Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ದರ್ಶನ್ ಅಭಿಮಾನಿಗಳಿಗೆ ಎಚ್ಚರಿಕೆಯ ಸಂದೇಶ : ಏನದು..?

---Advertisement---

ಸದ್ಯ ಕನ್ನಡ ಚಿತ್ರರಂಗದಲ್ಲಿ ದರ್ಶನ್ ಅಭಿಮಾನಿಗಳ ವಿರುದ್ಧ ಒಳ್ಳೆ ಹುಡುಗ ಪ್ರಥಮ್ ಹಾಗೂ ಮೋಹಕತಾರೆ ರಮ್ಯಾ ಕೆಂಡಾಮಂಡಲರಾಗಿದ್ದಾರೆ. ಆ ಕಡೆ ನಟ ಪ್ರಥಮ್, ದರ್ಶನ್ ಅಭಿಮಾನಿಗಳು ನನ್ನ ಮೇಲೆ ಹಲ್ಲೆಗೆ ಪ್ರಯತ್ನ ಮಾಡ್ತಾರೆ ಅಂತ ಆರೋಪ ಮಾಡ್ತಾ ಇದ್ದಾರೆ. ಇತ್ತ ರಮ್ಯಾ ಕೂಡ ಗರಂ ಆಗಿದ್ದು, ದರ್ಶನ್ ಅಭಿಮಾನಿಗಳಿಗೆ ಬಹಿರಂಗವಾಗಿಯೇ ಸವಾಲು ಹಾಕಿದ್ದಾರೆ.

ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಬೇಕು ಅಂತ ರಮ್ಯಾ ಪೋಸ್ಟ್ ಹಾಕಿದ ಬಳಿಕ ದರ್ಶನ್ ಅಭಿಮಾನಿಗಳ ಹೆಸರಲ್ಲಿ ಕೆಟ್ಟದಾಗಿ ಮೆಸೇಜ್ ಗಳನ್ನ ಮಾಡ್ತಾ ಇದಾರೆ ಅಂತ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿದ್ದರು. ಜೊತೆಗೆ ನಾನು ಯಾರಿಗೂ ಹೆದರುವುದಿಲ್ಲ ಅಂತ ಕೂಡ ಹೇಳಿದ್ದಾರೆ. ದರ್ಶನ್‌ ಫ್ಯಾನ್ಸ್‌‌ ತಮಗೆ ಕಳಿಸಿರುವ ಮೆಸೇಜ್‌ಗಳ ಸ್ಕ್ರೀನ್‌ ಶಾಟ್‌ ಶೇರ್‌ ಮಾಡಿಕೊಂಡಿರುವ ನಟಿ ರಮ್ಯಾ ಅಭಿಮಾನಿಗಳ ವಿರುದ್ಧ ಸೈಬರ್‌ ಕ್ರೈಮ್‌ ವಿಭಾಗಕ್ಕೆ ಮತ್ತು ಮಹಿಳಾ ಆಯೋಗಕ್ಕೆ ದೂರು ನೀಡಲು ನಿರ್ಧರಿಸಿದ್ದಾರೆ. ಡಿ ಬಾಸ್‌ ಫ್ಯಾನ್ಸ್‌ ಎನ್ನಿಸಿಕೊಂಡವರು ಯಾರನ್ನೂ ಬಿಡುತ್ತಿಲ್ಲ. ಬರೀ ನನಗೆ ಮಾತ್ರವಲ್ಲ, ಅನೇಕರಿಗೆ ಹೀಗೆ ಕೆಟ್ಟ ಕೊಳಕು ಮೆಸೇಜ್‌ ಕಳಿಸುತ್ತಿದ್ದಾರೆ. ಸುದೀಪ್‌-ಯಶ್‌, ಅವರ ಕುಟುಂಬ, ಹೆಂಡತಿ-ಮಕ್ಕಳಿಗೂ ಸೋಷಿಯಲ್‌ ಮೀಡಿಯಾದಲ್ಲಿ ಬೈದಿದ್ದನ್ನ ನಾನು ನೋಡಿದ್ದೇನೆ ಎಂದು ಹೇಳಿದ್ದಾರೆ.

ಇದೀಗ ದರ್ಶನ್ ಅಭಿಮಾನಿಗಳು ಈ ಪ್ರಕರಣ ಸಂಬಂಧ ಮಹತ್ವದ ನಿರ್ಧಾರವನ್ನ ತೆಗೆದುಕೊಂಡಿದ್ದಾರೆ. ದರ್ಶನ್ ರೀತಿಯೇ ಶಾಂತಿ‌ಮಂತ್ರ ಘೋಷಿಸಿದ್ದಾರೆ. ‘ಡಿ ಬಾಸ್ ಮೇಲೆ ಅಭಿಮಾನ ಇರುವ ಯಾವೊಬ್ಬ ಅಭಿಮಾನಿ ಕೂಡ ಯಾವುದೇ ವಿವಾದಕ್ಕೂ ಕಿವಿಗೊಡಬೇಡಿ. ಯಾವುದಕ್ಕೂ ರಿಯಾಕ್ಟ್ ಮಾಡಬೇಡಿ. ಯಾರುಗೂ ಮೆಸೇಜ್ ಮಾಡಬೇಡಿ. ಪ್ರಚಾರಕ್ಕೆ ಆಗಲಿ, ಹುನ್ನಾರ ಮಾಡಿ ಆಗಲಿ, ಯಾರೂ ಏನೇ ಅಂದರು ತಲೆ ಕೆಡಿಸಿಕೊಳ್ಳಬೇಡಿ. ದರ್ಶನ್ ಫ್ಯಾನ್ಸ್ ಏನೆಂದು ಮಾಡಿರುವ ಸಮಾಜಮುಖಿ ಕಾರ್ಯಗಳು ಸಾಕ್ಷಿಯಿದೆ. ಈ ಅವಮಾನಗಳು ಇನ್ನಷ್ಟು ಒಳ್ಳೆಯ ಕೆಲಸಗಳನ್ನು ಮಾಡುವುದಕ್ಕೆ ಮೆಟ್ಟಿಲು ಆಗಲಿ ಎಂದು ಡಿ‌ಕಂಪನಿ ಪೋಸ್ಟ್ ಹಾಕಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...