Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

WATCH : ಜೈಪುರ ಪ್ರತಿಭಟನೆಯಲ್ಲಿ ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆಗೆ ಕಪಾಳಮೋಕ್ಷ : ವೈರಲ್ ಆದ ವಿಡಿಯೋ!

---Advertisement---

ಜೈಪುರ: ರಾಜಸ್ಥಾನದ ಜೈಪುರದಲ್ಲಿ ನಡೆದ ಪ್ರತಿಭಟನಾ ರ್ಯಾಂಲಿಯೊಂದು ದಿಢೀರ್ ಉದ್ವಿಗ್ನತೆಗೆ ಕಾರಣವಾಗಿದೆ. ಸೋಮವಾರ ಇಲ್ಲಿನ ಶಾಹೀದ್ ಸ್ಮಾರಕದಲ್ಲಿ ನಡೆದ ಧರಣಿ ವೇಳೆ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರಿಗೆ ಅಪರಿಚಿತ ವ್ಯಕ್ತಿಯೊಬ್ಬ ಕಪಾಳಮೋಕ್ಷ ಮಾಡಿದ್ದಾನೆ ಎಂದು ವರದಿಯಾಗಿದೆ.

ಕೆಲವು ವರದಿಗಳ ಪ್ರಕಾರ, ಇಬ್ಬರು ವ್ಯಕ್ತಿಗಳು ಸಿಜೆಪಿ ನಾಯಕನಿಗೆ ಕನಿಷ್ಠ 4 ಬಾರಿ ಕೆನ್ನೆಗೆ ಬಾರಿಸಿದ್ದಾರೆ ಎನ್ನಲಾಗಿದೆ. ಈ ಇಡೀ ಘಟನೆಯ ದೃಶ್ಯಾವಳಿಗಳು ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ವೈರಲ್ ಆಗುತ್ತಿವೆ. ವಿಡಿಯೋದಲ್ಲಿ ಸಭೆಯ ಮಧ್ಯೆ ನುಗ್ಗುವ ವ್ಯಕ್ತಿಯೊಬ್ಬ ದೀಪ್ಕೆ ಅವರಿಗೆ ಹೊಡೆಯುವುದನ್ನು ಕಾಣಬಹುದು. ಇದರಿಂದಾಗಿ ಸ್ಥಳದಲ್ಲಿ ಕೆಲಕಾಲ ಬೆಂಬಲಿಗರು ಮತ್ತು ಸಾರ್ವಜನಿಕರ ನಡುವೆ ತಳ್ಳಾಟ-ನೂಕಾಟ ಉಂಟಾಯಿತು.

ರಾಷ್ಟ್ರ ಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಗಳ ಅಕ್ರಮ ಹಾಗೂ ಯುವಜನರ ಸಮಸ್ಯೆಗಳನ್ನು ಖಂಡಿಸಿ ಸಿಜೆಪಿ ನಾಯಕರು ಮತ್ತು ಕಾರ್ಯಕರ್ತರು ಶಾಹೀದ್ ಸ್ಮಾರಕದಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ದರು. ಈ ವೇಳೆ ಕಾರ್ಯಕ್ರಮ ನಡೆಯುತ್ತಿದ್ದಾಗಲೇ ನುಗ್ಗಿದ ವ್ಯಕ್ತಿ ಅಭಿಜೀತ್ ದೀಪ್ಕೆ ಅವರಿಗೆ ಕಪಾಳಮೋಕ್ಷ ಮಾಡಿದ್ದಾನೆ. ಇದರಿಂದ ಸ್ಥಳದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಯಿತು. ತಕ್ಷಣವೇ ಎಚ್ಚೆತ್ತ ಬೆಂಬಲಿಗರು ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ನಿಯಂತ್ರಿಸಲು ಯತ್ನಿಸಿದರು.

ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದ ಪೊಲೀಸರು ತಕ್ಷಣ ಕಾರ್ಯಪ್ರವೃತ್ತರಾಗಿ, ಹಲ್ಲೆ ನಡೆಸಿದ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಪ್ರಸ್ತುತ ಪರಿಸ್ಥಿತಿ ಹತೋಟಿಯಲ್ಲಿದ್ದು, ದಾಳಿ ನಡೆಸಿದ ವ್ಯಕ್ತಿಯ ಗುರುತು ಹಾಗೂ ಹಲ್ಲೆಗೆ ನಿಖರವಾದ ಕಾರಣ ಏನೆಂಬುದು ಇನ್ನು ತಿಳಿದುಬಂದಿಲ್ಲ. ಈ ವಿಡಿಯೋ ಇಂಟರ್ನೆಟ್‌ನಲ್ಲಿ ಹರಿದಾಡುತ್ತಿದ್ದು, ಘಟನೆಯ ಕುರಿತು ಸೂಕ್ತ ತನಿಖೆ ನಡೆಸಬೇಕೆಂದು ಸಾರ್ವಜನಿಕರು ಒತ್ತಾಯಿಸುತ್ತಿದ್ದಾರೆ.

ನೀಟ್ (NEET) ಪೇಪರ್ ಲೀಕ್ ಸೇರಿದಂತೆ ಪ್ರಮುಖ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ನಡೆದಿರುವ ಅಕ್ರಮಗಳನ್ನು ವಿರೋಧಿಸಿ ಕಾಕ್ರೋಚ್ ಜನತಾ ಪಾರ್ಟಿ ಈ ಪ್ರತಿಭಟನೆಯನ್ನು ಆಯೋಜಿಸಿತ್ತು. ಪರೀಕ್ಷಾ ಮಂಡಳಿಗಳ ಪಾರದರ್ಶಕತೆಗೆ ಆಗ್ರಹಿಸಿದ್ದ ಪಕ್ಷವು, ಈ ವಿವಾದದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿತ್ತು. ವಿದ್ಯಾರ್ಥಿಗಳು, ಉದ್ಯೋಗಾಕಾಂಕ್ಷಿಗಳು ಹಾಗೂ ಪೋಷಕರು ಎದುರಿಸುತ್ತಿರುವ ಸಮಸ್ಯೆಗಳನ್ನು ರಾಷ್ಟ್ರದ ಗಮನಕ್ಕೆ ತರುವುದು ಈ ಧರಣಿಯ ಉದ್ದೇಶವಾಗಿತ್ತು ಎಂದು ಆಯೋಜಕರು ತಿಳಿಸಿದ್ದಾರೆ.

ಈ ಕಾರ್ಯಕ್ರಮದಲ್ಲಿ ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಮತ್ತು ರಾಷ್ಟ್ರೀಯ ವಕ್ತಾರ ಅಶುತೋಷ್ ರಾಂಕಾ ಸೇರಿದಂತೆ ಹಲವು ಪಕ್ಷದ ಮುಖಂಡರು ಹಾಗೂ ಸಾಮಾಜಿಕ ಕಾರ್ಯಕರ್ತರು ಭಾಗವಹಿಸಿದ್ದರು. ಶಿಕ್ಷಣ, ಉದ್ಯೋಗ ಮತ್ತು ನೇಮಕಾತಿ ಪರೀಕ್ಷೆಗಳಲ್ಲಿ ಪಾರದರ್ಶಕತೆ ತರಲು ಯುವಕರು, ವಿದ್ಯಾರ್ಥಿಗಳು ಮತ್ತು ಪೋಷಕರು ಹೆಚ್ಚಿನ ಸಂಖ್ಯೆಯಲ್ಲಿ ಬೆಂಬಲ ನೀಡಬೇಕೆಂದು ಪಕ್ಷವು ಕಾರ್ಯಕ್ರಮಕ್ಕೂ ಮುನ್ನ ಮನವಿ ಮಾಡಿತ್ತು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

Join WhatsApp

Join Now

Join Telegram

Join Now