Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ನೀರಿನ ಬಾಟಲಿ ದರ ಏರಿಕೆ : ಜನರಿಗೆ ಮತ್ತೊಂದು ಹೊರೆ 

---Advertisement---

ಯುದ್ದದ ಪರಿಣಾಮವಾಗಿ ಗ್ಯಾಸ್, ಇಂಧನ ಮತ್ತು ಅಡುಗೆ ಎಣ್ಣೆ ಬೆಲೆ ಏರಿಕೆಯಿಂದಲೇ ಸಂಕಷ್ಟದಲ್ಲಿರುವ ಜನರಿಗೆ ಇದೀಗ ಕುಡಿಯುವ ನೀರಿನ ಬಾಟಲಿಗಳ ದರ ಏರಿಕೆಯ ಬಿಸಿ ತಟ್ಟಿದೆ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಏರಿಕೆಯಾಗಿರುವುದೇ ಇದಕ್ಕೆ ಪ್ರಮುಖ ಕಾರಣವೆಂದು ತಿಳಿದುಬಂದಿದೆ.

ಪ್ಲಾಸ್ಟಿಕ್ ವಾಟರ್ ಬಾಟಲಿಗಳ ತಯಾರಿಕೆಗೆ ಅಗತ್ಯವಾದ ‘ಪಾಲಿಮರ್’ ಅನ್ನು ಕಚ್ಚಾ ತೈಲದಿಂದ ಉತ್ಪಾದಿಸಲಾಗುತ್ತದೆ. ಯುದ್ಧ ಪರಿಸ್ಥಿತಿಯಿಂದ ತೈಲದ ಬೆಲೆ ಗಗನಕ್ಕೇರಿರುವುದರಿಂದ, ಪ್ಲಾಸ್ಟಿಕ್ ಕಚ್ಚಾ ವಸ್ತುಗಳ ಬೆಲೆ ಶೇ.50ರಷ್ಟು ಏರಿಕೆಯಾಗಿ ಕಿಲೋಗೆ ₹170 ತಲುಪಿದೆ. ಜೊತೆಗೆ ಬಾಟಲಿ ಮೂಡಿಗಳು, ಲೇಬಲ್ ಮತ್ತು ಪ್ಯಾಕೇಜಿಂಗ್ ಬಾಕ್ಸ್‌ಗಳ ಬೆಲೆಯೂ ದ್ವಿಗುಣವಾಗಿದೆ.

ದೇಶದ ಪ್ರಮುಖ ನೀರಿನ ಬ್ರ್ಯಾಂಡ್‌ಗಳಾದ Bisleri, Parle Agro ಹಾಗೂ Clear ಸೇರಿದಂತೆ ಹಲವಾರು ಕಂಪನಿಗಳು ತಮ್ಮ ಉತ್ಪನ್ನಗಳ ದರವನ್ನು ಶೇ.8ರಿಂದ 11ರಷ್ಟು ಹೆಚ್ಚಿಸಿವೆ.ಬಿಸ್ಲರಿ ಕಂಪನಿಯ 1 ಲೀಟರ್‌ ಬಾಟಲಿಗಳ 12 ಪ್ಯಾಕ್‌ ಬೆಲೆ ₹216ರಿಂದ ₹240ಕ್ಕೆ ಏರಿಕೆಯಾಗಿದೆ. ಉತ್ಪಾದನಾ ವೆಚ್ಚ ಹಾಗೂ ಪ್ಯಾಕೇಜಿಂಗ್ ಸಾಮಗ್ರಿಗಳ ದರ ಏರಿಕೆಯಿಂದ ಈ ಕ್ರಮ ಅನಿವಾರ್ಯವಾಗಿದೆ ಎಂದು ಕಂಪನಿಗಳು ಸ್ಪಷ್ಟಪಡಿಸಿವೆ.

ಇದಕ್ಕೂ ಮೊದಲು ಕೇಂದ್ರ ಸರ್ಕಾರ ನೀರಿನ ಬಾಟಲಿಗಳ ಮೇಲಿನ ಜಿಎಸ್‌ಟಿಯನ್ನು ಶೇ.18ರಿಂದ ಶೇ.5ಕ್ಕೆ ಇಳಿಸಿದ್ದರಿಂದ ದರದಲ್ಲಿ ಇಳಿಕೆ ಕಂಡುಬಂದಿತ್ತು. ಆದರೆ ಇದೀಗ ಕಚ್ಚಾ ವಸ್ತುಗಳ ಬೆಲೆ ಏರಿಕೆಯಿಂದ ಆ ಪ್ರಯೋಜನ ಬಹುತೇಕ ನಷ್ಟವಾಗಿದೆ.ಭಾರತದಲ್ಲಿ ಶೇ.70ರಷ್ಟು ಅಂತರ್ಜಲ ಕಲುಷಿತಗೊಂಡಿರುವ ಹಿನ್ನೆಲೆಯಲ್ಲಿ ಕೋಟ್ಯಾಂತರ ಜನರು ಕುಡಿಯುವ ನೀರಿಗಾಗಿ ಬಾಟಲಿಗಳನ್ನೇ ಅವಲಂಬಿಸಿದ್ದಾರೆ. ಬೇಸಿಗೆ ಕಾಲ ಆರಂಭವಾಗುತ್ತಿರುವ ಈ ಸಂದರ್ಭದಲ್ಲಿ ದರ ಏರಿಕೆ ಜನಸಾಮಾನ್ಯರಲ್ಲಿ ಆತಂಕ ಮೂಡಿಸಿದೆ. ಯುದ್ಧ ಪರಿಸ್ಥಿತಿ ಮುಂದುವರಿದರೆ ಬೆಲೆಗಳು ಇನ್ನಷ್ಟು ಏರಿಕೆಯಾಗುವ ಸಾಧ್ಯತೆಯಿದೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...