಬೆಳಗ್ಗೆ 9 ಗಂಟೆಯಿಂದ ಮತದಾನ ಆರಂಭ

---Advertisement---

ಬೆಂಗಳೂರು.ಜೂನ್.18: ರಾಜ್ಯದ ರಾಜಕೀಯ ವಲಯದ ಗಮನ ಸೆಳೆದಿರುವ ವಿಧಾನ ಪರಿಷತ್ ನ ಏಳು ಸ್ಥಾನಗಳಿಗೆ ಇಂದು ಚುನಾವಣೆ ನಡೆಯಲಿದೆ. ಬೆಳಿಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದ್ದು, ಸಂಜೆ 5 ಗಂಟೆಯಿಂದ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಲಿದೆ.

ಅಡ್ಡ ಮತದಾನ ತಪ್ಪಿಸಲು ಪ್ರಮುಖ ಪಕ್ಷಗಳು ತಮ್ಮ ಶಾಸಕರನ್ನು ರೆಸಾರ್ಟ್ ಗಳಲ್ಲಿ ತಂಗಿಸಿವೆ. ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕತ್ವವು ಶಾಸಕರ ಮೇಲೆ ನಿಗಾ ವಹಿಸಿದ್ದು, ಮತದಾನದ ದಿನ ಪ್ರತ್ಯೇಕ ಬಸ್ಗಳ ಮೂಲಕ ವಿಧಾನಸೌಧಕ್ಕೆ ಕರೆತಂದು ಮತ ಚಲಾಯಿಸುವ ವ್ಯವಸ್ಥೆ ಮಾಡಲಾಗಿದೆ.

ಈ ಚುನಾವಣೆಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇರವಾಗಿ ತಂತ್ರ ರೂಪಿಸಿದ್ದು, ಗೆಲ್ಲುವ ಸಾಧ್ಯತೆಯಿರುವ ಸ್ಥಾನಗಳಿಗಿಂತ ಹೆಚ್ಚುವರಿಯಾಗಿ ತಮ್ಮ ಆಪ್ತ ನಾಯಕ ವಿನಯ್ ಕಾರ್ತಿಕ್ ಅವರನ್ನು ಅಭ್ಯರ್ಥಿಯಾಗಿ ಕಣಕ್ಕಿಳಿಸಿದ್ದಾರೆ. ಇದು ಕಾಂಗ್ರೆಸ್ನ ರಾಜಕೀಯ ಲೆಕ್ಕಾಚಾರಕ್ಕೆ ಹೊಸ ಆಯಾಮ ನೀಡಿದೆ.

ಮತ್ತೊಂದೆಡೆ, ಜೆಡಿಎಸ್ಗೆ ಸ್ವತಂತ್ರವಾಗಿ ಅಭ್ಯರ್ಥಿಯನ್ನು ಗೆಲ್ಲಿಸುವಷ್ಟು ಸಂಖ್ಯಾಬಲ ಇಲ್ಲದಿದ್ದರೂ ಶಾಸಕರ ವಿಶ್ವಾಸವನ್ನು ಗಟ್ಟಿಗೊಳಿಸುವ ಉದ್ದೇಶದಿಂದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಗೋವಿಂದರಾಜ್ ಅವರನ್ನು ಕಣಕ್ಕಿಳಿಸಿದ್ದಾರೆ.

ಪ್ರಸ್ತುತ ಸಂಖ್ಯಾಬಲದ ಲೆಕ್ಕಾಚಾರದ ಪ್ರಕಾರ ಕಾಂಗ್ರೆಸ್ ನಾಲ್ಕು ಸ್ಥಾನಗಳು ಹಾಗೂ ಬಿಜೆಪಿ ಎರಡು ಸ್ಥಾನಗಳನ್ನು ಗೆಲ್ಲುವ ಸಾಧ್ಯತೆ ಇದೆ. ಆದರೆ ಎಲ್ಲರ ಕುತೂಹಲದ ಕೇಂದ್ರಬಿಂದುವಾಗಿರುವ ಏಳನೇ ಸ್ಥಾನ ಯಾರ ಪಾಲಾಗಲಿದೆ ಎಂಬುದು ಫಲಿತಾಂಶದವರೆಗೆ ಸಸ್ಪೆನ್ಸ್ ಆಗಿಯೇ ಉಳಿದಿದೆ.
224 ಸದಸ್ಯರ ವಿಧಾನಸಭೆಯಲ್ಲಿ ಪ್ರಸ್ತುತ ಎರಡು ಸ್ಥಾನಗಳು ಖಾಲಿ ಇವೆ. ಕಾಂಗ್ರೆಸ್ 135 ಶಾಸಕರನ್ನು ಹೊಂದಿದ್ದರೆ, ಬಿಜೆಪಿ 62 ಸದಸ್ಯರನ್ನು ಹೊಂದಿದೆ. ಜೆಡಿಎಸ್ ಬಳಿ 18 ಶಾಸಕರಿದ್ದು, ಬಿಜೆಪಿಯಿಂದ ಉಚ್ಛಾಟನೆಗೊಂಡ ಮೂವರು ಶಾಸಕರು ಪ್ರತ್ಯೇಕವಾಗಿ ಗುರುತಿಸಿಕೊಂಡಿದ್ದಾರೆ.

ಜೊತೆಗೆ ಕೆಆರ್ ಪಿಪಿ ಪಕ್ಷದ ಜನಾರ್ದನ ರೆಡ್ಡಿ ಹಾಗೂ ಎಸ್ ಕೆಪಿ ಪಕ್ಷದ ದರ್ಶನ್ ಪುಟ್ಟಣ್ಣಯ್ಯ ತಲಾ ಒಬ್ಬ ಸದಸ್ಯರನ್ನು ಹೊಂದಿದ್ದಾರೆ. ಬಿಜೆಪಿ ಮಾಜಿ ಶಾಸಕರಾದ ಎಸ್.ಟಿ. ಸೋಮಶೇಖರ್ ಮತ್ತು ಶಿವರಾಮ್ ಹೆಬ್ಬಾರ್ ಕಾಂಗ್ರೆಸ್ ಪರವಾಗಿ ಕಾಣಿಸಿಕೊಳ್ಳುತ್ತಿರುವುದು ಚುನಾವಣೆಯ ಲೆಕ್ಕಾಚಾರವನ್ನು ಮತ್ತಷ್ಟು ಕುತೂಹಲಕರವಾಗಿಸಿದೆ.

Join WhatsApp

Join Now

Join Telegram

Join Now