ಸುದ್ದಿಒನ್,ಅಸ್ಸಾಂ,ಮೇ.14:ಗುರು ದೇವೋ ಭವ” ಎಂಬ ಮಾತಿಗೆ ಕಳಂಕ ತರುವಂತಹ ಘಟನೆಯೊಂದು ಅಸ್ಸಾಂನ ಚರೈದಿಯೊ ಜಿಲ್ಲೆಯ ಮಥುರಾಪುರ ಬಗಿಚಾ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಗಳ ಮೇಲೆ ಶಿಕ್ಷಕನೊಬ್ಬ ರಾಕ್ಷಸನಂತೆ ಎರಗಿ ಹಲ್ಲೆ ನಡೆಸಿದ್ದು, ಸದ್ಯ ಆತನನ್ನು ಪೊಲೀಸರು ಬಂಧಿಸಿದ್ದಾರೆ.
ಶಾಲೆಯ ಕೊಠಡಿಯಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ (CCTV) ದೃಶ್ಯಾವಳಿಗಳನ್ನು ಮುಖ್ಯೋಪಾಧ್ಯಾಯರು ಪರಿಶೀಲಿಸಿದಾಗ ಈ ಆಘಾತಕಾರಿ ವಿಷಯ ಬೆಳಕಿಗೆ ಬಂದಿದೆ. ಶಾಲಾ ಅವಧಿಯಲ್ಲಿ ಶಿಕ್ಷಕನು ಸಣ್ಣ ವಯಸ್ಸಿನ ಮಕ್ಕಳನ್ನು ಮನಬಂದಂತೆ ಥಳಿಸುತ್ತಿರುವುದು ವಿಡಿಯೋದಲ್ಲಿ ಸ್ಪಷ್ಟವಾಗಿ ದಾಖಲಾಗಿದೆ.
ಬಂಧಿತ ಶಿಕ್ಷಕನನ್ನು ಮಥುರಾಪುರ ತಿನಿಯಾಲಿಯ ನಿವಾಸಿ, 51 ವರ್ಷದ ಮೊಹಮ್ಮದ್ ಅರಿಫುಲ್ ಇಸ್ಲಾಂ ಎಂದು ಗುರುತಿಸಲಾಗಿದೆ. ಶಿಕ್ಷಕನು ವಿದ್ಯಾರ್ಥಿಗಳಿಗೆ ತೀವ್ರವಾಗಿ ಹೊಡೆಯುವುದು ಮಾತ್ರವಲ್ಲದೆ, ಒಂದು ಹಂತದಲ್ಲಿ ಮಗುವೊಂದನ್ನು ತರಗತಿಯ ಕಿಟಕಿಯಿಂದ ಹೊರಕ್ಕೆ ತಳ್ಳಲು ಪ್ರಯತ್ನಿಸಿರುವುದು ಕಂಡುಬಂದಿದೆ.ಪಾಠ ಮಾಡಬೇಕಾದ ಸಮಯದಲ್ಲಿ ವಿದ್ಯಾರ್ಥಿಗಳಿಂದ ಬಲವಂತವಾಗಿ ಮೈ-ಕೈ ಮಸಾಜ್ ಮಾಡಿಸಿಕೊಳ್ಳುತ್ತಿದ್ದ ಎಂಬ ಗಂಭೀರ ಆರೋಪವೂ ಕೇಳಿಬಂದಿದೆ.
ವೈರಲ್ ವಿಡಿಯೋ
ಈ ದೃಶ್ಯಾವಳಿಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಸಾರ್ವಜನಿಕರಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.ವಿಡಿಯೋ ಹರಿದಾಡುತ್ತಿದ್ದಂತೆ ಶಾಲೆಯ ಮುಂದೆ ಜಮಾಯಿಸಿದ ಪೋಷಕರು ಶಿಕ್ಷಕನ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದರು. ಅಸ್ಸಾಂ ಚಹಾ ಬುಡಕಟ್ಟು ವಿದ್ಯಾರ್ಥಿಗಳ ಸಂಘ (ATTSA) ಈ ಬಗ್ಗೆ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದ್ದು, ವಿದ್ಯಾರ್ಥಿಗಳ ರಕ್ಷಣೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದೆ.
ಘಟನೆಗೆ ಸಂಬಂಧಿಸಿದಂತೆ ಶಾಲಾ ವ್ಯವಸ್ಥಾಪನಾ ಸಮಿತಿಯು ಮೇ 5 ರಂದು ಶಿಕ್ಷಣ ಇಲಾಖೆಗೆ ಲಿಖಿತ ದೂರು ನೀಡಿದೆ. ವಿಡಿಯೋ ಆಧಾರದ ಮೇಲೆ ಪೊಲೀಸರು ಅರಿಫುಲ್ ಇಸ್ಲಾಂನನ್ನು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸುತ್ತಿದ್ದಾರೆ. ಬ್ಲಾಕ್ ಶಿಕ್ಷಣಾಧಿಕಾರಿಗಳು ಈ ಬಗ್ಗೆ ಸಮಗ್ರ ತನಿಖೆ ನಡೆಸಿ ವರದಿ ನೀಡುವಂತೆ ಶಿಕ್ಷಣ ಇಲಾಖೆ ಆದೇಶಿಸಿದೆ.
Mulla Monster!
Ariful Islam, teacher at Mathurapur PMC Primary School, brutally assaulted innocent children and tried to throw a student out of a first-floor window in Sonari, Assam.
Locals demand strictest action against this monster teacher.@DGPAssamPolice pic.twitter.com/7feyWgfWFs
— Treeni (@treeni) May 14, 2026







