ಚಿತ್ರದುರ್ಗ. ಜ.09: ವಾಣಿ ವಿಲಾಸ ಸಾಗರ ಜಲಾಶಯಕ್ಕೆ 700 ಕ್ಯೂಸೆಕ್ಸ್ ಒಳಹರಿವು ಬರುತ್ತಿದ್ದು, ವಾಣಿವಿಲಾಸ ಸಾಗರ ಜಲಾಶಯದಿಂದ ಅಷ್ಟೇ ಪ್ರಮಾಣದ ನೀರು ಯಾವುದೇ ಸಂದರ್ಭದಲ್ಲಾದರೂ ಕೋಡಿಯ ಮುಖಾಂತರ ವೇದಾವತಿ ನದಿಗೆ ಹರಿಯುತ್ತದೆ.
ಹಾಗಾಗಿ ವೇದಾವತಿ ನದಿಯ ತಗ್ಗು ಪ್ರದೇಶ ಹಾಗೂ ನದಿಯ ಎರಡೂ ದಂಡೆಗಳಲ್ಲಿ ಇರುವ ಸಾರ್ವಜನಿಕರು ತಮ್ಮ ಆಸ್ತಿ-ಪಾಸ್ತಿ ಹಾಗೂ ಜಾನುವಾರುಗಳ ರಕ್ಷಣೆಗೆ ಎಚ್ಚರಿಕೆ ವಹಿಸಿ ಸೂಕ್ತ ಮುಂಜಾಗ್ರತೆ ವಹಿಸಬೇಕು ಎಂದು ಹಿರಿಯೂರು ಕ್ಯಾಂಪ್ ವಿಶ್ವೇಶ್ವರಯ್ಯ ಜಲ ನಿಗಮ ನಿಯಮಿತ ಭದ್ರಾ ಮೇಲ್ದಂಡೆ ಯೋಜನೆ ವಿಭಾಗದ ಕಾರ್ಯಪಾಲಕ ಇಂಜಿನಿಯರ್ ತಿಳಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











