ಚಿತ್ರದುರ್ಗ, (ನ.14) : ಜಿಲ್ಲೆಯಲ್ಲಿ ಕಳೆದ ಮುರ್ನಾಲ್ಕು ದಿನಗಳಿಂದ ಬಿಡದೆ ಸುರಿಯುತ್ತಿರುವ ಜಿಟಿ ಜಿಟಿ ಮಳೆಗೆ ಮನೆಯ ಗೋಡೆ ಕುಸಿದು ಸ್ಥಳದಲ್ಲೇ ಗಂಡ ಹೆಂಡತಿ ಇಬ್ಬರು ಸಾವನ್ನಪ್ಪಿರುವ ಘಟನೆ ಹಿರಿಯೂರು ತಾಲೂಕಿನ ಕಾರೋಬನಹಟ್ಟಿ ಗ್ರಾಮದಲ್ಲಿ ನಡೆದಿದೆ.
ಚನ್ನಕೇಶವ (26) ಮತ್ತು ಸೌಮ್ಯ (20) ಎಂಬ ದಂಪತಿಗಳು ಸಾವನ್ನಪ್ಪಿದ್ದಾರೆ. ಕ್ಯಾತಣ್ಣ (55) ಎಂಬುವವರು ಗಾಯಗೊಂಡಿದ್ದು ಅವರನ್ನು ಚಿಕಿತ್ಸೆಗಾಗಿ ಚಿತ್ರದುರ್ಗ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.
ಐಮಂಗಲ ಪೋಲಿಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.