ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ನವೆಂಬರ್. 07 : ರೈತರ ಜಮೀನುಗಳನ್ನು ಕಬಳಿಸಲು ಹೊರಟಿರುವ ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯನ್ನು ಮುಚ್ಚುವಂತೆ ಕರ್ನಾಟಕ ನವ ನಿರ್ಮಾಣ ಸೇನೆ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಗುರುವಾರ ಪ್ರತಿಭಟನೆ ನಡೆಸಿ ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.
ನಾಡಿನಾದ್ಯಂತ ರೈತರ ಜಮೀನುಗಳಿಗೆ ಈಗಾಗಲೆ ನೋಟಿಸ್ ನೀಡಿರುವ ವಕ್ಫ್ ಮಠ ಮಾನ್ಯ, ಚರ್ಚ್, ದೇವಸ್ಥಾನ, ದರ್ಗಾಗಳ ಜಾಗವನ್ನು ಕಬಳಿಸುವ ಹುನ್ನಾರ ನಡೆಸುತ್ತಿದೆ. ಇದರಿಂದ ತಲ ತಲಾಂತರದಿಂದ ಭೂಮಿಯನ್ನು ಉಳುಮೆ ಮಾಡಿಕೊಂಡು ಬದುಕುತ್ತಿರುವವರು ಬೀದಿಗೆ ಬಿದ್ದಂತಾಗುತ್ತದೆ. ವಸತಿ ಸಚಿವ ಬಿ.ಝಡ್. ಜಮೀರ್ ಅಹಮದ್ ಖಾನ್ ಅಧಿಕಾರಿಗಳನ್ನು ಬೆದರಿಸಿ ಪಹಣಿಯಲ್ಲಿ ವಕ್ಫ್ ಎಂದು ದಾಖಲಿಸುವಂತೆ ತಾಕೀತು ಮಾಡುತ್ತಿರುವುದರಿಂದ ಕೂಡಲೆ ವಕ್ಫ್ ಸಚಿವ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜೀನಾಮೆ ನೀಡಬೇಕು. ಇಲ್ಲವಾದಲ್ಲಿ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಲಾಗುವುದೆಂದು ಪ್ರತಿಭಟನಾಕಾರರು ಎಚ್ಚರಿಸಿದರು.
ಕರ್ನಾಟಕ ನವ ನಿರ್ಮಾಣ ಸೇನೆ ಜಿಲ್ಲಾಧ್ಯಕ್ಷ ತಿಪ್ಪೇಸ್ವಾಮಿ ಎಂ. ಪ್ರಧಾನ ಕಾರ್ಯದರ್ಶಿ ತ್ಯಾಗರಾಜ್, ಉಪಾಧ್ಯಕ್ಷ ಶರೀಫ್, ಕಾರ್ಮಿಕ ಘಟಕದ ಅಧ್ಯಕ್ಷ ಫೈಜುಲ್ಲಾ ನಗರಾಧ್ಯಕ್ಷ ರಾಮು ಎನ್. ಯುವ ಘಟಕದ ಅಧ್ಯಕ್ಷ ಅನಿಲ್, ವಿದ್ಯಾರ್ಥಿ ಘಟಕದ ಅಧ್ಯಕ್ಷ ಎಂ.ಮಂಜುನಾಥ್, ಶಿವರಾಜ್, ನಂದಕುಮಾರ್ ಮಲ್ಲಿಕಾರ್ಜುನ್ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್